1 ULB ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ, BSB BSB: Now Abimelech son of Jerubbaal went to his mother’s brothers at Shechem and said to them and to all the clan of his mother,
2 ULB <<ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, <ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?> ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ>> ಅಂದನು. BSB BSB: “Please ask all the leaders of Shechem, ‘Is it better for you that seventy men, all the sons of Jerubbaal, rule over you, or just one man?’ Remember that I am your own flesh and blood.”
3 ULB ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, <<ಇವನು ನಮ್ಮ ಸಹೋದರನಾಗಿದ್ದಾನಲ್ಲಾ>> ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು. BSB BSB: And when his mother’s brothers spoke all these words about him in the presence of all the leaders of Shechem, their hearts were inclined to follow Abimelech, for they said, “He is our brother.”
4 ULB ಮತ್ತು ಅವರು ಬಾಳ್ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ, BSB BSB: So they gave him seventy shekels of silver from the temple of Baal-berith, with which Abimelech hired some worthless and reckless men to follow him.
5 ULB ಅವರ ನಾಯಕನಾಗಿ ಹೊರಟು, ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು, ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು. BSB BSB: He went to his father’s house in Ophrah, and on one stone murdered his seventy brothers, the sons of Jerubbaal. But Jotham, the youngest son of Jerubbaal, survived, because he hid himself.
6 ULB ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು. BSB BSB: Then all the leaders of Shechem and Beth-millo gathered beside the oak at the pillar in Shechem and proceeded to make Abimelech their king.
7 ULB ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, <<ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು>> ಎಂದನು. BSB BSB: When this was reported to Jotham, he climbed to the top of Mount Gerizim, raised his voice, and cried out: “Listen to me, O leaders of Shechem, and may God listen to you.
8 ULB <<ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, <ನೀನು ಬಂದು ನಮಗೆ ಅರಸನಾಗು> ಅಂದವು. BSB BSB: One day the trees set out to anoint a king for themselves. They said to the olive tree, ‘Reign over us.’
9 ULB ಆಗ ಅದು ಅವುಗಳಿಗೆ, <ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?> ಅಂದಿತು. BSB BSB: But the olive tree replied, ‘Should I stop giving my oil that honors both God and man, to hold sway over the trees?’
10 ULB ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ, <ನೀನು ಬಂದು ನಮಗೆ ಅರಸನಾಗು> ಎನ್ನಲು BSB BSB: Then the trees said to the fig tree, ‘Come and reign over us.’
11 ULB ಅದು, <ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?> ಎಂದಿತು. BSB BSB: But the fig tree replied, ‘Should I stop giving my sweetness and my good fruit, to hold sway over the trees?’
12 ULB ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ, <ನೀನು ಬಂದು ನಮಗೆ ಅರಸನಾಗು> ಎನ್ನಲು BSB BSB: Then the trees said to the grapevine, ‘Come and reign over us.’
13 ULB ಅದು ಅವುಗಳಿಗೆ, <ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?> ಎಂದಿತು. BSB BSB: But the grapevine replied, ‘Should I stop giving my wine that cheers both God and man, to hold sway over the trees?’
14 ULB ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, <ನೀನು ಬಂದು ನಮಗೆ ಅರಸನಾಗು> ಅನ್ನಲು BSB BSB: Finally all the trees said to the thornbush, ‘Come and reign over us.’
15 ULB ಅದು, <ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು> ಎಂದಿತು. BSB BSB: But the thornbush replied, ‘If you really are anointing me as king over you, come and find refuge in my shade. But if not, may fire come out of the thornbush and consume the cedars of Lebanon.’
16 ULB <<ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ? BSB BSB: Now if you have acted faithfully and honestly in making Abimelech king, if you have done well by Jerubbaal and his family, and if you have done to him as he deserves—
17 ULB ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ. BSB BSB: for my father fought for you and risked his life to deliver you from the hand of Midian,
18 ULB ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ, ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ. BSB BSB: but you have risen up against my father’s house this day and killed his seventy sons on a single stone, and you have made Abimelech, the son of his maidservant, king over the leaders of Shechem because he is your brother—
19 ULB ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ. BSB BSB: if you have acted faithfully and honestly toward Jerubbaal and his house this day, then may you rejoice in Abimelech, and he in you.
20 ULB ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ>> ಎಂದನು. BSB BSB: But if not, may fire come from Abimelech and consume the leaders of Shechem and Beth-millo, and may fire come from the leaders of Shechem and Beth-millo and consume Abimelech.”
21 ULB ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು. BSB BSB: Then Jotham ran away, escaping to Beer, and he lived there for fear of his brother Abimelech.
22 ULB ಅಬೀಮೆಲೆಕನು ಇಸ್ರಾಯೇಲರನ್ನು ಮೂರು ವರ್ಷ ಆಳಿದ ನಂತರ BSB BSB: After Abimelech had reigned over Israel for three years,
23 ULB ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು. BSB BSB: God sent a spirit of animosity between Abimelech and the leaders of Shechem and caused them to treat Abimelech deceitfully,
24 ULB ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು. BSB BSB: in order that the crime against the seventy sons of Jerubbaal might come to justice and their blood be avenged on their brother Abimelech and on the leaders of Shechem, who had helped him murder his brothers.
25 ULB ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು. BSB BSB: The leaders of Shechem set up an ambush against Abimelech on the hilltops, and they robbed all who passed by them on the road. So this was reported to Abimelech.
26 ULB ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು. BSB BSB: Meanwhile, Gaal son of Ebed came with his brothers and crossed into Shechem, and the leaders of Shechem put their confidence in him.
27 ULB ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು. BSB BSB: And after they had gone out into the fields, gathered grapes from their vineyards, and trodden them, they held a festival and went into the house of their god; and as they ate and drank, they cursed Abimelech.
28 ULB ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, <<ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ. BSB BSB: Then Gaal son of Ebed said, “Who is Abimelech, and who is Shechem, that we should serve him? Is he not the son of Jerubbaal, and is not Zebul his officer? You are to serve the men of Hamor, the father of Shechem. Why should we serve Abimelech?
29 ULB ಈ ಜನರ ಮೇಲೆ ನನಗೆ ಅಧಿಕಾರವಿದ್ದಿದ್ದರೆ ಅಬೀಮೆಲೆಕನನ್ನು ಓಡಿಸಿಬಿಡುತ್ತಿದ್ದೆನು>> ಎಂದು ಹೇಳಿ, <<ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ>> ಎಂದು ಕೊಚ್ಚಿಕೊಂಡನು. BSB BSB: If only this people were under my authority, I would remove Abimelech; I would say to him, ‘Muster your army and come out!’”
30 ULB ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ, BSB BSB: When Zebul the governor of the city heard the words of Gaal son of Ebed, he burned with anger.
31 ULB <<ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ. BSB BSB: So he covertly sent messengers to Abimelech to say, “Look, Gaal son of Ebed and his brothers have come to Shechem and are stirring up the city against you.
32 ULB ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ BSB BSB: Now then, tonight you and the people with you are to come and lie in wait in the fields.
33 ULB ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು>> ಎಂದು ಹೇಳಿಸಿದನು. BSB BSB: And in the morning at sunrise, get up and advance against the city. When Gaal and his men come out against you, do to them whatever you are able.”
34 ULB ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು. BSB BSB: So Abimelech and all his troops set out by night and lay in wait against Shechem in four companies.
35 ULB ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು. BSB BSB: Now Gaal son of Ebed went out and stood at the entrance of the city gate just as Abimelech and his men came out from their hiding places.
36 ULB ಗಾಳನು ಅವರನ್ನು ಕಂಡು ಜೆಬುಲನಿಗೆ, <<ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ>> ಎಂದು ಹೇಳಿದನು. ಜೆಬುಲನು ಅವನಿಗೆ, <<ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ>> ಅನ್ನಲು BSB BSB: When Gaal saw the people, he said to Zebul, “Look, people are coming down from the mountains!” But Zebul replied, “The shadows of the mountains look like men to you.”
37 ULB ಅವನು ತಿರುಗಿ, <<ನೋಡು, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ>> ಅಂದನು. BSB BSB: Then Gaal spoke up again, “Look, people are coming down from the center of the land, and one company is coming by way of the Diviners’ Oak.”
38 ULB ಆಗ ಜೆಬುಲನು ಅವನಿಗೆ, <<ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ>> ಎಂದು ಹೇಳಿದನು. BSB BSB: “Where is your gloating now?” Zebul replied. “You said, ‘Who is Abimelech that we should serve him?’ Are these not the people you ridiculed? Go out now and fight them!”
39 ULB ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು. BSB BSB: So Gaal went out before the leaders of Shechem and fought against Abimelech,
40 ULB ಆದರೆ ಅಬೀಮೆಲೆಕನಿಗೆ ಬೆನ್ನು ತೋರಿಸಿ ಓಡಿಹೋಗಲು, ಅವನು ಇವನನ್ನು ಹಿಂದಟ್ಟಿದನು. ಊರುಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು. BSB BSB: but Abimelech pursued him, and Gaal fled before him. And many Shechemites fell wounded all the way to the entrance of the gate.
41 ULB ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಮಾಡಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಓಡಿಸಿಬಿಟ್ಟನು. BSB BSB: Abimelech stayed in Arumah, and Zebul drove Gaal and his brothers out of Shechem.
42 ULB ಮರುದಿನ ಜನರು ಬೈಲಿಗೆ ಹೊರಟು ಬಂದರು; BSB BSB: The next day the people of Shechem went out into the fields, and this was reported to Abimelech.
43 ULB ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು. BSB BSB: So he took his men, divided them into three companies, and lay in wait in the fields. When he saw the people coming out of the city, he rose up against them and attacked them.
44 ULB ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು. BSB BSB: Then Abimelech and the companies with him rushed forward and took their stand at the entrance of the city gate. The other two companies rushed against all who were in the fields and struck them down.
45 ULB ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು. BSB BSB: And all that day Abimelech fought against the city until he had captured it and killed its people. Then he demolished the city and sowed it with salt.
46 ULB ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು. BSB BSB: On hearing of this, all the leaders in the tower of Shechem entered the inner chamber of the temple of El-berith.
47 ULB ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ BSB BSB: And when Abimelech was told that all the leaders in the tower of Shechem were gathered there,
48 ULB ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, <<ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ>> ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು BSB BSB: he and all his men went up to Mount Zalmon. Abimelech took his axe in his hand and cut a branch from the trees, which he lifted to his shoulder, saying to his men, “Hurry and do what you have seen me do.”
49 ULB ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು. BSB BSB: So each man also cut his own branch and followed Abimelech. Then they piled the branches against the inner chamber and set it on fire above them, killing everyone in the tower of Shechem, about a thousand men and women.
50 ULB ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು. BSB BSB: Then Abimelech went to Thebez, encamped against it, and captured it.
51 ULB ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು. BSB BSB: But there was a strong tower inside the city, and all the men, women, and leaders of the city fled there. They locked themselves in and went up to the roof of the tower.
52 ULB ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು, BSB BSB: When Abimelech came to attack the tower, he approached its entrance to set it on fire.
53 ULB ಒಬ್ಬ ಸ್ತ್ರೀಯು ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ, ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು. BSB BSB: But a woman dropped an upper millstone on Abimelech’s head, crushing his skull.
54 ULB ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, <<ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು>> ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು. BSB BSB: He quickly called his armor-bearer, saying, “Draw your sword and kill me, lest they say of me, ‘A woman killed him.’” So Abimelech’s armor-bearer ran his sword through him, and he died.
55 ULB ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು. BSB BSB: And when the Israelites saw that Abimelech was dead, they all went home.
56 ULB ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು. BSB BSB: In this way God repaid the wickedness that Abimelech had done to his father in murdering his seventy brothers.
57 ULB ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು. BSB BSB: And God also brought all the wickedness of the men of Shechem back upon their own heads. So the curse of Jotham son of Jerubbaal came upon them.
Select verses for actions: Enter goes to them and Escape comes back.