1 ULB ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ, BSB BSB: Then the LORD said to Moses on Mount Sinai,
2 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು. BSB BSB: “Speak to the Israelites and say to them: When you enter the land that I am giving you, the land itself must observe a Sabbath to the LORD.
3 ULB ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು. BSB BSB: For six years you may sow your field and prune your vineyard and gather its crops.
4 ULB ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು. BSB BSB: But in the seventh year there shall be a Sabbath of complete rest for the land—a Sabbath to the LORD. You are not to sow your field or prune your vineyard.
5 ULB ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು. BSB BSB: You are not to reap the aftergrowth of your harvest or gather the grapes of your untended vines. The land must have a year of complete rest.
6 ULB ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ, BSB BSB: Whatever the land yields during the Sabbath year shall be food for you—for yourself, your manservant and maidservant, the hired hand or foreigner who stays with you,
7 ULB ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು. BSB BSB: and for your livestock and the wild animals in your land. All its growth may serve as food.
8 ULB << <ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು. BSB BSB: And you shall count off seven Sabbaths of years—seven times seven years—so that the seven Sabbaths of years amount to forty-nine years.
9 ULB ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು. BSB BSB: Then you are to sound the horn far and wide on the tenth day of the seventh month, the Day of Atonement. You shall sound it throughout your land.
10 ULB ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು. BSB BSB: So you are to consecrate the fiftieth year and proclaim liberty in the land for all its inhabitants. It shall be your Jubilee, when each of you is to return to his property and to his clan.
11 ULB ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು. BSB BSB: The fiftieth year will be a Jubilee for you; you are not to sow the land or reap its aftergrowth or harvest the untended vines.
12 ULB ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು. BSB BSB: For it is a Jubilee; it shall be holy to you. You may eat only the crops taken directly from the field.
13 ULB << <ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು. BSB BSB: In this Year of Jubilee, each of you shall return to his own property.
14 ULB ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು. BSB BSB: If you make a sale to your neighbor or a purchase from him, you must not take advantage of each other.
15 ULB ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು. BSB BSB: You are to buy from your neighbor according to the number of years since the last Jubilee; he is to sell to you according to the number of harvest years remaining.
16 ULB ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ. BSB BSB: You shall increase the price in proportion to a greater number of years, or decrease it in proportion to a lesser number of years; for he is selling you a given number of harvests.
17 ULB ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು. BSB BSB: Do not take advantage of each other, but fear your God; for I am the LORD your God.
18 ULB << <ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ. BSB BSB: You are to keep My statutes and carefully observe My judgments, so that you may dwell securely in the land.
19 ULB ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ. BSB BSB: Then the land will yield its fruit, so that you can eat your fill and dwell in safety in the land.
20 ULB << <ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?> ಎಂದು ವಿಚಾರಿಸುತ್ತೀರೋ BSB BSB: Now you may wonder, ‘What will we eat in the seventh year if we do not sow or gather our produce?’
21 ULB ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು. BSB BSB: But I will send My blessing upon you in the sixth year, so that the land will yield a crop sufficient for three years.
22 ULB ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ. BSB BSB: While you are sowing in the eighth year, you will be eating from the previous harvest, until the ninth year’s harvest comes in.
23 ULB << <ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು. BSB BSB: The land must not be sold permanently, because it is Mine, and you are but foreigners and residents with Me.
24 ULB ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು. BSB BSB: Thus for every piece of property you possess, you must provide for the redemption of the land.
25 ULB << <ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು. BSB BSB: If your brother becomes impoverished and sells some of his property, his nearest of kin may come and redeem what his brother has sold.
26 ULB ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ, BSB BSB: Or if a man has no one to redeem it for him, but he prospers and acquires enough to redeem his land,
27 ULB ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು. BSB BSB: he shall calculate the years since its sale, repay the balance to the man to whom he sold it, and return to his property.
28 ULB ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು. BSB BSB: But if he cannot obtain enough to repay him, what he sold will remain in possession of the buyer until the Year of Jubilee. In the Jubilee, however, it is to be released, so that he may return to his property.
29 ULB << <ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು. BSB BSB: If a man sells a house in a walled city, he retains his right of redemption until a full year after its sale; during that year it may be redeemed.
30 ULB ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. BSB BSB: If it is not redeemed by the end of a full year, then the house in the walled city is permanently transferred to its buyer and his descendants. It is not to be released in the Jubilee.
31 ULB ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು. BSB BSB: But houses in villages with no walls around them are to be considered as open fields. They may be redeemed, and they shall be released in the Jubilee.
32 ULB ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು. BSB BSB: As for the cities of the Levites, the Levites always have the right to redeem their houses in the cities they possess.
33 ULB ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ. BSB BSB: So whatever belongs to the Levites may be redeemed—a house sold in a city they possess—and must be released in the Jubilee, because the houses in the cities of the Levites are their possession among the Israelites.
34 ULB ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು. BSB BSB: But the open pastureland around their cities may not be sold, for this is their permanent possession.
35 ULB << <ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು. BSB BSB: Now if your countryman becomes destitute and cannot support himself among you, then you are to help him as you would a foreigner or stranger, so that he can continue to live among you.
36 ULB ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು. BSB BSB: Do not take any interest or profit from him, but fear your God, that your countryman may live among you.
37 ULB ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು. BSB BSB: You must not lend him your silver at interest or sell him your food for profit.
38 ULB ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ. BSB BSB: I am the LORD your God, who brought you out of the land of Egypt to give you the land of Canaan and to be your God.
39 ULB << <ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು. BSB BSB: If a countryman among you becomes destitute and sells himself to you, then you must not force him into slave labor.
40 ULB ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ. BSB BSB: Let him stay with you as a hired worker or temporary resident; he is to work for you until the Year of Jubilee.
41 ULB ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು. BSB BSB: Then he and his children are to be released, and he may return to his clan and to the property of his fathers.
42 ULB ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು. BSB BSB: Because the Israelites are My servants, whom I brought out of the land of Egypt, they are not to be sold as slaves.
43 ULB ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು. BSB BSB: You are not to rule over them harshly, but you shall fear your God.
45 ULB ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು. BSB BSB: You may also purchase them from the foreigners residing among you or their clans living among you who are born in your land. These may become your property.
46 ULB ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು. BSB BSB: You may leave them to your sons after you to inherit as property; you can make them slaves for life. But as for your brothers, the Israelites, no man may rule harshly over his brother.
47 ULB << <ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. BSB BSB: If a foreigner residing among you prospers, but your countryman dwelling near him becomes destitute and sells himself to the foreigner or to a member of his clan,
48 ULB ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು. BSB BSB: he retains the right of redemption after he has sold himself. One of his brothers may redeem him:
49 ULB ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು. BSB BSB: either his uncle or cousin or any close relative from his clan may redeem him. Or if he prospers, he may redeem himself.
50 ULB ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು. BSB BSB: He and his purchaser will then count the time from the year he sold himself up to the Year of Jubilee. The price of his sale will be determined by the number of years, based on the daily wages of a hired hand.
51 ULB ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು. BSB BSB: If many years remain, he must pay for his redemption in proportion to his purchase price.
52 ULB ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು. BSB BSB: If only a few years remain until the Year of Jubilee, he is to calculate and pay his redemption according to his remaining years.
53 ULB ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು. BSB BSB: He shall be treated like a man hired from year to year, but a foreign owner must not rule over him harshly in your sight.
54 ULB ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು. BSB BSB: Even if he is not redeemed in any of these ways, he and his children shall be released in the Year of Jubilee.
55 ULB ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು>>> ಎಂದು ಹೇಳಿದನು. BSB BSB: For the Israelites are My servants. They are My servants, whom I brought out of the land of Egypt. I am the LORD your God.
Select verses for actions: Enter goes to them and Escape comes back.