2 ULB ಅದಕ್ಕೆ ಆತನು ಅವರಿಗೆ ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? BSB BSB: To this He replied, “Do you think that these Galileans were worse sinners than all the other Galileans, because they suffered this way?
3 ULB ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ. BSB BSB: No, I tell you. But unless you repent, you too will all perish.
4 ULB ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ? BSB BSB: Or those eighteen who were killed when the tower of Siloam collapsed on them: Do you think that they were more sinful than all the others living in Jerusalem?
5 ULB ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು. BSB BSB: No, I tell you. But unless you repent, you too will all perish.”
7 ULB ಬಳಿಕ ಅವನು ತೋಟಗಾರನಿಗೆ- ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು ಎಂದು ಹೇಳಿದನು. BSB BSB: So he said to the keeper of the vineyard, ‘Look, for the past three years I have come to search for fruit on this fig tree and haven’t found any. Therefore cut it down! Why should it use up the soil?’
8 ULB ಆದಕ್ಕೆ ಆ ತೋಟಗಾರನು- ಯಜಮಾನನೇ ಈ ವರುಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗಿದು ಗೊಬ್ಬರ ಹಾಕುತ್ತೇನೆ. BSB BSB: ‘Sir,’ the man replied, ‘leave it alone again this year, until I dig around it and fertilize it.
9 ULB ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು ಎಂದು ಉತ್ತರ ಕೊಟ್ಟನು. BSB BSB: If it bears fruit next year, fine. But if not, you can cut it down.’”
10 ULB ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. BSB BSB: One Sabbath Jesus was teaching in one of the synagogues,
11 ULB ಅಲ್ಲಿ ಹದಿನೆಂಟು ವರುಷಗಳಿಂದ ದುರಾತ್ಮನಿಂದ ಭಾದಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಣ್ಣುಮಗಳು ಇದ್ದಳು. BSB BSB: and a woman there had been disabled by a spirit for eighteen years. She was hunched over and could not stand up straight.
12 ULB ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ- ನಿನ್ನ ರೋಗವು ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; BSB BSB: When Jesus saw her, He called her over and said, “Woman, you are set free from your disability.”
13 ULB ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು BSB BSB: Then He placed His hands on her, and immediately she straightened up and began to glorify God.
14 ULB ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ- ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು. BSB BSB: But the synagogue leader was indignant that Jesus had healed on the Sabbath. “There are six days for work,” he told the crowd. “So come and be healed on those days and not on the Sabbath.”
15 ULB ಆ ಮಾತನ್ನು ಕೇಳಿ ಸ್ವಾಮಿಯು ಅವನಿಗೆ- ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ. BSB BSB: “You hypocrites!” the Lord replied. “Does not each of you on the Sabbath untie his ox or donkey from the stall and lead it to water?
16 ULB ಹಾಗಾದರೆ ಹದಿನ್ನೆಂಟು ವರುಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ ಎಂದು ಉತ್ತರ ಕೊಟ್ಟನು. BSB BSB: Then should not this daughter of Abraham, whom Satan has kept bound for eighteen long years, be released from her bondage on the Sabbath day?”
17 ULB ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು. BSB BSB: When Jesus said this, all His adversaries were humiliated. And the whole crowd rejoiced at all the glorious things He was doing.
18 ULB ಯೇಸು ಹೇಳಿದ್ದೇನಂದರೆ- ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? BSB BSB: Then Jesus asked, “What is the kingdom of God like? To what can I compare it?
19 ULB ಅದನ್ನು ನಾನು ಯಾವುದಕ್ಕೆ ಹೋಲಿಸಲಿ? ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು. BSB BSB: It is like a mustard seed that a man tossed into his garden. It grew and became a tree, and the birds of the air nested in its branches.”
20 ULB ಆತನು ಇನ್ನೂ ಹೇಳಿದ್ದೇನಂದರೆ- ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. BSB BSB: Again He asked, “To what can I compare the kingdom of God?
21 ULB ಅದನ್ನು ಒಬ್ಬಳು ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು ಅಂದನು. BSB BSB: It is like leaven that a woman took and mixed into three measures of flour, until all of it was leavened.”
22 ULB ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು. BSB BSB: Then Jesus traveled throughout the towns and villages, teaching as He made His way toward Jerusalem.
23 ULB ಆಗ ಒಬ್ಬನು- ಸ್ವಾಮಿ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು, BSB BSB: “Lord,” someone asked Him, “will only a few people be saved?” Jesus answered,
24 ULB ಆತನು ಅವರಿಗೆ- ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ. BSB BSB: “Make every effort to enter through the narrow door. For many, I tell you, will try to enter and will not be able.
25 ULB ಮನೆ ಯಜಮಾನನು ಎದ್ದು ಬಾಗಿಲು ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ- ಕರ್ತನೇ ನಮಗೆ ಬಾಗಿಲು ತೆರೆಯಿರಿ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು- ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು BSB BSB: After the master of the house gets up and shuts the door, you will stand outside knocking and saying, ‘Lord, open the door for us.’ But he will reply, ‘I do not know where you are from.’
26 ULB ಅದಕ್ಕೆ ನೀವು- ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ ಎಂದು ಹೇಳುವದಕ್ಕೆ ತೊಡಗುವಿರಿ. BSB BSB: Then you will say, ‘We ate and drank with you, and you taught in our streets.’
27 ULB ಆದರೆ ಅವನು- ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು. BSB BSB: And he will answer, ‘I tell you, I do not know where you are from. Depart from me, all you evildoers.’
28 ULB ಅಬ್ರಹಾಮ, ಇಸಾಕ, ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ; ನಿಮ್ಮನ್ನು ಮಾತ್ರ ಹೊರಗೆ ಹಾಕುವುದನ್ನು ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು. BSB BSB: There will be weeping and gnashing of teeth when you see Abraham, Isaac, Jacob, and all the prophets in the kingdom of God, but you yourselves are thrown out.
29 ULB ಇದಲ್ಲದೆ ಪೂರ್ವ ಪಶ್ಛಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು. BSB BSB: People will come from east and west and north and south, and will recline at the table in the kingdom of God.
30 ULB ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು ಅಂದನು. BSB BSB: And indeed, some who are last will be first, and some who are first will be last.”
31 ULB ಅದೇ ಗಳಿಗೆಯಲ್ಲಿ ಕೆಲವು ಮಂದಿ ಪರಿಸಾಯರು ಹತ್ತಿರ ಬಂದು ಯೇಸುವಿಗೆ- ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ ಎಂದು ಹೇಳಲು, BSB BSB: At that very hour, some Pharisees came to Jesus and told Him, “Leave this place and get away, because Herod wants to kill You.”
32 ULB ಆತನು ಅವರಿಗೆ- ನೀವು ಹೋಗಿ ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ ಎಂದು ಆ ನರಿಗೆ ಹೇಳಿರಿ ಅಂದನು. BSB BSB: But Jesus replied, “Go tell that fox, ‘Look, I will keep driving out demons and healing people today and tomorrow, and on the third day I will reach My goal.’
33 ULB ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ. BSB BSB: Nevertheless, I must keep going today and tomorrow and the next day, for it is not admissible for a prophet to perish outside of Jerusalem.
34 ULB ಯೆರೂಸಲೇಮೇ; ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. BSB BSB: O Jerusalem, Jerusalem, who kills the prophets and stones those sent to her, how often I have longed to gather your children together as a hen gathers her chicks under her wings, but you were unwilling!
35 ULB ನೋಡಿರಿ, ನಿಮ್ಮ ದೇವಾಲಯ ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ. BSB BSB: Look, your house is left to you desolate. And I tell you that you will not see Me again until you say, ‘Blessed is He who comes in the name of the Lord.’”