1 ULB ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು. BSB BSB: On the eighth day Moses summoned Aaron and his sons and the elders of Israel.
2 ULB ಅವನು ಆರೋನನಿಗೆ, <<ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. BSB BSB: He said to Aaron, “Take for yourself a young bull for a sin offering and a ram for a burnt offering, both without blemish, and present them before the LORD.
3 ULB ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, <ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು, BSB BSB: Then speak to the Israelites and say, ‘Take a male goat for a sin offering, a calf and a lamb—both a year old and without blemish—for a burnt offering,
4 ULB ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು>>> ಅಂದನು. BSB BSB: an ox and a ram for a peace offering to sacrifice before the LORD, and a grain offering mixed with oil. For today the LORD will appear to you.’”
5 ULB ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು. BSB BSB: So they took what Moses had commanded to the front of the Tent of Meeting, and the whole congregation drew near and stood before the LORD.
6 ULB ಆಗ ಮೋಶೆ ಅವರಿಗೆ, <<ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು>> ಎಂದು ಹೇಳಿದನು. BSB BSB: And Moses said, “This is what the LORD has commanded you to do, so that the glory of the LORD may appear to you.”
7 ULB ಆಗ ಮೋಶೆ ಆರೋನನಿಗೆ, <<ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು>> ಎಂದು ಹೇಳಿದನು. BSB BSB: Then Moses said to Aaron, “Approach the altar and sacrifice your sin offering and your burnt offering to make atonement for yourself and for the people. And sacrifice the people’s offering to make atonement for them, as the LORD has commanded.”
8 ULB ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು. BSB BSB: So Aaron approached the altar and slaughtered the calf as a sin offering for himself.
9 ULB ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು. BSB BSB: The sons of Aaron brought the blood to him, and he dipped his finger in the blood and applied it to the horns of the altar. And he poured out the rest of the blood at the base of the altar.
10 ULB ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು. BSB BSB: On the altar he burned the fat, the kidneys, and the lobe of the liver from the sin offering, as the LORD had commanded Moses.
11 ULB ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು. BSB BSB: But he burned up the flesh and the hide outside the camp.
12 ULB ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು. BSB BSB: Then Aaron slaughtered the burnt offering. His sons brought him the blood, and he splattered it on all sides of the altar.
13 ULB ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. BSB BSB: They brought him the burnt offering piece by piece, including the head, and he burned them on the altar.
14 ULB ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು. BSB BSB: He washed the entrails and the legs and burned them atop the burnt offering on the altar.
15 ULB ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು. BSB BSB: Aaron then presented the people’s offering. He took the male goat for the people’s sin offering, slaughtered it, and offered it for sin like the first one.
16 ULB ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು. BSB BSB: He presented the burnt offering and offered it according to the ordinance.
17 ULB ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. BSB BSB: Next he presented the grain offering, took a handful of it, and burned it on the altar in addition to the morning’s burnt offering.
18 ULB ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು. BSB BSB: Then he slaughtered the ox and the ram as the people’s peace offering. His sons brought him the blood, and he splattered it on all sides of the altar.
19 ULB ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, BSB BSB: They also brought the fat portions from the ox and the ram—the fat tail, the fat covering the entrails, the kidneys, and the lobe of the liver—
20 ULB ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು. BSB BSB: and placed these on the breasts. Aaron burned the fat portions on the altar,
21 ULB ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. BSB BSB: but he waved the breasts and the right thigh as a wave offering before the LORD, as Moses had commanded.
22 ULB ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು. BSB BSB: Aaron lifted up his hands toward the people and blessed them. And having made the sin offering, the burnt offering, and the peace offering, he stepped down.
23 ULB ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು. BSB BSB: Moses and Aaron then entered the Tent of Meeting. When they came out, they blessed the people, and the glory of the LORD appeared to all the people.
24 ULB ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು. BSB BSB: Fire came out from the presence of the LORD and consumed the burnt offering and the fat portions on the altar. And when all the people saw it, they shouted for joy and fell facedown.
Select verses for actions: Enter goes to them and Escape comes back.