1 ULB ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ. BSB BSB: After this, Jesus traveled throughout Galilee. He did not want to travel in Judea, because the Jews there were trying to kill Him.
2 ULB ಈಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು, BSB BSB: However, the Jewish Feast of Tabernacles was near.
3 ULB ಆದುದರಿಂದ ಆತನ ಸಹೋದರರು ಆತನಿಗೆ <<ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು. BSB BSB: So Jesus’ brothers said to Him, “Leave here and go to Judea, so that Your disciples there may see the works You are doing.
4 ULB ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ>> ಎಂದು ಹೇಳಿದರು. BSB BSB: For no one who wants to be known publicly acts in secret. Since You are doing these things, show Yourself to the world.”
6 ULB ಅದಕ್ಕೆ ಯೇಸು ಅವರಿಗೆ, <<ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. BSB BSB: Therefore Jesus told them, “Although your time is always at hand, My time has not yet come.
7 ULB ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ. BSB BSB: The world cannot hate you, but it hates Me, because I testify that its works are evil.
8 ULB ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ>> ಎಂದು ಹೇಳಿದನು. BSB BSB: Go up to the feast on your own. I am not going up to this feast, because My time has not yet come.”
9 ULB ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು. BSB BSB: Having said this, Jesus remained in Galilee.
10 ULB ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು. BSB BSB: But after His brothers had gone up to the feast, He also went—not publicly, but in secret.
11 ULB ಆ ಹಬ್ಬದಲ್ಲಿ ಯೆಹೂದ್ಯರು, <<ಆ ಮನುಷ್ಯನು ಎಲ್ಲಿ?>> ಎಂದು ಹುಡುಕುತ್ತಿದ್ದರು. BSB BSB: So the Jews were looking for Him at the feast and asking, “Where is He?”
12 ULB ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು <<ಆತನು ಒಳ್ಳೆಯ ಮನುಷ್ಯನು>> ಎಂದರು, ಇನ್ನು ಕೆಲವರು <<ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ>> ಎಂದರು. BSB BSB: Many in the crowds were whispering about Him. Some said, “He is a good man.” But others replied, “No, He deceives the people.”
13 ULB ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ. BSB BSB: Yet no one would speak publicly about Him for fear of the Jews.
14 ULB ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸ ತೊಡಗಿದನು. BSB BSB: About halfway through the feast, Jesus went up to the temple courts and began to teach.
16 ULB ಅದಕ್ಕೆ ಯೇಸು <<ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ. BSB BSB: “My teaching is not My own,” Jesus replied. “It comes from Him who sent Me.
17 ULB ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು. BSB BSB: If anyone desires to do His will, he will know whether My teaching is from God or whether I speak on My own.
18 ULB ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ. BSB BSB: He who speaks on his own authority seeks his own glory, but He who seeks the glory of the One who sent Him is a man of truth; in Him there is no falsehood.
19 ULB ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?>> ಎಂದು ಕೇಳಿದನು. BSB BSB: Has not Moses given you the law? Yet not one of you keeps it. Why are you trying to kill Me?”
20 ULB ಅದಕ್ಕೆ ಆ ಜನರು, <<ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?>> ಎಂದರು. BSB BSB: “You have a demon,” the crowd replied. “Who is trying to kill You?”
21 ULB ಯೇಸು ಅವರಿಗೆ <<ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ. BSB BSB: Jesus answered them, “I did one miracle, and you are all amazed.
22 ULB ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ. BSB BSB: But because Moses gave you circumcision, you circumcise a boy on the Sabbath (not that it is from Moses, but from the patriarchs.)
23 ULB ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ? BSB BSB: If a boy can be circumcised on the Sabbath so that the law of Moses will not be broken, why are you angry with Me for making the whole man well on the Sabbath?
24 ULB ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ>> ಎಂದನು. BSB BSB: Stop judging by outward appearances, and start judging justly.”
25 ULB ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು <<ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ? BSB BSB: Then some of the people of Jerusalem began to say, “Isn’t this the man they are trying to kill?
26 ULB ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ? BSB BSB: Yet here He is, speaking publicly, and they are not saying anything to Him. Have the rulers truly recognized that this is the Christ?
27 ULB ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.>> BSB BSB: But we know where this man is from. When the Christ comes, no one will know where He is from.”
28 ULB ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, <<ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ. BSB BSB: Then Jesus, still teaching in the temple courts, cried out, “You know Me, and you know where I am from. I have not come of My own accord, but He who sent Me is true. You do not know Him,
29 ULB ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು>> ಎಂದು ಕೂಗಿ ಹೇಳಿದನು. BSB BSB: but I know Him, because I am from Him and He sent Me.”
30 ULB ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ. BSB BSB: So they tried to seize Him, but no one laid a hand on Him, because His hour had not yet come.
31 ULB ಜನರಲ್ಲಿ ಅನೇಕರು ಆತನನ್ನು ನಂಬಿ, <<ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?>> ಎಂದು ಹೇಳಿದರು. BSB BSB: Many in the crowd, however, believed in Him and said, “When the Christ comes, will He perform more signs than this man?”
32 ULB ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು. BSB BSB: When the Pharisees heard the crowd whispering these things about Jesus, they and the chief priests sent officers to arrest Him.
33 ULB ಆಗ ಯೇಸು ಅವರಿಗೆ <<ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ. BSB BSB: So Jesus said, “I am with you only a little while longer, and then I am going to the One who sent Me.
34 ULB ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ>> ಎಂದನು. BSB BSB: You will look for Me, but you will not find Me; and where I am, you cannot come.”
35 ULB ಅದಕ್ಕೆ ಯೆಹೂದ್ಯರು <<ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ? BSB BSB: At this, the Jews said to one another, “Where does He intend to go that we will not find Him? Will He go where the Jews are dispersed among the Greeks, and teach the Greeks?
36 ULB <ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ> ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?>> ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. BSB BSB: What does He mean by saying, ‘You will look for Me, but you will not find Me,’ and, ‘Where I am, you cannot come’?”
37 ULB ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು <<ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. BSB BSB: On the last and greatest day of the feast, Jesus stood up and called out in a loud voice, “If anyone is thirsty, let him come to Me and drink.
38 ULB ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು>> ಎಂದು ಕೂಗಿ ಹೇಳಿದನು. BSB BSB: Whoever believes in Me, as the Scripture has said: ‘Streams of living water will flow from within him.’”
39 ULB ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ. BSB BSB: He was speaking about the Spirit, whom those who believed in Him were later to receive. For the Spirit had not yet been given, because Jesus had not yet been glorified.
40 ULB ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ <<ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ>> ಎಂದರು. BSB BSB: On hearing these words, some of the people said, “This is truly the Prophet.”
41 ULB ಕೆಲವರು, <<ಈತನು ಕ್ರಿಸ್ತನು>> ಎಂದರು, ಆದರೆ ಇನ್ನೂ ಕೆಲವರು <<ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ? BSB BSB: Others declared, “This is the Christ.” But still others asked, “How can the Christ come from Galilee?
42 ULB ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?>> ಅಂದರು. BSB BSB: Doesn’t the Scripture say that the Christ will come from the line of David and from Bethlehem, the village where David lived?”
43 ULB ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು. BSB BSB: So there was division in the crowd because of Jesus.
44 ULB ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ. BSB BSB: Some of them wanted to seize Him, but no one laid a hand on Him.
45 ULB ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, <<ನೀವು ಏಕೆ ಆತನನ್ನು ಕರೆತರಲಿಲ್ಲ?>> ಎಂದು ಅವರನ್ನು ಕೇಳಿದ್ದಕ್ಕೆ, BSB BSB: Then the officers returned to the chief priests and Pharisees, who asked them, “Why didn’t you bring Him in?”
46 ULB ಕಾವಲುಗಾರರು <<ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ>> ಎಂದು ಉತ್ತರ ಕೊಟ್ಟರು. BSB BSB: “Never has anyone spoken like this man!” the officers answered.
47 ULB ಆಗ ಫರಿಸಾಯರು ಅವರಿಗೆ <<ನೀವೂ ಸಹ ಆತನ ಮಾತಿಗೆ ಮರುಳಾದೀರಾ? BSB BSB: “Have you also been deceived?” replied the Pharisees.
48 ULB ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ? BSB BSB: “Have any of the rulers or Pharisees believed in Him?
49 ULB ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ>> ಎಂದು ಹೇಳಿದರು. BSB BSB: But this crowd that does not know the law—they are under a curse.”
50 ULB ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು, BSB BSB: Nicodemus, who had gone to Jesus earlier and who himself was one of them, asked,
51 ULB ಅವನು ಅವರಿಗೆ <<ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?>> ಎಂದು ಹೇಳಿದ್ದಕ್ಕೆ, BSB BSB: “Does our law convict a man without first hearing from him to determine what he has done?”
52 ULB ಅವರು ಅವನಿಗೆ <<ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,>> ಎಂದರು. BSB BSB: “Aren’t you also from Galilee?” they replied. “Look into it, and you will see that no prophet comes out of Galilee.”
Select verses for actions: Enter goes to them and Escape comes back.