1 ULB ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು: BSB BSB: From inside the fish, Jonah prayed to the LORD his God,
2 ULB <<ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. BSB BSB: saying: “In my distress I called to the LORD, and He answered me. From the belly of Sheol I called for help, and You heard my voice.
3 ULB ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು BSB BSB: For You cast me into the deep, into the heart of the seas, and the current swirled about me; all Your breakers and waves swept over me.
4 ULB <ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?> BSB BSB: At this, I said, ‘I have been banished from Your sight; yet I will look once more toward Your holy temple.’
5 ULB ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು. BSB BSB: The waters engulfed me to take my life; the watery depths closed around me; the seaweed wrapped around my head.
6 ULB ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ. BSB BSB: To the roots of the mountains I descended; the earth beneath me barred me in forever! But You raised my life from the pit, O LORD my God!
7 ULB <<ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು. BSB BSB: As my life was fading away, I remembered the LORD. My prayer went up to You, to Your holy temple.
8 ULB <<ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು. BSB BSB: Those who cling to worthless idols forsake His loving devotion.
9 ULB ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.>> BSB BSB: But I, with the voice of thanksgiving, will sacrifice to You. I will fulfill what I have vowed. Salvation is from the LORD!”
10 ULB ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು. BSB BSB: And the LORD commanded the fish, and it vomited Jonah onto dry land.