1 ULB ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ, BSB BSB: And the LORD said to Moses and Aaron,
2 ULB <<ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, <ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು. BSB BSB: “Say to the Israelites, ‘When any man has a bodily discharge, the discharge is unclean.
3 ULB ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು. BSB BSB: This uncleanness is from his discharge, whether his body allows the discharge to flow or blocks it. So his discharge will bring about uncleanness.
4 ULB ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು. BSB BSB: Any bed on which the man with the discharge lies will be unclean, and any furniture on which he sits will be unclean.
5 ULB ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು. BSB BSB: Anyone who touches his bed must wash his clothes and bathe with water, and he will be unclean until evening.
6 ULB ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. BSB BSB: Whoever sits on furniture on which the man with the discharge was sitting must wash his clothes and bathe with water, and he will be unclean until evening.
7 ULB ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. BSB BSB: Whoever touches the body of the man with a discharge must wash his clothes and bathe with water, and he will be unclean until evening.
8 ULB ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. BSB BSB: If the man with the discharge spits on one who is clean, that person must wash his clothes and bathe with water, and he will be unclean until evening.
9 ULB ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು. BSB BSB: Any saddle on which the man with the discharge rides will be unclean.
10 ULB ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. BSB BSB: Whoever touches anything that was under him will be unclean until evening, and whoever carries such things must wash his clothes and bathe with water, and he will be unclean until evening.
11 ULB ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. BSB BSB: If the man with the discharge touches anyone without first rinsing his hands with water, the one who was touched must wash his clothes and bathe with water, and he will be unclean until evening.
12 ULB ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು. BSB BSB: Any clay pot that the man with the discharge touches must be broken, and any wooden utensil must be rinsed with water.
13 ULB << <ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು. BSB BSB: When the man has been cleansed from his discharge, he must count off seven days for his cleansing, wash his clothes, and bathe himself in fresh water, and he shall be clean.
14 ULB ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು. BSB BSB: On the eighth day he is to take two turtledoves or two young pigeons, come before the LORD at the entrance to the Tent of Meeting, and give them to the priest.
15 ULB ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು. BSB BSB: The priest is to sacrifice them, one as a sin offering and the other as a burnt offering. In this way the priest will make atonement for the man before the LORD because of his discharge.
16 ULB << <ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. BSB BSB: When a man has an emission of semen, he must bathe his whole body with water, and he will be unclean until evening.
17 ULB ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು. BSB BSB: Any clothing or leather on which there is an emission of semen must be washed with water, and it will remain unclean until evening.
18 ULB ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. BSB BSB: If a man lies with a woman and there is an emission of semen, both must bathe with water, and they will remain unclean until evening.
19 ULB << <ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. BSB BSB: When a woman has a discharge consisting of blood from her body, she will be unclean due to her menstruation for seven days, and anyone who touches her will be unclean until evening.
20 ULB ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು. BSB BSB: Anything on which she lies or sits during her menstruation will be unclean,
21 ULB ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. BSB BSB: and anyone who touches her bed must wash his clothes and bathe with water, and he will be unclean until evening.
22 ULB ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. BSB BSB: Whoever touches any furniture on which she was sitting must wash his clothes and bathe with water, and he will be unclean until evening.
23 ULB ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. BSB BSB: And whether it is a bed or furniture on which she was sitting, whoever touches it will be unclean until evening.
24 ULB ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು. BSB BSB: If a man lies with her and her menstrual flow touches him, he will be unclean for seven days, and any bed on which he lies will become unclean.
25 ULB << <ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು. BSB BSB: When a woman has a discharge of her blood for many days at a time other than her menstrual period, or if it continues beyond her period, she will be unclean all the days of her unclean discharge, just as she is during the days of her menstruation.
26 ULB ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು. BSB BSB: Any bed on which she lies or any furniture on which she sits during the days of her discharge will be unclean, like her bed during her menstrual period.
27 ULB ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. BSB BSB: Anyone who touches these things will be unclean; he must wash his clothes and bathe with water, and he will be unclean until evening.
28 ULB ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು. BSB BSB: When a woman is cleansed of her discharge, she must count off seven days, and after that she will be ceremonially clean.
29 ULB ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು. BSB BSB: On the eighth day she is to take two turtledoves or two young pigeons and bring them to the priest at the entrance to the Tent of Meeting.
30 ULB ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. BSB BSB: The priest is to sacrifice one as a sin offering and the other as a burnt offering. In this way the priest will make atonement for her before the LORD for her unclean discharge.
31 ULB << <ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು. BSB BSB: You must keep the children of Israel separate from their uncleanness, so that they do not die by defiling My tabernacle, which is among them.
32 ULB << <ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು, BSB BSB: This is the law of him who has a discharge, of the man who has an emission of semen whereby he is unclean,
33 ULB ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ>>> ಎಂದು ಹೇಳಿದನು. BSB BSB: of a woman in her menstrual period, of any male or female who has a discharge, and of a man who lies with an unclean woman.’”
Select verses for actions: Enter goes to them and Escape comes back.