2 ULB ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು. BSB BSB: So fire came out from the presence of the LORD and consumed them, and they died in the presence of the LORD.
3 ULB ಆಗ ಮೋಶೆ ಆರೋನನಿಗೆ, <<ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, <ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ>>> ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು. BSB BSB: Then Moses said to Aaron, “This is what the LORD meant when He said: ‘To those who come near Me I will show My holiness, and in the sight of all the people I will reveal My glory.’” But Aaron remained silent.
4 ULB ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, <<ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು>> ಅಂದನು. BSB BSB: Moses summoned Mishael and Elzaphan, sons of Aaron’s uncle Uzziel, and said to them, “Come here; carry the bodies of your cousins outside the camp, away from the front of the sanctuary.”
5 ULB ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು. BSB BSB: So they came forward and carried them, still in their tunics, outside the camp, as Moses had directed.
6 ULB ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, <<ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ. BSB BSB: Then Moses said to Aaron and his sons Eleazar and Ithamar, “Do not let your hair become disheveled and do not tear your garments, or else you will die, and the LORD will be angry with the whole congregation. But your brothers, the whole house of Israel, may mourn on account of the fire that the LORD has ignited.
7 ULB ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ>> ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು. BSB BSB: You shall not go outside the entrance to the Tent of Meeting, or you will die, for the LORD’s anointing oil is on you.” So they did as Moses instructed.
8 ULB ಯೆಹೋವನು ಆರೋನನೊಂದಿಗೆ ಮಾತನಾಡಿ, BSB BSB: Then the LORD said to Aaron,
9 ULB <<ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ. BSB BSB: “You and your sons are not to drink wine or strong drink when you enter the Tent of Meeting, or else you will die; this is a permanent statute for the generations to come.
10 ULB ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ, BSB BSB: You must distinguish between the holy and the common, between the clean and the unclean,
11 ULB ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ>> ಎಂದು ಹೇಳಿದನು. BSB BSB: so that you may teach the Israelites all the statutes that the LORD has given them through Moses.”
12 ULB ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, <<ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ. BSB BSB: And Moses said to Aaron and his remaining sons, Eleazar and Ithamar, “Take the grain offering that remains from the food offerings to the LORD and eat it without leaven beside the altar, because it is most holy.
13 ULB ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ. BSB BSB: You shall eat it in a holy place, because it is your share and your sons’ share of the food offerings to the LORD; for this is what I have been commanded.
14 ULB ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ. BSB BSB: And you and your sons and daughters may eat the breast of the wave offering and the thigh of the contribution in a ceremonially clean place, because these portions have been assigned to you and your children from the peace offerings of the sons of Israel.
15 ULB ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ>> ಎಂದು ಹೇಳಿದನು. BSB BSB: They are to bring the thigh of the contribution and the breast of the wave offering, together with the fat portions of the food offerings, to wave as a wave offering before the LORD. It will belong permanently to you and your children, as the LORD has commanded.”
16 ULB ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು, BSB BSB: Later, Moses searched carefully for the goat of the sin offering, and behold, it had been burned up. He was angry with Eleazar and Ithamar, Aaron’s remaining sons, and asked,
17 ULB <<ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ? BSB BSB: “Why didn’t you eat the sin offering in the holy place? For it is most holy; it was given to you to take away the guilt of the congregation by making atonement for them before the LORD.
18 ULB ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು>> ಅಂದನು. BSB BSB: Since its blood was not brought inside the holy place, you should have eaten it in the sanctuary area, as I commanded.”
19 ULB ಅದಕ್ಕೆ ಆರೋನನು ಮೋಶೆಗೆ, <<ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?>> BSB BSB: But Aaron replied to Moses, “Behold, this very day they presented their sin offering and their burnt offering before the LORD. Since these things have happened to me, if I had eaten the sin offering today, would it have been acceptable in the sight of the LORD?”
20 ULB ಎಂದು ಉತ್ತರಕೊಡಲಾಗಿ ಮೋಶೆ ಆ ಮಾತನ್ನು ಕೇಳಿ ತೃಪ್ತಿಗೊಂಡನು. BSB BSB: And when Moses heard this explanation, he was satisfied.
Select verses for actions: Enter goes to them and Escape comes back.