1 ULB ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, <<ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. <ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ, BSB BSB: Now the angel of the LORD went up from Gilgal to Bochim and said, “I brought you up out of Egypt and led you into the land that I had promised to your fathers, and I said, ‘I will never break My covenant with you,
2 ULB ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು> ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ? BSB BSB: and you are not to make a covenant with the people of this land, but you shall tear down their altars.’ Yet you have not obeyed My voice. What is this you have done?
3 ULB <ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು> ಎಂದು ನಾನು ಮೊದಲೇ ಹೇಳಿದ್ದೆನಲ್ಲಾ>> ಅಂದನು. BSB BSB: So now I tell you that I will not drive out these people before you; they will be thorns in your sides, and their gods will be a snare to you.”
4 ULB ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. BSB BSB: When the angel of the LORD had spoken these words to all the Israelites, the people lifted up their voices and wept.
5 ULB ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು. BSB BSB: So they called that place Bochim and offered sacrifices there to the LORD.
6 ULB ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು. BSB BSB: After Joshua had dismissed the people, the Israelites went out to take possession of the land, each to his own inheritance.
7 ULB ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು. BSB BSB: And the people served the LORD throughout the days of Joshua and of the elders who outlived him, who had seen all the great works that the LORD had done for Israel.
8 ULB ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರ್ಷದವನಾಗಿ ಮರಣಹೊಂದಿದನು. BSB BSB: And Joshua son of Nun, the servant of the LORD, died at the age of 110.
9 ULB ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ. BSB BSB: They buried him in the land of his inheritance, at Timnath-heres in the hill country of Ephraim, north of Mount Gaash.
10 ULB ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು. BSB BSB: After that whole generation had also been gathered to their fathers, another generation rose up who did not know the LORD or the works that He had done for Israel.
11 ULB ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು. BSB BSB: And the Israelites did evil in the sight of the LORD and served the Baals.
12 ULB ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು. BSB BSB: Thus they forsook the LORD, the God of their fathers, who had brought them out of the land of Egypt, and they followed after various gods of the peoples around them. They bowed down to them and provoked the LORD to anger,
13 ULB ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು. BSB BSB: for they forsook Him and served Baal and the Ashtoreths.
14 ULB ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು. BSB BSB: Then the anger of the LORD burned against Israel, and He delivered them into the hands of those who plundered them. He sold them into the hands of their enemies all around, whom they were no longer able to resist.
15 ULB ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು. BSB BSB: Wherever Israel marched out, the hand of the LORD was against them to bring calamity, just as He had sworn to them. So they were greatly distressed.
16 ULB ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು. BSB BSB: Then the LORD raised up judges, who saved them from the hands of those who plundered them.
17 ULB ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ. BSB BSB: Israel, however, did not listen to their judges. Instead, they prostituted themselves with other gods and bowed down to them. They quickly turned from the way of their fathers, who had walked in obedience to the LORD’s commandments; they did not do as their fathers had done.
18 ULB ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು. BSB BSB: Whenever the LORD raised up a judge for the Israelites, He was with that judge and saved them from the hands of their enemies while the judge was still alive; for the LORD was moved to pity by their groaning under those who oppressed them and afflicted them.
19 ULB ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ. BSB BSB: But when the judge died, the Israelites became even more corrupt than their fathers, going after other gods to serve them and bow down to them. They would not give up their evil practices and stubborn ways.
20 ULB ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, <<ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ. BSB BSB: So the anger of the LORD burned against Israel, and He said, “Because this nation has transgressed the covenant I laid down for their fathers and has not heeded My voice,
21 ULB ಹೀಗಿರುವುದರಿಂದ ಯೆಹೋಶುವನು ಸಾಯುವ ಮೊದಲು ಹೊರಡಿಸದೆ ಬಿಟ್ಟಿದ ಜನಾಂಗಗಳಲ್ಲಿ ನಾನು ಒಂದನ್ನು ಹೊರಡಿಸಿಬಿಡುವುದಿಲ್ಲ. BSB BSB: I will no longer drive out before them any of the nations Joshua left when he died.
22 ULB ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು>> ಅಂದನು. BSB BSB: In this way I will test whether Israel will keep the way of the LORD by walking in it as their fathers did.”
23 ULB ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ. BSB BSB: That is why the LORD had left those nations in place and had not driven them out immediately by delivering them into the hand of Joshua.
Select verses for actions: Enter goes to them and Escape comes back.