1 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ, BSB BSB: Then the LORD said to Moses,
2 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, <ಯಾವನಾದರೂ ಮನುಷ್ಯರ ಪ್ರಾಣಗಳನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಶೆಕೆಲ್ ಮೇರೆಗೆ ನೀವು ಅವನಿಂದ ಕೊಡಿಸಬೇಕಾದ ಈಡು ಹೀಗಿರಬೇಕು. BSB BSB: “Speak to the Israelites and say to them, ‘When someone makes a special vow to the LORD involving the value of persons,
3 ULB ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು. BSB BSB: if the valuation concerns a male from twenty to sixty years of age, then your valuation shall be fifty shekels of silver, according to the sanctuary shekel.
4 ULB ಅದೇ ವಯಸ್ಸಿನ ಸ್ತ್ರೀಗೋಸ್ಕರ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. BSB BSB: Or if it is a female, then your valuation shall be thirty shekels.
5 ULB ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. BSB BSB: And if the person is from five to twenty years of age, then your valuation for the male shall be twenty shekels, and for the female ten shekels.
6 ULB ಒಂದು ತಿಂಗಳಿನ ವಯಸ್ಸು ಮೊದಲುಗೊಂಡು ಐದು ವರ್ಷದ ವಯಸ್ಸಿನ ಹುಡುಗನಿಗೋಸ್ಕರ ಐದು ಶೆಕೆಲ್ ಬೆಳ್ಳಿಯನ್ನು, ಹುಡುಗಿಗೋಸ್ಕರ ಮೂರು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. BSB BSB: Now if the person is from one month to five years of age, then your valuation for the male shall be five shekels of silver, and for the female three shekels of silver.
7 ULB ಅರವತ್ತು ವರ್ಷಗಳ ಪ್ರಾಯವನ್ನು ದಾಟಿದ ಪುರುಷನಿಗೋಸ್ಕರ ಹದಿನೈದು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು. BSB BSB: And if the person is sixty years of age or older, then your valuation shall be fifteen shekels for the male and ten shekels for the female.
8 ULB ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು. BSB BSB: But if the one making the vow is too poor to pay the valuation, he is to present the person before the priest, who shall set the value according to what the one making the vow can afford.
9 ULB << <ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು. BSB BSB: If he vows an animal that may be brought as an offering to the LORD, any such animal given to the LORD shall be holy.
10 ULB ಅದನ್ನು ಬದಲಾಯಿಸಬಾರದು, ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನೂ ಇಲ್ಲವೇ ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನೂ, ಒಂದಕ್ಕೆ ಬದಲಾಗಿ ಬೇರೊಂದನ್ನೂ ಕೊಡಬಾರದು. ಅವನು ಗೊತ್ತುಮಾಡಿದ ಪಶುವಿಗೆ ಬದಲಾಗಿ ಬೇರೊಂದು ಪಶುವನ್ನು ಪ್ರತ್ಯೇಕಿಸಿಟ್ಟಿರುವ ಪಕ್ಷಕ್ಕೆ, ಮೊದಲನೆಯ ಪಶುವೂ ಹಾಗೂ ಅದಕ್ಕೆ ಬದಲಾಗಿ ಇಟ್ಟ ಪಶುವೂ ಎರಡೂ ಯೆಹೋವನದಾಗಿರಬೇಕು. BSB BSB: He must not replace it or exchange it, either good for bad or bad for good. But if he does substitute one animal for another, both that animal and its substitute will be holy.
11 ULB ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು. BSB BSB: But if the vow involves any of the unclean animals that may not be brought as an offering to the LORD, the animal must be presented before the priest.
12 ULB ಅದು ಒಳ್ಳೆಯದೋ ಅಥವಾ ಕೆಟ್ಟದ್ದೋ ಎಂದು ಯಾಜಕನು ನೋಡಿಕೊಂಡು ಅದರ ಬೆಲೆ ಇಷ್ಟೆಂದು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆಯೇ ಅಂತಿಮವಾದದ್ದು ಸ್ಥಿರವಾಗಿರುವುದು. BSB BSB: The priest shall set its value, whether high or low; as the priest values it, the price will be set.
13 ULB ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. BSB BSB: If, however, the owner decides to redeem the animal, he must add a fifth to its value.
14 ULB << <ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು. BSB BSB: Now if a man consecrates his house as holy to the LORD, then the priest shall value it either as good or bad. The price will stand just as the priest values it.
15 ULB ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು. BSB BSB: But if he who consecrated his house redeems it, he must add a fifth to the assessed value, and it will belong to him.
16 ULB << <ಯಾವನಾದರೂ ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅದರಲ್ಲಿ ಇಷ್ಟು ಬೀಜವನ್ನು ಬಿತ್ತತಕ್ಕದ್ದು ಎಂದು ಆಲೋಚಿಸಿ ಅದರ ಬೆಲೆಯನ್ನು ನಿರ್ಣಯಿಸಬೇಕು. ಒಂದು ಓಮೆರ್ ಜವೆಗೋದಿಯನ್ನು ಬಿತ್ತಬಹುದಾದ ಹೊಲವು ಐವತ್ತು ಶೆಕೆಲ್ ಬೆಳ್ಳಿಯ ಬೆಲೆ ಬಾಳುವುದು. BSB BSB: If a man consecrates to the LORD a parcel of his land, then your valuation shall be proportional to the seed required for it—fifty shekels of silver for every homer of barley seed.
17 ULB ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು. BSB BSB: If he consecrates his field during the Year of Jubilee, the price will stand according to your valuation.
18 ULB ಜೂಬಿಲಿ ಸಂವತ್ಸರದ ತರುವಾಯ ಪ್ರತಿಷ್ಠೆ ಮಾಡಿದ ಭೂಮಿಯನ್ನು ಹರಕೆಮಾಡಿದರೆ, ಮುಂದಣ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಡಿಮೆಮಾಡಬೇಕು. BSB BSB: But if he consecrates his field after the Jubilee, the priest is to calculate the price in proportion to the years left until the next Year of Jubilee, so that your valuation will be reduced.
19 ULB ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಬೇಕೆಂದಿರುವ ಪಕ್ಷಕ್ಕೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಹೊಲ ಅವನದಾಗಿರುವುದು. BSB BSB: And if the one who consecrated the field decides to redeem it, he must add a fifth to the assessed value, and it shall belong to him.
20 ULB ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ. BSB BSB: If, however, he does not redeem the field, or if he has sold it to another man, it may no longer be redeemed.
21 ULB ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು. BSB BSB: When the field is released in the Jubilee, it will become holy, like a field devoted to the LORD; it becomes the property of the priests.
22 ULB << <ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, BSB BSB: Now if a man consecrates to the LORD a field he has purchased, which is not a part of his own property,
23 ULB ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು. BSB BSB: then the priest shall calculate for him the value up to the Year of Jubilee, and the man shall pay the assessed value on that day as a sacred offering to the LORD.
24 ULB ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು. BSB BSB: In the Year of Jubilee the field shall return to the one from whom it was bought—the original owner of the land.
25 ULB ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು. BSB BSB: Every valuation will be according to the sanctuary shekel, twenty gerahs to the shekel.
26 ULB << <ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ. BSB BSB: But no one may consecrate a firstborn of the livestock, because a firstborn belongs to the LORD. Whether it is an ox or a sheep, it is the LORD’s.
27 ULB ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು. BSB BSB: But if it is among the unclean animals, then he may redeem it according to your valuation and add a fifth of its value. If it is not redeemed, then it shall be sold according to your valuation.
28 ULB << <ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು. BSB BSB: Nothing that a man sets apart to the LORD from all he owns—whether a man, an animal, or his inherited land—can be sold or redeemed; everything so devoted is most holy to the LORD.
29 ULB ಕೇವಲ ಯೆಹೋವನ ಸೊತ್ತಾಗುವುದಕ್ಕೆ ಒಪ್ಪಿಸಲ್ಪಟ್ಟದ್ದು ಮನುಷ್ಯ ಜಾತಿಯಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು. BSB BSB: No person set apart for destruction may be ransomed; he must surely be put to death.
30 ULB << <ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು. BSB BSB: Thus any tithe from the land, whether from the seed of the land or the fruit of the trees, belongs to the LORD; it is holy to the LORD.
31 ULB ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. BSB BSB: If a man wishes to redeem part of his tithe, he must add a fifth to its value.
32 ULB ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು. BSB BSB: Every tenth animal from the herd or flock that passes under the shepherd’s rod will be holy to the LORD.
33 ULB ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ>>> ಎಂದು ಹೇಳಿದನು. BSB BSB: He must not inspect whether it is good or bad, and he shall not make any substitution. But if he does make a substitution, both the animal and its substitute shall become holy; they cannot be redeemed.’”
34 ULB ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ. BSB BSB: These are the commandments that the LORD gave to Moses for the Israelites on Mount Sinai.
Select verses for actions: Enter goes to them and Escape comes back.