1 ULB ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು, BSB BSB: Now the family heads of the Levites approached Eleazar the priest, Joshua son of Nun, and the heads of the other tribes of Israel
2 ULB <<ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?>> ಅನ್ನಲು BSB BSB: at Shiloh in the land of Canaan and said to them, “The LORD commanded through Moses that we be given cities in which to live, together with pasturelands for our livestock.”
3 ULB ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು. BSB BSB: So by the command of the LORD, the Israelites gave the Levites these cities and their pasturelands out of their own inheritance:
4 ULB ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು. BSB BSB: The first lot came out for the Kohathite clans. The Levites who were descendants of Aaron the priest received thirteen cities by lot from the tribes of Judah, Simeon, and Benjamin.
5 ULB ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು. BSB BSB: The remaining descendants of Kohath received ten cities by lot from the tribes of Ephraim, Dan, and the half-tribe of Manasseh.
6 ULB ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು. BSB BSB: The descendants of Gershon received thirteen cities by lot from the tribes of Issachar, Asher, Naphtali, and the half-tribe of Manasseh in Bashan.
7 ULB ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು BSB BSB: And the descendants of Merari received twelve cities from the tribes of Reuben, Gad, and Zebulun.
8 ULB ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು. BSB BSB: So the Israelites allotted to the Levites these cities, together with their pasturelands, as the LORD had commanded through Moses.
9 ULB ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು. BSB BSB: From the tribes of Judah and Simeon, they designated these cities by name
10 ULB ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು. BSB BSB: to the descendants of Aaron from the Kohathite clans of the Levites, because the first lot fell to them:
11 ULB ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು. BSB BSB: They gave them Kiriath-arba (that is, Hebron), with its surrounding pasturelands, in the hill country of Judah. (Arba was the father of Anak.)
12 ULB ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. BSB BSB: But they had given the fields and villages around the city to Caleb son of Jephunneh as his possession.
13 ULB ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ, BSB BSB: So to the descendants of Aaron the priest they gave these cities, together with their pasturelands: Hebron, a city of refuge for the manslayer, Libnah,
14 ULB ಯತ್ತೀರ್, ಎಷ್ಟೆಮೋಹ, BSB BSB: Jattir, Eshtemoa,
15 ULB ಹೋಲೋನ್, ದೆಬೀರ್, BSB BSB: Holon, Debir,
16 ULB ಅಯಿನ್, ಯುಟ್ಟಾ, ಬೇತ್ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು BSB BSB: Ain, Juttah, and Beth-shemesh—nine cities from these two tribes, together with their pasturelands.
17 ULB ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ, BSB BSB: And from the tribe of Benjamin they gave them Gibeon, Geba,
18 ULB ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು. BSB BSB: Anathoth, and Almon—four cities, together with their pasturelands.
19 ULB ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. BSB BSB: In all, thirteen cities, together with their pasturelands, were given to the priests, the descendants of Aaron.
20 ULB ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ BSB BSB: The remaining Kohathite clans of the Levites were allotted these cities: From the tribe of Ephraim
21 ULB ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, BSB BSB: they were given Shechem in the hill country of Ephraim (a city of refuge for the manslayer), Gezer,
22 ULB ಗೆಜೆರ್, ಕಿಬ್ಚೈಮ್ ಹಾಗೂ ಬೇತ್ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, BSB BSB: Kibzaim, and Beth-horon—four cities, together with their pasturelands.
23 ULB ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್, BSB BSB: From the tribe of Dan they were given Elteke, Gibbethon,
24 ULB ಅಯ್ಯಾಲೋನ್, ಗತ್ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, BSB BSB: Aijalon, and Gath-rimmon—four cities, together with their pasturelands.
25 ULB ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು. BSB BSB: And from the half-tribe of Manasseh they were given Taanach and Gath-rimmon—two cities, together with their pasturelands.
26 ULB ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು. BSB BSB: In all, ten cities, together with their pasturelands, were given to the rest of the Kohathite clans.
27 ULB ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು; BSB BSB: This is what the Levite clans of the Gershonites were given: From the half-tribe of Manasseh they were given Golan in Bashan, a city of refuge for the manslayer, and Beeshterah—two cities, together with their pasturelands.
28 ULB ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್, BSB BSB: From the tribe of Issachar they were given Kishion, Daberath,
29 ULB ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು; BSB BSB: Jarmuth, and En-gannim—four cities, together with their pasturelands.
30 ULB ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್, BSB BSB: From the tribe of Asher they were given Mishal, Abdon,
31 ULB ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು; BSB BSB: Helkath, and Rehob—four cities, together with their pasturelands.
32 ULB ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು. BSB BSB: And from the tribe of Naphtali they were given Kedesh in Galilee (a city of refuge for the manslayer), Hammoth-dor, and Kartan—three cities, together with their pasturelands.
33 ULB ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. BSB BSB: In all, thirteen cities, together with their pasturelands, were given to the Gershonite clans.
34 ULB ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್, BSB BSB: This is what the Merarite clan (the rest of the Levites) were given: From the tribe of Zebulun they were given Jokneam, Kartah,
35 ULB ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು. BSB BSB: Dimnah, and Nahalal—four cities, together with their pasturelands.
36 ULB ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ, BSB BSB: From the tribe of Reuben they were given Bezer, Jahaz,
37 ULB ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು; BSB BSB: Kedemoth, and Mephaath—four cities, together with their pasturelands.
38 ULB ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್, BSB BSB: And from the tribe of Gad they were given Ramoth in Gilead, a city of refuge for the manslayer, Mahanaim,
39 ULB ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು. BSB BSB: Heshbon, and Jazer—four cities in all, together with their pasturelands.
40 ULB ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು. BSB BSB: In all, twelve cities were allotted to the clans of Merari, the remaining Levite clans.
41 ULB ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು. BSB BSB: For the Levites, then, there were forty-eight cities in all, together with their pasturelands, within the territory of the Israelites.
42 ULB ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು. BSB BSB: Each of these cities had its own surrounding pasturelands; this was true for all the cities.
43 ULB ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು. BSB BSB: Thus the LORD gave Israel all the land He had sworn to give their fathers, and they took possession of it and settled in it.
44 ULB ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು. BSB BSB: And the LORD gave them rest on every side, just as He had sworn to their fathers. None of their enemies could stand against them, for the LORD delivered all their enemies into their hand.
45 ULB ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು. BSB BSB: Not one of all the LORD’s good promises to the house of Israel had failed; everything was fulfilled.
Select verses for actions: Enter goes to them and Escape comes back.