1 ULB ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಾ ಇರಲು BSB BSB: Now all the tax collectors and sinners were gathering around to listen to Jesus.
2 ULB ಫರಿಸಾಯರೂ ಶಾಸ್ತ್ರಿಗಳೂ- ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು. BSB BSB: So the Pharisees and scribes began to grumble: “This man welcomes sinners and eats with them.”
3 ULB ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. BSB BSB: Then Jesus told them this parable:
4 ULB ಅದೇನಂದರೆ- ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಭತ್ತೊಂಭತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ? BSB BSB: “What man among you, if he has a hundred sheep and loses one of them, does not leave the ninety-nine in the pasture and go after the one that is lost, until he finds it?
5 ULB ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು BSB BSB: And when he finds it, he joyfully puts it on his shoulders,
6 ULB ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ- ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಅವರಿಗೆ ಹೇಳುವನಲ್ಲವೇ. BSB BSB: comes home, and calls together his friends and neighbors to tell them, ‘Rejoice with me, for I have found my lost sheep!’
7 ULB ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ. BSB BSB: I tell you that in the same way there will be more joy in heaven over one sinner who repents than over ninety-nine righteous ones who do not need to repent.
8 ULB ಯಾವ ಹೆಂಗಸು ತನ್ನಲ್ಲಿ ಹತ್ತು ಪಾವಲಿಗಳಿರಲಾಗಿ ಒಂದು ಪಾವಲಿ ಕಳೆದು ಹೋದರೆ ದೀಪಹಚ್ಚಿ ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ? BSB BSB: Or what woman who has ten silver coins and loses one of them does not light a lamp, sweep her house, and search carefully until she finds it?
9 ULB ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು- ಕಳೆದು ಹೋಗಿದ್ದ ಪಾವಲಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಹೇಳುವಳಲ್ಲವೇ. BSB BSB: And when she finds it, she calls together her friends and neighbors to say, ‘Rejoice with me, for I have found my lost coin.’
10 ULB ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು. BSB BSB: In the same way, I tell you, there is joy in the presence of God’s angels over one sinner who repents.”
12 ULB ಅವರಲ್ಲಿ ಕಿರಿಯವನು ತಂದೆಗೆ- ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು. BSB BSB: The younger son said to him, ‘Father, give me my share of the estate.’ So he divided his property between them.
13 ULB ಸ್ವಲ್ಪ ದಿವಸದ ಮೇಲೆ ಆ ಕಿರೀಮಗನು ತನ್ನ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಹೊರಟುಹೋಗಿ ಅಲ್ಲಿ ಪಟಿಂಗನಾಗಿ ಬದುಕಿ ತನ್ನ ಆಸ್ತಿಯನ್ನು ಹಾಳುಮಾಡಿಕೊಂಡನು. BSB BSB: After a few days, the younger son got everything together and journeyed to a distant country, where he squandered his wealth in wild living.
14 ULB ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು. BSB BSB: After he had spent all he had, a severe famine swept through that country, and he began to be in need.
15 ULB ಆಗ ಅವನು ಹೋಗಿ ಆ ದೇಶದ ನಿವಾಸಿಗಳೊಳಗೆ ಒಬ್ಬನಲ್ಲಿ ಸೇರಿಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸುವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು. BSB BSB: So he went and hired himself out to a citizen of that country, who sent him into his fields to feed the pigs.
16 ULB ಹೀಗಿರಲಾಗಿ ಅವನು ಹಂದಿ ತಿನ್ನುತ್ತಿದ್ದ ಕಾಯಿಗಳನ್ನಾದರೂ ತಿಂದು ಹಸಿವನ್ನು ತೀರಿಸಿಕೊಳ್ಳಬೇಕೆಂದು ಆಶೆಪಟ್ಟನು; ಆದರೂ ಯಾರೂ ಅವನಿಗೆ ಕೊಡಲಿಲ್ಲ. BSB BSB: He longed to fill his belly with the pods the pigs were eating, but no one would give him a thing.
17 ULB ಆಗ ಅವನಿಗೆ ಬುದ್ಧಿಬಂದು ಅವನು- ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ. BSB BSB: Finally he came to his senses and said, ‘How many of my father’s hired servants have plenty of food, but here I am, starving to death!
18 ULB ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ- ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ; BSB BSB: I will get up and go back to my father and say to him, “Father, I have sinned against heaven and against you.
19 ULB ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು. BSB BSB: I am no longer worthy to be called your son. Make me like one of your hired servants.”’
20 ULB ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಬಹಳವಾಗಿ ಮುದ್ದಿಟ್ಟನು. BSB BSB: So he got up and went to his father. But while he was still in the distance, his father saw him and was filled with compassion. He ran to his son, embraced him, and kissed him.
21 ULB ಆದರೂ ಮಗನು ಅವನಿಗೆ- ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿ ಕೊಳ್ಳುವದಕ್ಕೆ ಯೋಗ್ಯನಲ್ಲ- ಎಂದು ಹೇಳಲು BSB BSB: The son declared, ‘Father, I have sinned against heaven and against you. I am no longer worthy to be called your son.’
22 ULB ತಂದೆಯು ತನ್ನ ಆಳುಗಳಿಗೆ- ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿ; ಇವನ ಕೈಗೆ ಉಂಗುರವನ್ನು ಹಾಕಿರಿ; ಕಾಲಿಗೆ ಜೋಡು ಹಾಕಿರಿ; BSB BSB: But the father said to his servants, ‘Quick! Bring the best robe and put it on him. Put a ring on his finger and sandals on his feet.
23 ULB ಕೊಬ್ಬಿಸಿದ ಆ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಉಲ್ಲಾಸಪಡೋಣ. BSB BSB: Bring the fattened calf and kill it. Let us feast and celebrate.
24 ULB ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿ ಸಂತೋಷಿಸುವುದಕ್ಕೂ ಉಲ್ಲಾಸಪಡುವದಕ್ಕೂ ತೊಡಗಿದರು. BSB BSB: For this son of mine was dead and is alive again! He was lost and is found!’ So they began to celebrate.
25 ULB ಆದರೆ ಅವನ ಹಿರೀಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ BSB BSB: Meanwhile the older son was in the field, and as he approached the house, he heard music and dancing.
26 ULB ಆಳುಗಳಲ್ಲಿ ಒಬ್ಬನನ್ನು ತನ್ನ ಬಳಿಗೆ ಕರೆದು- ಇದೇನು ಎಂದು ವಿಚಾರಿಸಿದನು. BSB BSB: So he called one of the servants and asked what was going on.
27 ULB ಆಳು ಅವನಿಗೆ- ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು. BSB BSB: ‘Your brother has returned,’ he said, ‘and your father has killed the fattened calf, because he has him back safe and sound.’
28 ULB ಇದನ್ನು ಕೇಳಿ ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು. BSB BSB: The older son became angry and refused to go in. So his father came out and pleaded with him.
29 ULB ಆದರೆ ಅವನು ತನ್ನ ತಂದೆಗೆ- ನೋಡು, ಇಷ್ಟು ವರುಷ ನಿನಗೆ ಸೇವೆ ಮಾಡಿದ್ದೇನೆ, ಮತ್ತು ನಾನು ನಿನ್ನ ಒಂದಪ್ಪಣೆಯನ್ನಾದರೂ ಎಂದೂ ಮಿಾರಲಿಲ್ಲ; ಆದರೂ ನಾನು ನನ್ನ ಸ್ನೇಹಿತರ ಸಂಗಡ ಉಲ್ಲಾಸಪಡುವದಕ್ಕಾಗಿ ನೀನು ಎಂದೂ ನನಗೆ ಒಂದು ಆಡನ್ನಾದರೂ ಕೊಡಲಿಲ್ಲ. BSB BSB: But he answered his father, ‘Look, all these years I have served you and never disobeyed a commandment of yours. Yet you never gave me even a young goat so I could celebrate with my friends.
30 ULB ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ ಎಂದು ಉತ್ತರಕೊಟ್ಟನು. BSB BSB: But when this son of yours returns from squandering your wealth with prostitutes, you kill the fattened calf for him!’
31 ULB ಅದಕ್ಕೆ ತಂದೆಯು- ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ಮತ್ತು ನನ್ನದೆಲ್ಲಾ ನಿನ್ನದೇ. BSB BSB: ‘Son, you are always with me,’ the father said, ‘and all that is mine is yours.
32 ULB ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. BSB BSB: But it was fitting to celebrate and be glad, because this brother of yours was dead and is alive again; he was lost and is found.’”