1 ULB ಯೆಹೋವನು ಮೋಶೆಗೆ ಇಂತೆಂದನು, BSB BSB: Then the LORD said to Moses,
2 ULB <<ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ <ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ. BSB BSB: “Tell the Israelites to do as follows with one who sins unintentionally against any of the LORD’s commandments and does what is forbidden by them:
3 ULB ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು. BSB BSB: If the anointed priest sins, bringing guilt on the people, he must bring to the LORD a young bull without blemish as a sin offering for the sin he has committed.
4 ULB ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. BSB BSB: He must bring the bull to the entrance to the Tent of Meeting before the LORD, lay his hand on the bull’s head, and slaughter it before the LORD.
5 ULB ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು. BSB BSB: Then the anointed priest shall take some of the bull’s blood and bring it into the Tent of Meeting.
6 ULB ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು. BSB BSB: The priest is to dip his finger in the blood and sprinkle some of it seven times before the LORD, in front of the veil of the sanctuary.
7 ULB ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. BSB BSB: The priest must then put some of the blood on the horns of the altar of fragrant incense that is before the LORD in the Tent of Meeting. And he is to pour out the rest of the bull’s blood at the base of the altar of burnt offering at the entrance to the Tent of Meeting.
8 ULB ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು, BSB BSB: Then he shall remove all the fat from the bull of the sin offering—the fat that covers the entrails, all the fat that is on them,
9 ULB ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು. BSB BSB: both kidneys with the fat on them near the loins, and the lobe of the liver, which he is to remove with the kidneys—
10 ULB ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. BSB BSB: just as the fat is removed from the ox of the peace offering. Then the priest shall burn them on the altar of burnt offering.
11 ULB ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, BSB BSB: But the hide of the bull and all its flesh, with its head and legs and its entrails and dung—
12 ULB ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು. BSB BSB: all the rest of the bull—he must take outside the camp to a ceremonially clean place where the ashes are poured out, and there he must burn it on a wood fire on the ash heap.
13 ULB << <ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ, BSB BSB: Now if the whole congregation of Israel strays unintentionally and the matter escapes the notice of the assembly so that they violate any of the LORD’s commandments and incur guilt by doing what is forbidden,
14 ULB ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು. BSB BSB: when they become aware of the sin they have committed, then the assembly must bring a young bull as a sin offering and present it before the Tent of Meeting.
15 ULB ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು. BSB BSB: The elders of the congregation are to lay their hands on the bull’s head before the LORD, and it shall be slaughtered before the LORD.
16 ULB ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು, BSB BSB: Then the anointed priest is to bring some of the bull’s blood into the Tent of Meeting,
17 ULB ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು. BSB BSB: and he is to dip his finger in the blood and sprinkle it seven times before the LORD in front of the veil.
18 ULB ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. BSB BSB: He is also to put some of the blood on the horns of the altar that is before the LORD in the Tent of Meeting, and he must pour out the rest of the blood at the base of the altar of burnt offering at the entrance to the Tent of Meeting.
19 ULB ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. BSB BSB: And he is to remove all the fat from it and burn it on the altar.
20 ULB ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು. BSB BSB: He shall offer this bull just as he did the bull for the sin offering; in this way the priest will make atonement on their behalf, and they will be forgiven.
21 ULB ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ. BSB BSB: Then he is to take the bull outside the camp and burn it, just as he burned the first bull. It is the sin offering for the assembly.
22 ULB << <ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ, BSB BSB: When a leader sins unintentionally and does what is prohibited by any of the commandments of the LORD his God, he incurs guilt.
23 ULB ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು. BSB BSB: When he becomes aware of the sin he has committed, he must bring an unblemished male goat as his offering.
24 ULB ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ. BSB BSB: He is to lay his hand on the head of the goat and slaughter it at the place where the burnt offering is slaughtered before the LORD. It is a sin offering.
25 ULB ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. BSB BSB: Then the priest is to take some of the blood of the sin offering with his finger, put it on the horns of the altar of burnt offering, and pour out the rest of the blood at the base of the altar.
26 ULB ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. BSB BSB: He must burn all its fat on the altar, like the fat of the peace offerings; thus the priest will make atonement for that man’s sin, and he will be forgiven.
27 ULB << <ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ, BSB BSB: And if one of the common people sins unintentionally and does what is prohibited by any of the LORD’s commandments, he incurs guilt.
28 ULB ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು. BSB BSB: When he becomes aware of the sin he has committed, he must bring an unblemished female goat as his offering for that sin.
29 ULB ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. BSB BSB: He is to lay his hand on the head of the sin offering and slaughter it at the place of the burnt offering.
30 ULB ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. BSB BSB: Then the priest is to take some of its blood with his finger, put it on the horns of the altar of burnt offering, and pour out the rest of the blood at the base of the altar.
31 ULB ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. BSB BSB: Then he is to remove all the fat, just as it is removed from the peace offering, and the priest is to burn it on the altar as a pleasing aroma to the LORD. In this way the priest will make atonement for him, and he will be forgiven.
32 ULB << <ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು. BSB BSB: If, however, he brings a lamb as a sin offering, he must bring an unblemished female.
33 ULB ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು. BSB BSB: And he is to lay his hand on the head of the sin offering and slaughter it as a sin offering at the place where the burnt offering is slaughtered.
34 ULB ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು. BSB BSB: Then the priest is to take some of the blood of the sin offering with his finger, put it on the horns of the altar of burnt offering, and pour out the rest of its blood at the base of the altar.
35 ULB ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. BSB BSB: And he shall remove all the fat, just as the fat of the lamb is removed from the peace offerings, and he shall burn it on the altar along with the food offerings to the LORD. In this way the priest will make atonement for him for the sin he has committed, and he will be forgiven.
Select verses for actions: Enter goes to them and Escape comes back.