1 ULB <<ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು. BSB BSB: “You must not make idols for yourselves or set up a carved image or sacred pillar; you must not place a sculpted stone in your land to bow down to it. For I am the LORD your God.
2 ULB ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. BSB BSB: You must keep My Sabbaths and have reverence for My sanctuary. I am the LORD.
3 ULB <<ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, BSB BSB: If you follow My statutes and carefully keep My commandments,
4 ULB ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು. BSB BSB: I will give you rains in their season, and the land will yield its produce, and the trees of the field will bear their fruit.
5 ULB ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ. BSB BSB: Your threshing will continue until the grape harvest, and the grape harvest will continue until sowing time; you will have your fill of food to eat and will dwell securely in your land.
6 ULB ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ. BSB BSB: And I will give peace to the land, and you will lie down with nothing to fear. I will rid the land of dangerous animals, and no sword will pass through your land.
7 ULB ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ. BSB BSB: You will pursue your enemies, and they will fall by the sword before you.
8 ULB ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು. BSB BSB: Five of you will pursue a hundred, and a hundred of you will pursue ten thousand, and your enemies will fall by the sword before you.
9 ULB ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು. BSB BSB: I will turn toward you and make you fruitful and multiply you, and I will establish My covenant with you.
10 ULB ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ. BSB BSB: You will still be eating the old supply of grain when you need to clear it out to make room for the new.
11 ULB ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ. BSB BSB: And I will make My dwelling place among you, and My soul will not despise you.
12 ULB ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ. BSB BSB: I will walk among you and be your God, and you will be My people.
13 ULB ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು. BSB BSB: I am the LORD your God, who brought you out of the land of Egypt so that you would no longer be slaves to the Egyptians. I broke the bars of your yoke and enabled you to walk in uprightness.
14 ULB <<ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ, BSB BSB: If, however, you fail to obey Me and to carry out all these commandments,
15 ULB ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ, BSB BSB: and if you reject My statutes, despise My ordinances, and neglect to carry out all My commandments, and so break My covenant,
16 ULB ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು. BSB BSB: then this is what I will do to you: I will bring upon you sudden terror, wasting disease, and fever that will destroy your sight and drain your life. You will sow your seed in vain, because your enemies will eat it.
17 ULB ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ. BSB BSB: And I will set My face against you, so that you will be defeated by your enemies. Those who hate you will rule over you, and you will flee when no one pursues you.
18 ULB <<ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು. BSB BSB: And if after all this you will not obey Me, I will proceed to punish you sevenfold for your sins.
19 ULB ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು. BSB BSB: I will break down your stubborn pride and make your sky like iron and your land like bronze,
20 ULB ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ. BSB BSB: and your strength will be spent in vain. For your land will not yield its produce, and the trees of the land will not bear their fruit.
22 ULB ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ. BSB BSB: I will send wild animals against you to rob you of your children, destroy your livestock, and reduce your numbers, until your roads lie desolate.
23 ULB <<ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ, BSB BSB: And if in spite of these things you do not accept My discipline, but continue to walk in hostility toward Me,
24 ULB ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು. BSB BSB: then I will act with hostility toward you, and I will strike you sevenfold for your sins.
25 ULB ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ. BSB BSB: And I will bring a sword against you to execute the vengeance of the covenant. Though you withdraw into your cities, I will send a plague among you, and you will be delivered into the hand of the enemy.
26 ULB ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ. BSB BSB: When I cut off your supply of bread, ten women will bake your bread in a single oven and dole out your bread by weight, so that you will eat but not be satisfied.
27 ULB <<ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ, BSB BSB: But if in spite of all this you do not obey Me, but continue to walk in hostility toward Me,
28 ULB ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು. BSB BSB: then I will walk in fury against you, and I, even I, will punish you sevenfold for your sins.
29 ULB ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ. BSB BSB: You will eat the flesh of your own sons and daughters.
30 ULB ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು. BSB BSB: I will destroy your high places, cut down your incense altars, and heap your lifeless bodies on the lifeless remains of your idols; and My soul will despise you.
31 ULB ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ. BSB BSB: I will reduce your cities to rubble and lay waste your sanctuaries, and I will refuse to smell the pleasing aroma of your sacrifices.
32 ULB ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು. BSB BSB: And I will lay waste the land, so that your enemies who dwell in it will be appalled.
33 ULB ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು. BSB BSB: But I will scatter you among the nations and will draw out a sword after you as your land becomes desolate and your cities are laid waste.
34 ULB ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು. BSB BSB: Then the land shall enjoy its Sabbaths all the days it lies desolate, while you are in the land of your enemies. At that time the land will rest and enjoy its Sabbaths.
35 ULB ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು. BSB BSB: As long as it lies desolate, the land will have the rest it did not receive during the Sabbaths when you lived in it.
36 ULB <<ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು. BSB BSB: As for those of you who survive, I will send a faintness into their hearts in the lands of their enemies, so that even the sound of a windblown leaf will put them to flight. And they will flee as one flees the sword, and fall when no one pursues them.
37 ULB ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ. BSB BSB: They will stumble over one another as before the sword, though no one is behind them. So you will not be able to stand against your enemies.
38 ULB ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು. BSB BSB: You will perish among the nations, and the land of your enemies will consume you.
39 ULB ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು. BSB BSB: Those of you who survive in the lands of your enemies will waste away in their iniquity and will decay in the sins of their fathers.
40 ULB <<ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ BSB BSB: But if they will confess their iniquity and that of their fathers in the unfaithfulness that they practiced against Me, by which they have also walked in hostility toward Me—
41 ULB ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ, BSB BSB: and I acted with hostility toward them and brought them into the land of their enemies—and if their uncircumcised hearts will be humbled and they will make amends for their iniquity,
42 ULB ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು. BSB BSB: then I will remember My covenant with Jacob and My covenant with Isaac and My covenant with Abraham, and I will remember the land.
43 ULB ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು. BSB BSB: For the land will be abandoned by them, and it will enjoy its Sabbaths by lying desolate without them. And they will pay the penalty for their iniquity, because they rejected My ordinances and abhorred My statutes.
44 ULB ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ. BSB BSB: Yet in spite of this, when they are in the land of their enemies, I will not reject or despise them so as to destroy them and break My covenant with them; for I am the LORD their God.
45 ULB ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು>> ಎಂಬುದೇ. BSB BSB: But for their sake I will remember the covenant with their fathers, whom I brought out of the land of Egypt in the sight of the nations, that I might be their God. I am the LORD.”
46 ULB ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು. BSB BSB: These are the statutes, ordinances, and laws that the LORD established between Himself and the Israelites through Moses on Mount Sinai.
Select verses for actions: Enter goes to them and Escape comes back.