1 ULB ಅನಂತರ ಎಫ್ರಾಯೀಮ್ಯರು ಗಿದ್ಯೋನನಿಗೆ, <<ನೀನು ಹೀಗೆ ಯಾಕೆ ಮಾಡಿದಿ? ಮಿದ್ಯಾನ್ಯರೊಡನೆ ಯುದ್ಧಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?>> ಎಂದು ಉಗ್ರಕೋಪದಿಂದ ಜಗಳವಾಡಿದರು. BSB BSB: Then the men of Ephraim said to Gideon, “Why have you done this to us? Why did you fail to call us when you went to fight against Midian?” And they contended with him violently.
2 ULB ಆಗ ಅವನು ಅವರಿಗೆ, <<ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ? BSB BSB: But Gideon answered them, “Now what have I accomplished compared to you? Are not the gleanings of Ephraim better than the grape harvest of Abiezer?
3 ULB ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?>> ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು. BSB BSB: God has delivered Oreb and Zeeb, the two princes of Midian, into your hand. What was I able to do compared to you?” When he had said this, their anger against him subsided.
4 ULB ಗಿದ್ಯೋನನು ಅವನ ಸಂಗಡ ಇದ್ದ ಮುನ್ನೂರು ಜನರು ಬಹಳ ದಣಿದವರಾಗಿದ್ದರೂ, ಹಿಂದಟ್ಟುತ್ತಾ ಯೊರ್ದನನ್ನು ದಾಟಿ ಸುಖೋತಿಗೆ ಬಂದರು. BSB BSB: Then Gideon and his three hundred men came to the Jordan and crossed it, exhausted yet still in pursuit.
5 ULB ಗಿದ್ಯೋನನು ಸುಖೋತಿನವರಿಗೆ, <<ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ>> ಅಂದನು. BSB BSB: So Gideon said to the men of Succoth, “Please give my troops some bread, for they are exhausted, and I am still pursuing Zebah and Zalmunna, the kings of Midian.”
6 ULB ಆದರೆ ಸುಖೋತಿನ ಮುಖಂಡರು ಅವನಿಗೆ, <<ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?>> ಎಂದು ಉತ್ತರಕೊಟ್ಟರು. BSB BSB: But the leaders of Succoth asked, “Are the hands of Zebah and Zalmunna already in your possession, that we should give bread to your army?”
7 ULB ಆಗ ಗಿದ್ಯೋನನು ಅವರಿಗೆ, <<ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು>> ಎಂದು ಹೇಳಿದನು. BSB BSB: “Very well,” Gideon replied, “when the LORD has delivered Zebah and Zalmunna into my hand, I will tear your flesh with the thorns and briers of the wilderness!”
8 ULB ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು. BSB BSB: From there he went up to Penuel and asked the same from them, but the men of Penuel gave the same response as the men of Succoth.
9 ULB ಗಿದ್ಯೋನನು ಅವರಿಗೆ, <<ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು>> ಅಂದನು. BSB BSB: So Gideon told the men of Penuel, “When I return in triumph, I will tear down this tower!”
10 ULB ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ. BSB BSB: Now Zebah and Zalmunna were in Karkor with their army of about fifteen thousand men—all that were left of the armies of the people of the east. A hundred and twenty thousand swordsmen had already fallen.
11 ULB ಗಿದ್ಯೋನನು ಕಾಡುಗೊಲ್ಲರ ಪ್ರದೇಶಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳುಕೊಂಡಿದ್ದ ಆ ಪಾಳೆಯದ ಮೇಲೆ ಬಿದ್ದನು. BSB BSB: And Gideon went up by way of the caravan route east of Nobah and Jogbehah, and he attacked their army, taking them by surprise.
12 ULB ಜೆಬಹನೂ ಮತ್ತು ಚಲ್ಮುನ್ನನೂ ಓಡಿಹೋಗಲಾಗಿ, ಅವರನ್ನು ಹಿಂದಟ್ಟಿ ಹಿಡಿದು, ಅವರ ಸೈನ್ಯವನ್ನು ಚದರಿಸಿಬಿಟ್ಟನು. BSB BSB: When Zebah and Zalmunna fled, Gideon pursued and captured these two kings of Midian, routing their entire army.
13 ULB ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು, BSB BSB: After this, Gideon son of Joash returned from the battle along the Ascent of Heres.
14 ULB ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು. BSB BSB: There he captured a young man of Succoth and interrogated him. The young man wrote down for him the names of the seventy-seven leaders and elders of Succoth.
15 ULB ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, <<ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ; BSB BSB: And Gideon went to the men of Succoth and said, “Here are Zebah and Zalmunna, about whom you taunted me, saying, ‘Are the hands of Zebah and Zalmunna already in your possession, that we should give bread to your weary men?’”
16 ULB ನೋಡಿರಿ, ಅವರು ಇಲ್ಲಿರುತ್ತಾರೆ>> ಎಂದು ಹೇಳಿ ಊರಿನ ಹಿರಿಯರನ್ನೂ, ಮುಖಂಡರನ್ನೂ, ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿಕಲಿಸಿದನು. BSB BSB: Then he took the elders of the city, and using the thorns and briers of the wilderness, he disciplined the men of Succoth.
17 ULB ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು. BSB BSB: He also pulled down the tower of Penuel and killed the men of the city.
18 ULB ಅವನು ಜೆಬಹ, ಚಲ್ಮುನ್ನರನ್ನು, <<ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?>> ಎಂದು ಕೇಳಲಾಗಿ ಅವರು ಅವನಿಗೆ, <<ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು>> ಎಂದು ಉತ್ತರಕೊಟ್ಟರು. BSB BSB: Next, Gideon asked Zebah and Zalmunna, “What kind of men did you kill at Tabor?” “Men like you,” they answered, “each one resembling the son of a king.”
19 ULB ಆಗ ಅವನು, <<ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ>> ಎಂದು ಹೇಳಿ BSB BSB: “They were my brothers,” Gideon replied, “the sons of my mother! As surely as the LORD lives, if you had let them live, I would not kill you.”
20 ULB ತನ್ನ ಹಿರೀ ಮಗನಾದ ಎತೆರನಿಗೆ, <<ನೀನೆದ್ದು ಇವರನ್ನು ಕೊಂದುಹಾಕು>> ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ. BSB BSB: So he said to Jether, his firstborn, “Get up and kill them.” But the young man did not draw his sword; he was fearful because he was still a youth.
21 ULB ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, <<ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ>> ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು. BSB BSB: Then Zebah and Zalmunna said, “Get up and kill us yourself, for as the man is, so is his strength.” So Gideon got up and killed Zebah and Zalmunna, and he took the crescent ornaments from the necks of their camels.
22 ULB ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, <<ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು>> ಎಂದರು. BSB BSB: Then the Israelites said to Gideon, “Rule over us—you and your son and grandson—for you have saved us from the hand of Midian.”
23 ULB ಅವನು ಅವರಿಗೆ, <<ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಯೆಹೋವನೇ ನಿಮ್ಮ ಅರಸನಾಗಿರುವನು. BSB BSB: But Gideon replied, “I will not rule over you, nor will my son. The LORD shall rule over you.”
24 ULB ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ>> ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು. BSB BSB: Then he added, “Let me make a request of you, that each of you give me an earring from his plunder.” (For the enemies had gold earrings because they were Ishmaelites.)
25 ULB ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, <<ನಾವು ಸಂತೋಷದಿಂದ ಕೊಡುವೆವು>> ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು. BSB BSB: “We will give them gladly,” they replied. So they spread out a garment, and each man threw an earring from his plunder onto it.
26 ULB ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು. BSB BSB: The weight of the gold earrings he had requested was 1,700 shekels, in addition to the crescent ornaments, the pendants, the purple garments of the kings of Midian, and the chains from the necks of their camels.
27 ULB ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು. BSB BSB: From all this Gideon made an ephod, which he placed in Ophrah, his hometown. But soon all Israel prostituted themselves by worshiping it there, and it became a snare to Gideon and his household.
28 ULB ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು. BSB BSB: In this way Midian was subdued before the Israelites and did not raise its head again. So the land had rest for forty years in the days of Gideon,
29 ULB ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು. BSB BSB: and he—Jerubbaal son of Joash—returned home and settled down.
30 ULB ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು. BSB BSB: Gideon had seventy sons of his own, since he had many wives.
31 ULB ಅವನಿಗೆ ಶೆಕೆಮಿನಲ್ಲಿದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗನು ಹುಟ್ಟಲು, ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು. BSB BSB: His concubine, who dwelt in Shechem, also bore him a son, and he named him Abimelech.
32 ULB ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು. BSB BSB: Later, Gideon son of Joash died at a ripe old age and was buried in the tomb of his father Joash in Ophrah of the Abiezrites.
33 ULB ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು. BSB BSB: And as soon as Gideon was dead, the Israelites turned and prostituted themselves with the Baals, and they set up Baal-berith as their god.
34 ULB ಸುತ್ತಣ ಎಲ್ಲಾ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಯೆಹೋವನನ್ನು ಮರೆತುಬಿಟ್ಟರು. BSB BSB: The Israelites failed to remember the LORD their God who had delivered them from the hands of all their enemies on every side.
35 ULB ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಅವರು ನೆನಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ. BSB BSB: They did not show kindness to the house of Jerubbaal (that is, Gideon) for all the good things he had done for Israel.
Select verses for actions: Enter goes to them and Escape comes back.