1 ULB ಯೆಹೋವನು ಮೋಶೆಯೊಂದಿಗೆ ಮಾತನಾಡಿ, BSB BSB: Then the LORD said to Moses,
2 ULB <<ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. BSB BSB: “This is the law for the one afflicted with a skin disease on the day of his cleansing, when he is brought to the priest.
3 ULB ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು. BSB BSB: The priest is to go outside the camp to examine him, and if the skin disease of the afflicted person has healed,
4 ULB ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು. BSB BSB: the priest shall order that two live clean birds, cedar wood, scarlet yarn, and hyssop be brought for the one to be cleansed.
5 ULB ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು. BSB BSB: Then the priest shall command that one of the birds be slaughtered over fresh water in a clay pot.
6 ULB <<ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು. BSB BSB: And he is to take the live bird together with the cedar wood, scarlet yarn, and hyssop, and dip them into the blood of the bird that was slaughtered over the fresh water.
7 ULB ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು. BSB BSB: Seven times he shall sprinkle the one to be cleansed of the skin disease. Then he shall pronounce him clean and release the live bird into the open field.
8 ULB ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು. BSB BSB: The one being cleansed must wash his clothes, shave off all his hair, and bathe with water; then he will be ceremonially clean. Afterward, he may enter the camp, but he must remain outside his tent for seven days.
9 ULB ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು. BSB BSB: On the seventh day he must shave off all his hair—his head, his beard, his eyebrows, and the rest of his hair. He must wash his clothes and bathe himself with water, and he will be clean.
10 ULB <<ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು. BSB BSB: On the eighth day he is to bring two unblemished male lambs, an unblemished ewe lamb a year old, a grain offering of three-tenths of an ephah of fine flour mixed with olive oil, and one log of olive oil.
11 ULB ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು. BSB BSB: The priest who performs the cleansing shall present the one to be cleansed, together with these offerings, before the LORD at the entrance to the Tent of Meeting.
12 ULB ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. BSB BSB: Then the priest is to take one of the male lambs and present it as a guilt offering, along with the log of olive oil; and he must wave them as a wave offering before the LORD.
13 ULB ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ. BSB BSB: Then he is to slaughter the lamb in the sanctuary area where the sin offering and burnt offering are slaughtered. Like the sin offering, the guilt offering belongs to the priest; it is most holy.
14 ULB ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು. BSB BSB: The priest is to take some of the blood from the guilt offering and put it on the right earlobe of the one to be cleansed, on the thumb of his right hand, and on the big toe of his right foot.
15 ULB ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು, BSB BSB: Then the priest shall take some of the log of olive oil, pour it into his left palm,
16 ULB ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು. BSB BSB: dip his right forefinger into the oil in his left palm, and sprinkle some of the oil with his finger seven times before the LORD.
17 ULB ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು. BSB BSB: And the priest is to put some of the oil remaining in his palm on the right earlobe of the one to be cleansed, on the thumb of his right hand, and on the big toe of his right foot, on top of the blood of the guilt offering.
18 ULB ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು. BSB BSB: The rest of the oil in his palm, the priest is to put on the head of the one to be cleansed, to make atonement for him before the LORD.
19 ULB <<ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು. BSB BSB: Then the priest is to sacrifice the sin offering and make atonement for the one to be cleansed from his uncleanness. After that, the priest shall slaughter the burnt offering
20 ULB ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು. BSB BSB: and offer it on the altar, with the grain offering, to make atonement for him, and he will be clean.
21 ULB <<ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು. BSB BSB: If, however, the person is poor and cannot afford these offerings, he is to take one male lamb as a guilt offering to be waved to make atonement for him, along with a tenth of an ephah of fine flour mixed with olive oil for a grain offering, a log of olive oil,
22 ULB ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. BSB BSB: and two turtledoves or two young pigeons, whichever he can afford, one to be a sin offering and the other a burnt offering.
23 ULB ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು. BSB BSB: On the eighth day he is to bring them for his cleansing to the priest at the entrance to the Tent of Meeting before the LORD.
24 ULB ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. BSB BSB: The priest shall take the lamb for the guilt offering, along with the log of olive oil, and wave them as a wave offering before the LORD.
25 ULB ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು. BSB BSB: And after he slaughters the lamb for the guilt offering, the priest is to take some of the blood of the guilt offering and put it on the right earlobe of the one to be cleansed, on the thumb of his right hand, and on the big toe of his right foot.
26 ULB ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು, BSB BSB: Then the priest is to pour some of the oil into his left palm
27 ULB ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು. BSB BSB: and sprinkle with his right forefinger some of the oil in his left palm seven times before the LORD.
28 ULB ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು. BSB BSB: The priest shall also put some of the oil in his palm on the right earlobe of the one to be cleansed, on the thumb of his right hand, and on the big toe of his right foot—on the same places as the blood of the guilt offering.
29 ULB ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು. BSB BSB: The rest of the oil in his palm, the priest is to put on the head of the one to be cleansed, to make atonement for him before the LORD.
30 ULB ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ BSB BSB: Then he must sacrifice the turtledoves or young pigeons, whichever he can afford,
31 ULB ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು. BSB BSB: one as a sin offering and the other as a burnt offering, together with the grain offering. In this way the priest will make atonement before the LORD for the one to be cleansed.
32 ULB <<ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ>> ಎಂದು ಹೇಳಿದನು. BSB BSB: This is the law for someone who has a skin disease and cannot afford the cost of his cleansing.”
33 ULB ಯೆಹೋವನು ಮೋಶೆ ಮತ್ತು ಆರೋನರಿಗೆ, BSB BSB: Then the LORD said to Moses and Aaron,
34 ULB <<ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ, BSB BSB: “When you enter the land of Canaan, which I am giving you as your possession, and I put a contamination of mildew into a house in that land,
35 ULB ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, <ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ> ಎಂದು ಅವನಿಗೆ ತಿಳಿಸಬೇಕು. BSB BSB: the owner of the house shall come and tell the priest, ‘Something like mildew has appeared in my house.’
36 ULB ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು. BSB BSB: The priest must order that the house be cleared before he enters it to examine the mildew, so that nothing in the house will become unclean. After this, the priest shall go in to inspect the house.
37 ULB ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ, BSB BSB: He is to examine the house, and if the mildew on the walls consists of green or red depressions that appear to be beneath the surface of the wall,
38 ULB ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು. BSB BSB: the priest shall go outside the doorway of the house and close it up for seven days.
39 ULB ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ, BSB BSB: On the seventh day the priest is to return and inspect the house. If the mildew has spread on the walls,
40 ULB ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು. BSB BSB: he must order that the contaminated stones be pulled out and thrown into an unclean place outside the city.
41 ULB ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು. BSB BSB: And he shall have the inside of the house scraped completely and the plaster that is scraped off dumped into an unclean place outside the city.
42 ULB ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು. BSB BSB: So different stones must be obtained to replace the contaminated ones, as well as additional mortar to replaster the house.
43 ULB <<ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು. BSB BSB: If the mildew reappears in the house after the stones have been torn out and the house has been scraped and replastered,
44 ULB ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು. BSB BSB: the priest must come and inspect it. If the mildew has spread in the house, it is a destructive mildew; the house is unclean.
45 ULB ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು. BSB BSB: It must be torn down with its stones, its timbers, and all its plaster, and taken outside the city to an unclean place.
46 ULB ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. BSB BSB: Anyone who enters the house during any of the days that it is closed up will be unclean until evening.
47 ULB ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. BSB BSB: And anyone who sleeps in the house or eats in it must wash his clothes.
48 ULB <<ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು. BSB BSB: If, however, the priest comes and inspects it, and the mildew has not spread after the house has been replastered, he shall pronounce the house clean, because the mildew is gone.
49 ULB ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು. BSB BSB: He is to take two birds, cedar wood, scarlet yarn, and hyssop to purify the house;
50 ULB ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು, BSB BSB: and he shall slaughter one of the birds over fresh water in a clay pot.
51 ULB ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು. BSB BSB: Then he shall take the cedar wood, the hyssop, the scarlet yarn, and the live bird, dip them in the blood of the slaughtered bird and the fresh water, and sprinkle the house seven times.
52 ULB ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು. BSB BSB: And he shall cleanse the house with the bird’s blood, the fresh water, the live bird, the cedar wood, the hyssop, and the scarlet yarn.
53 ULB ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು. BSB BSB: Finally, he is to release the live bird into the open fields outside the city. In this way he will make atonement for the house, and it will be clean.
54 ULB <<ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ, BSB BSB: This is the law for any infectious skin disease, for a scaly outbreak,
55 ULB ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು, BSB BSB: for mildew in clothing or in a house,
56 ULB ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ BSB BSB: and for a swelling, rash, or spot,
57 ULB ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ>> ಎಂದು ಹೇಳಿದನು. BSB BSB: to determine when something is clean or unclean. This is the law regarding skin diseases and mildew.”
Select verses for actions: Enter goes to them and Escape comes back.