1 ULB ಯೆಹೋವನು ಮೋಶೆಗೆ, BSB BSB: And the LORD said to Moses,
2 ULB <<ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ, BSB BSB: “If someone sins and acts unfaithfully against the LORD by deceiving his neighbor in regard to a deposit or security entrusted to him or stolen, or if he extorts his neighbor
3 ULB ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು. BSB BSB: or finds lost property and lies about it and swears falsely, or if he commits any such sin that a man might commit—
4 ULB ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು, BSB BSB: once he has sinned and becomes guilty, he must return what he has stolen or taken by extortion, or the deposit entrusted to him, or the lost property he found,
5 ULB ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು. BSB BSB: or anything else about which he has sworn falsely. He must make restitution in full, add a fifth of the value, and pay it to the owner on the day he acknowledges his guilt.
6 ULB ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು. BSB BSB: Then he must bring to the priest his guilt offering to the LORD: an unblemished ram of proper value from the flock.
7 ULB ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು>> ಎಂದು ಹೇಳಿದನು. BSB BSB: In this way the priest will make atonement for him before the LORD, and he will be forgiven for anything he may have done to incur guilt.”
8 ULB ಅನಂತರ ಯೆಹೋವನು ಮೋಶೆಗೆ, BSB BSB: Then the LORD said to Moses,
9 ULB <<ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, <ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು. BSB BSB: “Command Aaron and his sons that this is the law of the burnt offering: The burnt offering is to remain on the hearth of the altar all night, until morning, and the fire must be kept burning on the altar.
10 ULB ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು. BSB BSB: And the priest shall put on his linen robe and linen undergarments, and he shall remove from the altar the ashes of the burnt offering that the fire has consumed and place them beside it.
11 ULB ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. BSB BSB: Then he must take off his garments, put on other clothes, and carry the ashes outside the camp to a ceremonially clean place.
12 ULB ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು. BSB BSB: The fire on the altar shall be kept burning; it must not be extinguished. Every morning the priest is to add wood to the fire, arrange the burnt offering on it, and burn the fat portions of the peace offerings on it.
13 ULB ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು. BSB BSB: The fire shall be kept burning on the altar continually; it must not be extinguished.
14 ULB << <ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು. BSB BSB: Now this is the law of the grain offering: Aaron’s sons shall present it before the LORD in front of the altar.
15 ULB ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು. BSB BSB: The priest is to remove a handful of fine flour and olive oil, together with all the frankincense from the grain offering, and burn the memorial portion on the altar as a pleasing aroma to the LORD.
16 ULB ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು. BSB BSB: Aaron and his sons are to eat the remainder. It must be eaten without leaven in a holy place; they are to eat it in the courtyard of the Tent of Meeting.
17 ULB ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು. BSB BSB: It must not be baked with leaven; I have assigned it as their portion of My food offerings. It is most holy, like the sin offering and the guilt offering.
18 ULB ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು>>> ಎಂದು ಹೇಳಿದನು. BSB BSB: Any male among the sons of Aaron may eat it. This is a permanent portion from the food offerings to the LORD for the generations to come. Anything that touches them will become holy.”
19 ULB ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ, BSB BSB: Then the LORD said to Moses,
20 ULB <<ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು. BSB BSB: “This is the offering that Aaron and his sons must present to the LORD on the day he is anointed: a tenth of an ephah of fine flour as a regular grain offering, half of it in the morning and half in the evening.
21 ULB ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು. BSB BSB: It shall be prepared with oil on a griddle; you are to bring it well-kneaded and present it as a grain offering broken in pieces, a pleasing aroma to the LORD.
22 ULB ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು. BSB BSB: The priest, who is one of Aaron’s sons and will be anointed to take his place, is to prepare it. As a permanent portion for the LORD, it must be burned completely.
23 ULB ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು>> ಎಂದು ಹೇಳಿದನು. BSB BSB: Every grain offering for a priest shall be burned completely; it is not to be eaten.”
24 ULB ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ, BSB BSB: And the LORD said to Moses,
25 ULB <<ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, <ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು. BSB BSB: “Tell Aaron and his sons that this is the law of the sin offering: In the place where the burnt offering is slaughtered, the sin offering shall be slaughtered before the LORD; it is most holy.
26 ULB ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು. BSB BSB: The priest who offers it shall eat it; it must be eaten in a holy place, in the courtyard of the Tent of Meeting.
27 ULB ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು. BSB BSB: Anything that touches its flesh will become holy, and if any of the blood is spattered on a garment, you must wash it in a holy place.
28 ULB ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು. BSB BSB: The clay pot in which the sin offering is boiled must be broken; if it is boiled in a bronze pot, the pot must be scoured and rinsed with water.
29 ULB ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು. BSB BSB: Any male among the priests may eat it; it is most holy.
30 ULB ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು. BSB BSB: But no sin offering may be eaten if its blood has been brought into the Tent of Meeting to make atonement in the Holy Place; it must be burned.
Select verses for actions: Enter goes to them and Escape comes back.