1 ULB ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು. BSB BSB: Early the next morning Joshua got up and left Shittim with all the Israelites. They went as far as the Jordan, where they camped before crossing over.
2 ULB ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ BSB BSB: After three days the officers went through the camp
3 ULB <<ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ. BSB BSB: and commanded the people: “When you see the ark of the covenant of the LORD your God being carried by the Levitical priests, you are to set out from your positions and follow it.
4 ULB ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ>> ಅಂದರು. BSB BSB: But keep a distance of about two thousand cubits between yourselves and the ark. Do not go near it, so that you can see the way to go, since you have never traveled this way before.”
5 ULB ಇದಲ್ಲದೆ ಯೆಹೋಶುವನು ಜನರಿಗೆ <<ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು>> ಎಂದು ಹೇಳಿದನು. BSB BSB: Then Joshua told the people, “Consecrate yourselves, for tomorrow the LORD will do wonders among you.”
6 ULB ನಂತರ ಯೆಹೋಶುವನು ಯಾಜಕರಿಗೆ <<ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ>> ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು. BSB BSB: And he said to the priests, “Take the ark of the covenant and go on ahead of the people.” So they carried the ark of the covenant and went ahead of them.
7 ULB ಆಗ ಯೆಹೋವನು ಯೆಹೋಶುವನಿಗೆ <<ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು. BSB BSB: Now the LORD said to Joshua, “Today I will begin to exalt you in the sight of all Israel, so they may know that I am with you just as I was with Moses.
8 ULB ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು>> ಎಂದು ಹೇಳಿದನು. BSB BSB: Command the priests carrying the ark of the covenant: ‘When you reach the edge of the waters, stand in the Jordan.’”
9 ULB ಆಗ ಯೆಹೋಶುವನು ಇಸ್ರಾಯೇಲ್ಯರಿಗೆ <<ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ>> ಎಂದು ಹೇಳಿ, BSB BSB: So Joshua told the Israelites, “Come here and listen to the words of the LORD your God.”
10 ULB <<ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು. BSB BSB: He continued, “This is how you will know that the living God is among you and that He will surely drive out before you the Canaanites, Hittites, Hivites, Perizzites, Girgashites, Amorites, and Jebusites.
11 ULB ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು. BSB BSB: Behold, the ark of the covenant of the Lord of all the earth will go ahead of you into the Jordan.
12 ULB ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು. BSB BSB: Now choose twelve men from the tribes of Israel, one from each tribe.
13 ULB ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು>> ಎಂದು ತಿಳಿಸಿದನು. BSB BSB: When the feet of the priests who carry the ark of the LORD—the Lord of all the earth—touch down in the waters of the Jordan, its flowing waters will be cut off and will stand up in a heap.”
14 ULB ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು. BSB BSB: So when the people broke camp to cross the Jordan, the priests carried the ark of the covenant ahead of them.
15 ULB ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು. BSB BSB: Now the Jordan overflows its banks throughout the harvest season. But as soon as the priests carrying the ark reached the Jordan and their feet touched the water’s edge,
16 ULB ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು. BSB BSB: the flowing water stood still. It backed up as far upstream as Adam, a city in the area of Zarethan, while the water flowing toward the Sea of the Arabah (the Salt Sea) was completely cut off. So the people crossed over opposite Jericho.
17 ULB ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು. BSB BSB: The priests carrying the ark of the covenant of the LORD stood firm on dry ground in the middle of the Jordan, while all Israel crossed over the dry ground, until the entire nation had crossed the Jordan.
Select verses for actions: Enter goes to them and Escape comes back.