1 ULB ಯೆಹೋವನು ಮೋಶೆ ಮತ್ತು ಆರೋನರಿಗೆ, BSB BSB: Then the LORD said to Moses and Aaron,
2 ULB <<ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು. BSB BSB: “When someone has a swelling or rash or bright spot on his skin that may be an infectious skin disease, he must be brought to Aaron the priest or to one of his sons who is a priest.
3 ULB ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿದ್ದರೆ ಮತ್ತು ಆ ಮಚ್ಚೆ ಉಳಿದ ಚರ್ಮಕ್ಕಿಂತ ಆಳವಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. BSB BSB: The priest is to examine the infection on his skin, and if the hair in the infection has turned white and the sore appears to be deeper than the skin, it is a skin disease. After the priest examines him, he must pronounce him unclean.
4 ULB ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಉಳಿದ ಚರ್ಮಕ್ಕಿಂತ ಆಳವಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗದಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇರಿಸಬೇಕು. BSB BSB: If, however, the spot on his skin is white and does not appear to be deeper than the skin, and the hair in it has not turned white, the priest shall isolate the infected person for seven days.
5 ULB ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು. BSB BSB: On the seventh day the priest is to reexamine him, and if he sees that the infection is unchanged and has not spread on the skin, the priest must isolate him for another seven days.
6 ULB ಆ ಏಳು ದಿನಗಳಾದ ಮೇಲೆ ಯಾಜಕನು ಪುನಃ ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಬರೀ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು. BSB BSB: The priest will examine him again on the seventh day, and if the sore has faded and has not spread on the skin, the priest shall pronounce him clean; it is a rash. The person must wash his clothes and be clean.
7 ULB ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು. BSB BSB: But if the rash spreads further on his skin after he has shown himself to the priest for his cleansing, he must present himself again to the priest.
8 ULB ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. BSB BSB: The priest will reexamine him, and if the rash has spread on the skin, the priest must pronounce him unclean; it is a skin disease.
9 ULB <<ಕುಷ್ಠರೋಗದ ಲಕ್ಷಣಗಳು ಯಾವನಲ್ಲಾದರೂ ಕಾಣಿಸಿದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. BSB BSB: When anyone develops a skin disease, he must be brought to the priest.
10 ULB ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು. BSB BSB: The priest will examine him, and if there is a white swelling on the skin that has turned the hair white, and there is raw flesh in the swelling,
11 ULB ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು. BSB BSB: it is a chronic skin disease and the priest must pronounce him unclean. He need not isolate him, for he is unclean.
12 ULB <<ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ, BSB BSB: But if the skin disease breaks out all over his skin so that it covers all the skin of the infected person from head to foot, as far as the priest can see,
13 ULB ಯಾಜಕನು ಪರೀಕ್ಷಿಸುವಾಗ ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ, ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು. BSB BSB: the priest shall examine him, and if the disease has covered his entire body, he is to pronounce the infected person clean. Since it has all turned white, he is clean.
14 ULB ಆದರೆ ಅಂಥವನ ದೇಹದಲ್ಲಿ ಎಲ್ಲಿಯಾದರೂ ಮಾಂಸ ಕಂಡುಬಂದರೆ ಅವನು ಅಶುದ್ಧನಾಗುವನು. BSB BSB: But whenever raw flesh appears on someone, he will be unclean.
15 ULB ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ. BSB BSB: When the priest sees the raw flesh, he must pronounce him unclean. The raw flesh is unclean; it is a skin disease.
16 ULB ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ಪುನಃ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು. BSB BSB: But if the raw flesh changes and turns white, he must go to the priest.
17 ULB ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ. BSB BSB: The priest will reexamine him, and if the infection has turned white, the priest is to pronounce the infected person clean; then he is clean.
18 ULB <<ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು ಅದು ವಾಸಿಯಾದ ಮೇಲೆ, BSB BSB: When a boil appears on someone’s skin and it heals,
19 ULB ಅದು ಇದ್ದ ಸ್ಥಳದಲ್ಲಿ ಬಿಳಿ ಬಾವಾಗಲಿ ಅಥವಾ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಉಂಟಾದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು. BSB BSB: and a white swelling or a reddish-white spot develops where the boil was, he must present himself to the priest.
20 ULB ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. BSB BSB: The priest shall examine it, and if it appears to be beneath the skin and the hair in it has turned white, the priest shall pronounce him unclean; it is a diseased infection that has broken out in the boil.
21 ULB ಆದರೆ ಯಾಜಕನು ಪರೀಕ್ಷಿಸುವಾಗ ಅದರಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿರದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. BSB BSB: But when the priest examines it, if there is no white hair in it, and it is not beneath the skin and has faded, the priest shall isolate him for seven days.
22 ULB ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ. BSB BSB: If it spreads any further on the skin, the priest must pronounce him unclean; it is an infection.
23 ULB ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. BSB BSB: But if the spot remains unchanged and does not spread, it is only the scar from the boil, and the priest shall pronounce him clean.
24 ULB <<ಒಬ್ಬನ ದೇಹದ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿ ಇದ್ದರೆ ಯಾಜಕನು ಅದನ್ನು ನೋಡಬೇಕು. BSB BSB: When there is a burn on someone’s skin and the raw area of the burn becomes reddish-white or white,
25 ULB ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. BSB BSB: the priest must examine it. If the hair in the spot has turned white and the spot appears to be deeper than the skin, it is a disease that has broken out in the burn. The priest must pronounce him unclean; it is a diseased infection.
26 ULB ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳಿ ರೋಮವಿಲ್ಲದೆ ಹೋದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆ, ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. BSB BSB: But if the priest examines it and there is no white hair in the spot, and it is not beneath the skin but has faded, the priest shall isolate him for seven days.
27 ULB ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. BSB BSB: On the seventh day the priest is to reexamine him, and if it has spread further on the skin, the priest must pronounce him unclean; it is a diseased infection.
28 ULB ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ. BSB BSB: But if the spot is unchanged and has not spread on the skin but has faded, it is a swelling from the burn, and the priest is to pronounce him clean; for it is only the scar from the burn.
29 ULB <<ಹೆಂಗಸಿನ ತಲೆಯಲ್ಲಿ ಆಗಲಿ, ಗಂಡಸಿನ ತಲೆಯಲ್ಲಿ ಆಗಲಿ ಅಥವಾ ಗಡ್ಡದ ಮೇಲೆ ಆಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಬೇಕು. BSB BSB: If a man or woman has an infection on the head or chin,
30 ULB ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು. BSB BSB: the priest shall examine the infection, and if it appears to be deeper than the skin and the hair in it is yellow and thin, the priest must pronounce him unclean; it is a scaly outbreak, an infectious disease of the head or chin.
31 ULB ಯಾಜಕನು ಆ ಗಾಯವನ್ನು ನೋಡುವಾಗ ಅದು ಬೇರೆ ಚರ್ಮಕ್ಕಿಂತ ಆಳವಾಗಿ ಕಾಣದೆ ಹೋದಾಗ್ಯೂ, ಅದು ಇರುವ ಭಾಗದಲ್ಲಿ ಕಪ್ಪು ಕೂದಲು ಇಲ್ಲದಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು. BSB BSB: But if the priest examines the scaly infection and it does not appear to be deeper than the skin, and there is no black hair in it, the priest shall isolate the infected person for seven days.
32 ULB ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ, BSB BSB: On the seventh day the priest is to reexamine the infection, and if the scaly outbreak has not spread and there is no yellow hair in it, and it does not appear to be deeper than the skin,
33 ULB ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು. BSB BSB: then the person must shave himself except for the scaly area. Then the priest shall isolate him for another seven days.
34 ULB ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು. BSB BSB: On the seventh day the priest shall examine the scaly outbreak, and if it has not spread on the skin and does not appear to be deeper than the skin, the priest is to pronounce him clean. He must wash his clothes, and he will be clean.
35 ULB ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ, BSB BSB: If, however, the scaly outbreak spreads further on the skin after his cleansing,
36 ULB ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ. BSB BSB: the priest is to examine him, and if the scaly outbreak has spread on the skin, the priest need not look for yellow hair; the person is unclean.
37 ULB ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. BSB BSB: If, however, in his sight the scaly outbreak is unchanged and black hair has grown in it, then it has healed. He is clean, and the priest is to pronounce him clean.
38 ULB <<ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು. BSB BSB: When a man or a woman has white spots on the skin,
39 ULB ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು. BSB BSB: the priest shall examine them, and if the spots are dull white, it is a harmless rash that has broken out on the skin; the person is clean.
40 ULB <<ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ. BSB BSB: Now if a man loses his hair and is bald, he is still clean.
41 ULB ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ. BSB BSB: Or if his hairline recedes and he is bald on his forehead, he is still clean.
42 ULB ಆದರೆ ಬೋಳುತಲೆಯಲ್ಲಾಗಲಿ ಅಥವಾ ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ. BSB BSB: But if there is a reddish-white sore on the bald head or forehead, it is an infectious disease breaking out on it.
43 ULB ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ, BSB BSB: The priest is to examine him, and if the swelling of the infection on his bald head or forehead is reddish-white like a skin disease,
44 ULB ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. BSB BSB: the man is diseased; he is unclean. The priest must pronounce him unclean because of the infection on his head.
45 ULB <<ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು <ನಾನು ಅಶುದ್ಧನು, ಅಶುದ್ಧನು> ಎಂದು ಕೂಗಿಕೊಳ್ಳಬೇಕು. BSB BSB: A diseased person must wear torn clothes and let his hair hang loose, and he must cover his mouth and cry out, ‘Unclean, unclean!’
46 ULB ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು. BSB BSB: As long as he has the infection, he remains unclean. He must live alone in a place outside the camp.
47 ULB <<ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ, BSB BSB: If any fabric is contaminated with mildew—any wool or linen garment,
48 ULB ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ, BSB BSB: any weave or knit of linen or wool, or any article of leather—
49 ULB ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು. BSB BSB: and if the mark in the fabric, leather, weave, knit, or leather article is green or red, then it is contaminated with mildew and must be shown to the priest.
50 ULB ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು. BSB BSB: And the priest is to examine the mildew and isolate the contaminated fabric for seven days.
51 ULB ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ. BSB BSB: On the seventh day the priest shall reexamine it, and if the mildew has spread in the fabric, weave, knit, or leather, then regardless of how it is used, it is a harmful mildew; the article is unclean.
52 ULB ಆ ವಸ್ತುವು ಬಟ್ಟೆಯಾದರೂ, ಹಾಸಾದರೂ, ಹೊಕ್ಕಾದರೂ, ಉಣ್ಣೆಯದಾದರೂ, ನಾರಿನದಾದರೂ ಅಥವಾ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು. BSB BSB: He is to burn the fabric, weave, or knit, whether the contaminated item is wool or linen or leather. Since the mildew is harmful, the article must be burned up.
53 ULB ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ, BSB BSB: But when the priest reexamines it, if the mildew has not spread in the fabric, weave, knit, or leather article,
54 ULB ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನು ಏಳು ದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು. BSB BSB: the priest is to order the contaminated article to be washed and isolated for another seven days.
55 ULB ಆ ಮಚ್ಚೆ ಇದ್ದ ವಸ್ತುಗಳನ್ನು ತೊಳೆಸಿದ ಮೇಲೆ ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲ್ಭಾಗದಿಂದಾಗಲಿ ಅಥವಾ ಕೆಳಭಾಗದಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. BSB BSB: After it has been washed, the priest is to reexamine it, and if the mildewed article has not changed in appearance, it is unclean. Even though the mildew has not spread, you must burn it, whether the rot is on the front or back.
56 ULB ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು. BSB BSB: If the priest examines it and the mildew has faded after it has been washed, he must cut the contaminated section out of the fabric, leather, weave, or knit.
57 ULB ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು. BSB BSB: But if it reappears in the fabric, weave, or knit, or on any leather article, it is spreading. You must burn the contaminated article.
58 ULB ಆ ಬಟ್ಟೆಯನ್ನಾಗಲಿ, ಹಾಸನ್ನಾಗಲಿ, ಹೆಣಿಗೆಯನ್ನಾಗಲಿ ಅಥವಾ ತೊಗಲಿನ ಸಾಮಾನನ್ನಾಗಲಿ ತೊಳೆದನಂತರ ಆ ಮಚ್ಚೆ ಕಾಣದೆಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು. BSB BSB: If the mildew disappears from the fabric, weave, or knit, or any leather article after washing, then it is to be washed again, and it will be clean.
59 ULB <<ಉಣ್ಣೇ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದ ಕುಷ್ಠರೋಗದ ಗುರುತಿನ ವಿಷಯವಾದ ನಿಯಮ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಥವಾ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು>> ಎಂದು ಹೇಳಿದನು. BSB BSB: This is the law concerning a mildew contamination in wool or linen fabric, weave, or knit, or any leather article, for pronouncing it clean or unclean.”
Select verses for actions: Enter goes to them and Escape comes back.