1 ULB ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ- ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಮನೆವಾರ್ತೆಯವನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ- ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ, BSB BSB: Jesus also said to His disciples, “There was a rich man whose manager was accused of wasting his possessions.
2 ULB ಯಜಮಾನನು ಅವನನ್ನು ಕರೆದು- ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕೆ ಯೋಗ್ಯನಲ್ಲ ಎಂದು ಹೇಳಿದನು. BSB BSB: So he called him in to ask, ‘What is this I hear about you? Turn in an account of your management, for you cannot be manager any longer.’
3 ULB ಹೀಗಿರಲಾಗಿ ಆ ಮನೆವಾರ್ತೆಯವನು- ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷೆ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ. BSB BSB: The manager said to himself, ‘What shall I do, now that my master is taking away my position? I am too weak to dig and too ashamed to beg.
4 ULB ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು, BSB BSB: I know what I will do so that after my removal from management, people will welcome me into their homes.’
5 ULB ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು- ನೀನು ನನ್ನ ಯಜಮಾನನಿಗೆ ಏನು ಕೊಡಬೇಕು ಎಂದು ಕೇಳಲು BSB BSB: And he called in each one of his master’s debtors. ‘How much do you owe my master?’ he asked the first.
6 ULB ಅವನು ನೂರು ಬುದ್ದಲಿ ಎಣ್ಣೆ ಎಂದಾಗ ಅವನಿಗೆ- ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರಿ ಎಂದು ಹೇಳಿದನು. BSB BSB: ‘A hundred measures of olive oil,’ he answered. ‘Take your bill,’ said the manager, ‘sit down quickly, and write fifty.’
7 ULB ಬಳಿಕ ಮತ್ತೊಬ್ಬನನ್ನು- ನೀನು ಏನು ಕೊಡಬೇಕು ಎಂದು ಕೇಳಲು ಅವನು- ಒಂದು ನೂರು ಖಂಡಗ ಗೋಧಿ ಅಂದಾಗ ಅವನಿಗೆ- ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡಗ ಎಂದು ಬರಿ ಎಂದು ಹೇಳಿದನು. BSB BSB: Then he asked another, ‘And how much do you owe?’ ‘A hundred measures of wheat,’ he replied. ‘Take your bill and write eighty,’ he told him.
8 ULB ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು ಕುರಿತು- ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳ ಪರಲೋಕ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ. BSB BSB: The master commended the dishonest manager because he had acted shrewdly. For the sons of this age are more shrewd in dealing with their own kind than are the sons of light.
9 ULB ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. BSB BSB: I tell you, use worldly wealth to make friends for yourselves so that when it is gone, they will welcome you into eternal dwellings.
10 ULB ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು. BSB BSB: Whoever is faithful with very little will also be faithful with much, and whoever is dishonest with very little will also be dishonest with much.
11 ULB ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು? BSB BSB: So if you have not been faithful with worldly wealth, who will entrust you with true riches?
12 ULB ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಕೊಟ್ಟಾರು? BSB BSB: And if you have not been faithful with the belongings of another, who will give you belongings of your own?
13 ULB ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ ಅಂದನು. BSB BSB: No servant can serve two masters. Either he will hate the one and love the other, or he will be devoted to the one and despise the other. You cannot serve both God and money.”
14 ULB ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು. BSB BSB: The Pharisees, who were lovers of money, heard all of this and were scoffing at Jesus.
15 ULB ಆಗ ಆತನು ಅವರಿಗೆ ಹೇಳಿದ್ದೇನಂದರೆ- ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರೆದುರು ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಠಿಯಲ್ಲಿ ಅಸಹ್ಯವಾಗಿದೆ. BSB BSB: So He said to them, “You are the ones who justify yourselves before men, but God knows your hearts. For what is prized among men is detestable before God.
16 ULB ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯವು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲಾತ್ಕಾರವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ. BSB BSB: The Law and the Prophets were proclaimed until John. Since that time, the gospel of the kingdom of God is being preached, and everyone is forcing his way into it.
17 ULB ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವದು ಸುಲಭ. BSB BSB: But it is easier for heaven and earth to pass away than for a single stroke of a pen to drop out of the Law.
18 ULB ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ. BSB BSB: Anyone who divorces his wife and marries another woman commits adultery, and he who marries a divorced woman commits adultery.
19 ULB ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲ ವಿಧವಾದ ಐಶ್ವರ್ಯಗಳಿಂದ ಕೂಡಿದವನಾಗಿ ಬೆಲೆಬಾಳುವ ನೇರಳೆ ಬಣದ ರೇಶಿಮೆ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವು ವೈಭವದೊಡನೆ ಸುಖವಾಗಿದ್ದು ಸಂತೋಷಪಡುತ್ತಿದ್ದನು. BSB BSB: Now there was a rich man dressed in purple and fine linen, who lived each day in joyous splendor.
20 ULB ಅವನ ಮನೇ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದು ಕೊಂಡಿದ್ದನು. BSB BSB: And a beggar named Lazarus lay at his gate, covered with sores
21 ULB ಇವನು ಮೈತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನವನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. BSB BSB: and longing to be fed with the crumbs that fell from the rich man’s table. Even the dogs came and licked his sores.
22 ULB ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರ ಕ್ರಿಯಾದಿಗಳು ನಡೆದವು. BSB BSB: One day the beggar died and was carried by the angels to Abraham’s side. And the rich man also died and was buried.
23 ULB ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ- BSB BSB: In Hades, where he was in torment, he looked up and saw Abraham from afar, with Lazarus by his side.
24 ULB ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ. ಎಂದು ಕೂಗಿ ಹೇಳಿದನು. BSB BSB: So he cried out, ‘Father Abraham, have mercy on me and send Lazarus to dip the tip of his finger in water and cool my tongue. For I am in agony in this fire.’
25 ULB ಆದರೆ ಅಬ್ರಾಹಾಮನು- ಕಂದಾ ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. BSB BSB: But Abraham answered, ‘Child, remember that during your lifetime you received your good things, while Lazarus received bad things. But now he is comforted here, while you are in agony.
26 ULB ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು ಅಂದನು. BSB BSB: And besides all this, a great chasm has been fixed between us and you, so that even those who wish cannot cross from here to you, nor can anyone cross from there to us.’
27 ULB ಆಗ ಅವನು- ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. BSB BSB: ‘Then I beg you, father,’ he said, ‘send Lazarus to my father’s house,
28 ULB ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು. ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ ಅಂದನು. BSB BSB: for I have five brothers. Let him warn them, so that they will not also end up in this place of torment.’
29 ULB ಆದಕ್ಕೆ ಅಬ್ರಹಾಮನು- ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು- BSB BSB: But Abraham replied, ‘They have Moses and the Prophets; let your brothers listen to them.’
30 ULB ಅವನು ತಂದೆಯೇ ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು. BSB BSB: ‘No, father Abraham,’ he said, ‘but if someone is sent to them from the dead, they will repent.’