3 ULB ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದ ಕಾರಣ ಅವುಗಳನ್ನು ನಿಮಗೆ ಕ್ರಮವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು. BSB BSB: Therefore, having carefully investigated everything from the beginning, it seemed good also to me to write an orderly account for you, most excellent Theophilus,
4 ULB ನಿಮಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀವು ತಿಳಿದುಕೊಳ್ಳಬಹುದು. BSB BSB: so that you may know the certainty of the things you have been taught.
6 ULB ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮ ನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು. BSB BSB: Both of them were righteous in the sight of God, walking blamelessly in all the commandments and decrees of the Lord.
7 ULB ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ಮುಪ್ಪಿನವರಾಗಿದ್ದರು. BSB BSB: But they had no children, because Elizabeth was barren, and they were both well along in years.
8 ULB ಹೀಗಿರಲಾಗಿ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿರಲು BSB BSB: One day while Zechariah’s division was on duty and he was serving as priest before God,
9 ULB ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದು ಯಾಜಕರ ಪದ್ಧತಿಯ ಪ್ರಕಾರ ಅವನ ಪಾಲಿಗೆ ಬಂತು. BSB BSB: he was chosen by lot, according to the custom of the priesthood, to enter the temple of the Lord and burn incense.
10 ULB ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನರ ಗುಂಪೆಲ್ಲಾ ಹೊರಗೆ ನಿಂತು ದೇವರನ್ನು ಪ್ರಾರ್ಥಿಸುತ್ತಿರಲಾಗಿ BSB BSB: And at the hour of the incense offering, the whole congregation was praying outside.
11 ULB ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. BSB BSB: Just then an angel of the Lord appeared to Zechariah, standing at the right side of the altar of incense.
12 ULB ಜಕರೀಯನು ಅವನನ್ನು ಕಂಡು ನಡುಗುತ್ತಾ ಭಯಹಿಡಿದವನಾದನು. BSB BSB: When Zechariah saw him, he was startled and gripped with fear.
13 ULB ಆದರೆ ಆ ದೂತನು ಅವನಿಗೆ- ಜಕರೀಯಾ, ಭಯಪಡಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. BSB BSB: But the angel said to him, “Do not be afraid, Zechariah, because your prayer has been heard. Your wife Elizabeth will bear you a son, and you are to give him the name John.
14 ULB ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. BSB BSB: He will be a joy and delight to you, and many will rejoice at his birth,
15 ULB ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮಧ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮ ಭರಿತನಾಗಿರುವನು. BSB BSB: for he will be great in the sight of the Lord. He shall never take wine or strong drink, and he will be filled with the Holy Spirit even from his mother’s womb.
16 ULB ಇಸ್ರಾಯೇಲ್ಯರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. ಅವನು ಆತನ ಮುಂದೆ ಹೋಗಿ ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ BSB BSB: Many of the sons of Israel he will turn back to the Lord their God.
18 ULB ಜಕರೀಯನು ಆ ದೂತನಿಗೆ- ಇದನ್ನು ನಾನು ಹೇಗೆ ತಿಳುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ದಿನಹೋದವಳು ಎಂದು ಹೇಳಿದ್ದಕ್ಕೆ BSB BSB: “How can I be sure of this?” Zechariah asked the angel. “I am an old man, and my wife is well along in years.”
19 ULB ಆ ದೂತನು- ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ. BSB BSB: “I am Gabriel,” replied the angel. “I stand in the presence of God, and I have been sent to speak to you and to bring you this good news.
20 ULB ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು. BSB BSB: And now you will be silent and unable to speak until the day this comes to pass, because you did not believe my words, which will be fulfilled at their proper time.”
21 ULB ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. BSB BSB: Meanwhile, the people were waiting for Zechariah and wondering why he took so long in the temple.
22 ULB ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು- ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು. BSB BSB: When he came out and was unable to speak to them, they realized he had seen a vision in the temple. He kept making signs to them but remained unable to speak.
23 ULB ಆತನ ಯಾಜಕವರ್ಗದ ದಿನಗಳು ತೀರಿದನಂತರ ಜಕರೀಯನು ತನ್ನ ಮನೆಗೆ ಹೋದನು. BSB BSB: And when the days of his service were complete, he returned home.
24 ULB ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. BSB BSB: After these days, his wife Elizabeth became pregnant and for five months remained in seclusion. She declared,
25 ULB ಕರ್ತನು ಈ ಕಾಲದಲ್ಲಿ ನನ್ನನ್ನು ಕಟಾಕ್ಷಿಸಿ ನನಗೆ ಈ ರೀತಿಯಾಗಿ ಮಾಡಿ ಜನರಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ ಎಂದು ಹೇಳಿದಳು. BSB BSB: “The Lord has done this for me. In these days He has shown me favor and taken away my disgrace among the people.”
27 ULB ಆ ಕನ್ಯೆಯ ಹೆಸರು ಮರಿಯಳು; ಆಕೆಯು ದಾವೀದನ ಮನೆತನದ ಯೋಸೇಫನೆಂಬ ಪುರುಷನಿಗೆ ವಿವಾಹ ನಿಶ್ಚಿತಾರ್ಥವಾಗಿದ್ದಳು. BSB BSB: to a virgin pledged in marriage to a man named Joseph, who was of the house of David. And the virgin’s name was Mary.
28 ULB ಆ ದೂತನು ಆಕೆಯ ಬಳಿಗೆ ಬಂದು ‘ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ’; ‘ಕರ್ತನು ನಿನ್ನ ಸಂಗಡ ಇದ್ದಾನೆ’ ಅಂದನು. BSB BSB: The angel appeared to her and said, “Greetings, you who are highly favored! The Lord is with you.”
29 ULB ಆಕೆಯು ಆ ಮಾತಿಗೆ ತತ್ತರಿಸಿ- ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿರಲಾಗಿ BSB BSB: Mary was greatly troubled at his words and wondered what kind of greeting this might be.
30 ULB ಆ ದೂತನು ಆಕೆಗೆ- ಮರಿಯಳೇ, ಹೆದರಬೇಡ; ನಿನಗೆ ದೇವರ ದಯೆ ದೊರಕಿತು. BSB BSB: So the angel told her, “Do not be afraid, Mary, for you have found favor with God.
31 ULB ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು BSB BSB: Behold, you will conceive and give birth to a son, and you are to give Him the name Jesus.
32 ULB ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು. BSB BSB: He will be great and will be called the Son of the Most High. The Lord God will give Him the throne of His father David,
33 ULB ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ ಎಂದು ಹೇಳಿದನು. BSB BSB: and He will reign over the house of Jacob forever. His kingdom will never end!”
35 ULB ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವುದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು. BSB BSB: The angel replied, “The Holy Spirit will come upon you, and the power of the Most High will overshadow you. So the Holy One to be born will be called the Son of God.
36 ULB ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು. BSB BSB: Look, even Elizabeth your relative has conceived a son in her old age, and she who was called barren is in her sixth month.
37 ULB ದೇವರಿಂದ ಅಸಾದ್ಯವಾದದ್ದು ಯಾವುದೂ ಇಲ್ಲ ಮತ್ತು ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು. BSB BSB: For no word from God will ever fail.”
39 ULB ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ BSB BSB: In those days Mary got ready and hurried to a town in the hill country of Judah,
40 ULB ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. BSB BSB: where she entered the home of Zechariah and greeted Elizabeth.
41 ULB ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಪಕ್ಕನೆ ಕುಣಿದಾಡಿತು. BSB BSB: When Elizabeth heard Mary’s greeting, the baby leaped in her womb, and Elizabeth was filled with the Holy Spirit.
42 ULB ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾಗಿ ಮಹಾಧ್ವನಿಯಿಂದ ಕೂಗಿ- ನೀನು ಸ್ತ್ರೀಯರೊಳಗೆ ಆಶೀರ್ವಾದ ಹೊಂದಿದವಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. BSB BSB: In a loud voice she exclaimed, “Blessed are you among women, and blessed is the fruit of your womb!
43 ULB ನನ್ನ ಸ್ವಾಮಿಯ ತಾಯಿಯು ನನ್ನ ಬಳಿಗೆ ಬರುವಷ್ಟು ಭಾಗ್ಯ ನನಗೆ ಎಲ್ಲಿಂದಾಯಿತು? BSB BSB: And why am I so honored, that the mother of my Lord should come to me?
44 ULB ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು. ಇದನ್ನು ನಂಬಿದವಳಾದ ನೀನು ಧನ್ಯಳೇ; BSB BSB: For as soon as the sound of your greeting reached my ears, the baby in my womb leaped for joy.
45 ULB ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. BSB BSB: Blessed is she who has believed that the Lord’s word to her will be fulfilled.”
47 ULB ನನ್ನ ಆತ್ಮವು ನನ್ನ ರಕ್ಷಕನಾದ ದೇವರ ವಿಷಯದಲ್ಲಿ ಉಲ್ಲಾಸಗೊಂಡದೆ. BSB BSB: and my spirit rejoices in God my Savior!
49 ULB ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು. BSB BSB: For the Mighty One has done great things for me. Holy is His name.
50 ULB ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವದು. BSB BSB: His mercy extends to those who fear Him, from generation to generation.
51 ULB ಆತನು ತನ್ನ ಹೃದಯ ವಿಚಾರಗಳಲ್ಲಿ ಅಹಂಕರಿಸಿದವರನ್ನು ಚದರಿಸಿಬಿಟ್ಟಿದ್ದಾನೆ. BSB BSB: He has performed mighty deeds with His arm; He has scattered those who are proud in the thoughts of their hearts.
52 ULB ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ. BSB BSB: He has brought down rulers from their thrones, but has exalted the humble.
53 ULB ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. BSB BSB: He has filled the hungry with good things, but has sent the rich away empty.
54 ULB ಆತನು ನಮ್ಮ ಪೂರ್ವಿಕರಿಗೆ ಹೇಳಿದ್ದಕ್ಕೆ ಸರಿಯಾಗಿ BSB BSB: He has helped His servant Israel, remembering to be merciful,
55 ULB ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬದನ್ನು ನೆನಸಿಕೊಂಡು ತನ್ನ ಸೇವಕನಾದ ಇಸ್ರಾಯೇಲನನ್ನು ಕೈಹಿಡಿದಿದ್ದಾನೆ BSB BSB: as He promised to our fathers, to Abraham and his descendants forever.”
56 ULB ಅಂದಳು. ಮರಿಯಳು ಹೆಚ್ಚು ಕಡಿಮೆ ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು. BSB BSB: Mary stayed with Elizabeth for about three months and then returned home.
57 ULB ಎಲಿಸಬೇತಳು ದಿನತುಂಬಿ ಗಂಡುಮಗುವನ್ನು ಹೆತ್ತಳು. BSB BSB: When the time came for Elizabeth to have her child, she gave birth to a son.
58 ULB ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯೆಯನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು. BSB BSB: Her neighbors and relatives heard that the Lord had shown her great mercy, and they rejoiced with her.
59 ULB ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು. BSB BSB: On the eighth day, when they came to circumcise the child, they were going to name him after his father Zechariah.
60 ULB ಈ ವಿಷಯದಲ್ಲಿ ಎಲಿಸಬೇತಳು <<ಅದು ಬೇಡ, ಯೋಹಾನನೆಂದು ಹೆಸರಿಡಬೇಕು>> ಅನ್ನಲು BSB BSB: But his mother replied, “No! He shall be called John.”
61 ULB ಅವರು- <<ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ>> ಎಂದು ಆಕೆಗೆ ಹೇಳಿ BSB BSB: They said to her, “There is no one among your relatives who bears this name.”
62 ULB ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬದಾಗಿ ಜಕರೀಯನಿಗೆ ಸನ್ನೆಮಾಡಿದರು. BSB BSB: So they made signs to his father to find out what he wanted to name the child.
63 ULB ಅವನು ಒಂದು ಹಲಗೆಯನ್ನು ತರಿಸಿಕೊಂಡು- <<ಆತನ ಹೆಸರು ಯೋಹಾನನು>> ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು. BSB BSB: Zechariah asked for a tablet and wrote, “His name is John.” And they were all amazed.
64 ULB ಕೂಡಲೆ ಅವನಿಗೆ ಬಾಯಿ ಬಂತು, ನಾಲಿಗೆ ಸಡಿಲವಾಯಿತು, ಅವನು ಮಾತಾಡುವ ಶಕ್ತಿಯುಳ್ಳವನಾಗಿ ದೇವರನ್ನು ಕೊಂಡಾಡಿದನು. BSB BSB: Immediately Zechariah’s mouth was opened and his tongue was released, and he began to speak, praising God.
65 ULB ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು. BSB BSB: All their neighbors were filled with awe, and people throughout the hill country of Judea were talking about these events.
66 ULB ಕೇಳಿದವರೆಲ್ಲರೂ- <<ಆಹಾ, ಈ ಕೂಸು ಎಂಥವನಾಗುವನೋ?>> ಎಂದು ಈ ಸಂಗತಿಗಳನ್ನು ಮನಸ್ಸಿನಲ್ಲಿಟ್ಟುಕೊಂಡರು ಮತ್ತು ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು. BSB BSB: And all who heard this wondered in their hearts and asked, “What then will this child become?” For the Lord’s hand was with him.
67 ULB ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಪ್ರವಾದನವಚನವನ್ನು ನುಡಿದದ್ದೇನಂದರೆ- BSB BSB: Then his father Zechariah was filled with the Holy Spirit and prophesied:
68 ULB <<ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ. BSB BSB: “Blessed be the Lord, the God of Israel, because He has visited and redeemed His people.
71 ULB ಆತನು ನಮ್ಮ ಪಿತೃಗಳಿಗೆ ದಯೆಯನ್ನು ತೋರಿಸುವವನಾಗಿಯೂ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿಯೂ ಇದ್ದು ನಮ್ಮ ವೈರಿಗಳಿಂದಲೂ ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ. BSB BSB: salvation from our enemies and from the hand of all who hate us,
74 ULB ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದು ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ. BSB BSB: deliverance from hostile hands, that we may serve Him without fear,
76 ULB ಮಗುವೇ, ನೀನಾದರೋ ಪರಾತ್ಪರನ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ BSB BSB: And you, child, will be called a prophet of the Most High; for you will go on before the Lord to prepare the way for Him,
77 ULB ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ತೋರಿಸಿ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ ಅದು BSB BSB: to give to His people the knowledge of salvation through the forgiveness of their sins,
79 ULB ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದರುವವರಾದ ನಮಗೆ ಬೆಳಕನ್ನುಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು>> ಅಂದನು. BSB BSB: to shine on those who live in darkness and in the shadow of death, to guide our feet into the path of peace.”
80 ULB ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಅರಣ್ಯ ಪ್ರದೇಶಗಳಲ್ಲಿ ಇದ್ದನು. BSB BSB: And the child grew and became strong in spirit; and he lived in the wilderness until the time of his public appearance to Israel.