1 ULB ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸುವು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.” BSB BSB: In the meantime, a crowd of many thousands had gathered, so that they were trampling one another. Jesus began to speak first to His disciples: “Beware of the leaven of the Pharisees, which is hypocrisy.
2 ULB ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವುದಿಲ್ಲ. ಪ್ರಕಟಗೊಳ್ಳದ ರಹಸ್ಯವೂ ಇಲ್ಲ. BSB BSB: There is nothing concealed that will not be disclosed, and nothing hidden that will not be made known.
3 ULB ಹೀಗಿರುವದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವದು. ಮತ್ತು ನೀವು ಕೊಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವದು. BSB BSB: What you have spoken in the dark will be heard in the daylight, and what you have whispered in the inner rooms will be proclaimed from the housetops.
4 ULB ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ- ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. BSB BSB: I tell you, My friends, do not be afraid of those who kill the body and after that can do no more.
5 ULB ಆದರೆ ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ದಬ್ಬಲು ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. BSB BSB: But I will show you whom you should fear: Fear the One who, after you have been killed, has authority to throw you into hell. Yes, I tell you, fear Him!
6 ULB ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. BSB BSB: Are not five sparrows sold for two pennies? Yet not one of them is forgotten by God.
7 ULB ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. BSB BSB: And even the very hairs of your head are all numbered. So do not be afraid; you are worth more than many sparrows.
8 ULB ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು, BSB BSB: I tell you, everyone who confesses Me before men, the Son of Man will also confess him before the angels of God.
9 ULB ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು. BSB BSB: But whoever denies Me before men will be denied before the angels of God.
10 ULB ಮನುಷ್ಯಕುಮಾರನ ವಿರುದ್ಧ ಮಾತಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮೆಯೇ ದೊರಕದು. BSB BSB: And everyone who speaks a word against the Son of Man will be forgiven, but whoever blasphemes against the Holy Spirit will not be forgiven.
11 ULB ಅವರು ನಿಮ್ಮನ್ನು ಪ್ರಾರ್ಥನ ಮಂದಿರಗಳಿಗೂ ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ ಅಧಿಪತಿಗಳ ಎದುರಿಗೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ. BSB BSB: When you are brought before synagogues, rulers, and authorities, do not worry about how to defend yourselves or what to say.
12 ULB ಯಾಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು ಅಂದನು. BSB BSB: For at that time the Holy Spirit will teach you what you should say.”
13 ULB ಆಗ ಜನರಲ್ಲಿ ಒಬ್ಬನು- ಭೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು ಎಂದು ಯೇಸುವನ್ನು ಕೇಳಿಕೊಳ್ಳಲು BSB BSB: Someone in the crowd said to Him, “Teacher, tell my brother to divide the inheritance with me.”
14 ULB ಆತನು- ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು ಎಂದು ಅವನನ್ನು ಕೇಳಿ, BSB BSB: But Jesus replied, “Man, who appointed Me judge or executor between you?”
15 ULB ಜನರಿಗೆ– ಎಲ್ಲಾ ದುರಾಸೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು. BSB BSB: And He said to them, “Watch out! Guard yourselves against every form of greed, for one’s life does not consist in the abundance of his possessions.”
16 ULB ಅದೇನಂದರೆ ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು. BSB BSB: Then He told them a parable: “The ground of a certain rich man produced an abundance.
17 ULB ಆಗ ಅವನು ತನ್ನೊಳಗೆ- ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ- ಒಂದು ಕೆಲಸ ಮಾಡುತ್ತೇನೆ. BSB BSB: So he thought to himself, ‘What shall I do, since I have nowhere to store my crops?’
18 ULB ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನುಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ಧವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು. BSB BSB: Then he said, ‘This is what I will do: I will tear down my barns and will build bigger ones, and there I will store up all my grain and my goods.
19 ULB ನನ್ನ ಜೀವಾತ್ಮಕ್ಕೆ- ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ; ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು. BSB BSB: Then I will say to myself, “You have plenty of good things laid up for many years. Take it easy. Eat, drink, and be merry!”’
20 ULB ಆದರೆ ದೇವರು ಅವನಿಗೆ- ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು. BSB BSB: But God said to him, ‘You fool! This very night your life will be required of you. Then who will own what you have accumulated?’
21 ULB ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವಯ೯ವಂತನಾಗದೆ ಇರುವವನು ಅವನಂತಯೇ ಇದ್ದಾನೆ ಅಂದನು. BSB BSB: This is how it will be for anyone who stores up treasure for himself but is not rich toward God.”
22 ULB ಇದಲ್ಲದೆ ಯೇಸುವು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ- ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. BSB BSB: Then Jesus said to His disciples, “Therefore I tell you, do not worry about your life, what you will eat, or about your body, what you will wear.
23 ULB ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು. BSB BSB: For life is more than food, and the body more than clothes.
24 ULB ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಅದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ. BSB BSB: Consider the ravens: They do not sow or reap, they have no storehouse or barn; yet God feeds them. How much more valuable you are than the birds!
25 ULB ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಉದ್ದವಾದರೂ ಎಳೆದು ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? BSB BSB: Who of you by worrying can add a single hour to his life?
26 ULB ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವದೇಕೆ? BSB BSB: So if you cannot do such a small thing, why do you worry about the rest?
27 ULB ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ. BSB BSB: Consider how the lilies grow: They do not labor or spin. Yet I tell you, not even Solomon in all his glory was adorned like one of these.
28 ULB ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು. BSB BSB: If that is how God clothes the grass of the field, which is here today and tomorrow is thrown into the furnace, how much more will He clothe you, O you of little faith!
29 ULB ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ. BSB BSB: And do not be concerned about what you will eat or drink. Do not worry about it.
30 ULB ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ. BSB BSB: For the Gentiles of the world strive after all these things, and your Father knows that you need them.
31 ULB ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವದು. BSB BSB: But seek His kingdom, and these things will be added unto you.
32 ULB ಚಿಕ್ಕ ಹಿಂಡೇ, ಹೇದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. BSB BSB: Do not be afraid, little flock, for your Father is pleased to give you the kingdom.
33 ULB ನಿಮಗಿರುವದನ್ನು ಮಾರಿಬಿಟ್ಟು ದಾನಾಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. BSB BSB: Sell your possessions and give to the poor. Provide yourselves with purses that will not wear out, an inexhaustible treasure in heaven, where no thief approaches and no moth destroys.
34 ULB ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುವದಷ್ಟೇ. BSB BSB: For where your treasure is, there your heart will be also.
35 ULB ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. BSB BSB: Be dressed for service and keep your lamps burning.
36 ULB ನೀವಂತೂ ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವ ದಾಸರಂತೆ ಇರಿ. BSB BSB: Then you will be like servants waiting for their master to return from the wedding banquet, so that when he comes and knocks, they can open the door for him at once.
37 ULB ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕೂರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: Blessed are those servants whom the master finds on watch when he returns. Truly I tell you, he will dress himself to serve and will have them recline at the table, and he himself will come and wait on them.
38 ULB ಯಜಮಾನನು ಬರುವಾಗ ನಡು ರಾತ್ರಿಆಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಸೇವಕರು ಧನ್ಯರು. BSB BSB: Even if he comes in the second or third watch of the night and finds them alert, those servants will be blessed.
39 ULB ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳುಕೊಳ್ಳಿರಿ. BSB BSB: But understand this: If the homeowner had known at what hour the thief was coming, he would not have let his house be broken into.
40 ULB ನೀವು ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಅಂದನು. BSB BSB: You also must be ready, because the Son of Man will come at an hour you do not expect.”
41 ULB ಆಗ ಪೇತ್ರನು- ಸ್ವಾಮಿ, ನೀನು ಈ ಸಾಮ್ಯವು ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ? ಎಂದು ಕೇಳಲು. BSB BSB: “Lord,” said Peter, “are You addressing this parable to us, or to everyone else as well?”
42 ULB ಯೇಸು ಸ್ವಾಮಿಯು ಹೇಳಿದ್ದೇನಂದರೆ- ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮನೆವಾರ್ತೆಯವನು ಯಾರು? BSB BSB: And the Lord answered, “Who then is the faithful and wise manager, whom the master puts in charge of his servants to give them their portion at the proper time?
43 ULB ಯಜಮಾನನು ಬಂದು ಯಾವ ಆಳು ಹೀಗೆ ಮಾಡುವದನ್ನು ಕಾಣುವನೋ ಆ ಆಳು ಧನ್ಯನು. BSB BSB: Blessed is that servant whose master finds him doing so when he returns.
44 ULB ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: Truly I tell you, he will put him in charge of all his possessions.
45 ULB ಆದರೆ ಆ ಆಳು- ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, BSB BSB: But suppose that servant says in his heart, ‘My master will be a long time in coming,’ and he begins to beat the menservants and maidservants, and to eat and drink and get drunk.
46 ULB ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. BSB BSB: The master of that servant will come on a day he does not expect and at an hour he does not anticipate. Then he will cut him to pieces and assign him a place with the unbelievers.
48 ULB ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು. BSB BSB: But the one who unknowingly does things worthy of punishment will be beaten with few blows. From everyone who has been given much, much will be required; and from him who has been entrusted with much, even more will be demanded.
50 ULB ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ. BSB BSB: But I have a baptism to undergo, and how distressed I am until it is accomplished!
52 ULB ಹೇಗೆಂದರೆ- ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. BSB BSB: From now on, five in one household will be divided, three against two and two against three.
53 ULB ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇಧವುಳ್ಳವರಾಗಿ ವಿಂಗಡಿಸಿ ಹೋಗುವರು, ಅಂದನು. BSB BSB: They will be divided, father against son and son against father, mother against daughter and daughter against mother, mother-in-law against daughter-in-law and daughter-in-law against mother-in-law.”
54 ULB ಇದಲ್ಲದೆ ಯೇಸುವು ಎಲ್ಲಜನರಿಗೂ ಹೇಳಿದ್ದೇನಂದರೆ- ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ; ಹಾಗೆಯೇ ಆಗುತ್ತದೆ. BSB BSB: Then Jesus said to the crowds, “As soon as you see a cloud rising in the west, you say, ‘A shower is coming,’ and that is what happens.
55 ULB ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. BSB BSB: And when the south wind blows, you say, ‘It will be hot,’ and it is.
56 ULB ಕಪಟಿಗಳೆ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ; ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆಹೊಗಿದ್ದಿರಾ? BSB BSB: You hypocrites! You know how to interpret the appearance of the earth and sky. Why don’t you know how to interpret the present time?
57 ULB ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವದಿಲ್ಲ? BSB BSB: And why don’t you judge for yourselves what is right?
58 ULB ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. BSB BSB: Make every effort to reconcile with your adversary while you are on your way to the magistrate. Otherwise, he may drag you off to the judge, and the judge may hand you over to the officer, and the officer may throw you into prison.
59 ULB ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ, ಅಂದನು. BSB BSB: I tell you, you will not get out until you have paid the very last penny.”