1 ULB ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು. BSB BSB: Jonah, however, was greatly displeased, and he became angry.
2 ULB ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, <<ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು. BSB BSB: So he prayed to the LORD, saying, “O LORD, is this not what I said while I was still in my own country? This is why I was so quick to flee toward Tarshish. I knew that You are a gracious and compassionate God, slow to anger, abounding in loving devotion—One who relents from sending disaster.
3 ULB ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು>> ಎಂದು ವಿಜ್ಞಾಪಿಸಿಕೊಂಡನು. BSB BSB: And now, O LORD, please take my life from me, for it is better for me to die than to live.”
4 ULB ಅದಕ್ಕೆ ಯೆಹೋವನು, <<ನೀನು ಸಿಟ್ಟುಗೊಳ್ಳುವುದು ಸರಿಯೋ?>> ಎಂದು ಕೇಳಿದನು. BSB BSB: But the LORD replied, “Have you any right to be angry?”
5 ULB ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು. BSB BSB: Then Jonah left the city and sat down east of it, where he made himself a shelter and sat in its shade to see what would happen to the city.
7 ULB ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು. BSB BSB: When dawn came the next day, God appointed a worm that attacked the plant so that it withered.
8 ULB ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ <<ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು>> ಎಂದು ಸಾಯಲು ಬಯಸಿದನು. BSB BSB: As the sun was rising, God appointed a scorching east wind, and the sun beat down on Jonah’s head so that he grew faint and wished to die, saying, “It is better for me to die than to live.”
9 ULB ಆಗ ದೇವರು ಯೋನನಿಗೆ, <<ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?>> ಎಂದು ಕೇಳಲು ಯೋನನು <<ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ>> ಎಂದು ಉತ್ತರಕೊಟ್ಟನು. BSB BSB: Then God asked Jonah, “Have you any right to be angry about the plant?” “I do,” he replied. “I am angry enough to die!”