1 ULB ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವುದನ್ನು ಕಂಡನು. BSB BSB: Then Jesus looked up and saw the rich putting their gifts into the treasury,
2 ULB ಆಗ ಒಬ್ಬ ಬಡ ವಿಧವೆಯು ಬಂದು ಎರಡು ಕಾಸುಗಳನ್ನು ಹಾಕುವದನ್ನು ಯೇಸುವು ಗಮನಿಸಿ- BSB BSB: and He saw a poor widow put in two small copper coins.
3 ULB ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಬಡ ವಿಧವೆ ಎಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ. BSB BSB: “Truly I tell you,” He said, “this poor widow has put in more than all the others.
4 ULB ಹೇಗಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆಕೊಟ್ಟರು; ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು ಅಂದನು. BSB BSB: For they all contributed out of their surplus, but she out of her poverty has put in all she had to live on.”
5 ULB ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ BSB BSB: As some of the disciples were remarking how the temple was adorned with beautiful stones and consecrated gifts, Jesus said,
7 ULB ಅವರು- ಬೋಧಕನೇ, ಅದು ಯಾವಾಗ ಆಗುವದು? ಅದು ಸಂಭವಿಸುವಾಗ ಯಾವ ಸೂಚನೆ ಗಳುಂಟಾಗುವುವು? ಎಂದು ಆತನನ್ನು ಕೇಳಲು BSB BSB: “Teacher,” they asked, “when will these things happen? And what will be the sign that they are about to take place?”
8 ULB ಯೇಸುವು ಹೇಳಿದ್ದೇನಂದರೆ- ನೀವು ಮೋಸಹೋಗದಂತೆ ಎಚ್ಚರವಾಗಿರಿ. ಯಾಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ನಾನೇ ಕ್ರಿಸ್ತನು, ನಾನೇ ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ. BSB BSB: Jesus answered, “See to it that you are not deceived. For many will come in My name, claiming, ‘I am He,’ and, ‘The time is near.’ Do not follow them.
9 ULB ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ; ಯಾಕೆಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. BSB BSB: When you hear of wars and rebellions, do not be alarmed. These things must happen first, but the end is not imminent.”
10 ULB ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ- ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; BSB BSB: Then He told them, “Nation will rise against nation, and kingdom against kingdom.
11 ULB ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು. BSB BSB: There will be great earthquakes, famines, and pestilences in various places, along with fearful sights and great signs from heaven.
12 ULB ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯು ಅಧಿಪತಿಗಳ ಮುಂದೆಯು ಕರೆದುಕೊಂಡುಹೋಗಿ ಹಿಂಸೆಪಡಿಸುವರು. BSB BSB: But before all this, they will seize you and persecute you. On account of My name they will deliver you to the synagogues and prisons, and they will bring you before kings and governors.
13 ULB ಇದು ಸಾಕ್ಷಿಹೇಳುವದಕ್ಕೆ ನಿಮಗೆ ಅನುಕೂಲವಾಗುವದು. BSB BSB: This will be your opportunity to serve as witnesses.
14 ULB ಆದದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. BSB BSB: So make up your mind not to worry beforehand how to defend yourselves.
15 ULB ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತಾಡುವದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ. BSB BSB: For I will give you speech and wisdom that none of your adversaries will be able to resist or contradict.
16 ULB ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. BSB BSB: You will be betrayed even by parents and brothers and relatives and friends, and some of you will be put to death.
17 ULB ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. BSB BSB: And you will be hated by everyone because of My name.
18 ULB ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವದಿಲ್ಲ. BSB BSB: Yet not even a hair of your head will perish.
19 ULB ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡದುಕೊಳ್ಳುವಿರಿ. BSB BSB: By your patient endurance you will gain your souls.
21 ULB ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. BSB BSB: Then let those who are in Judea flee to the mountains, let those in the city get out, and let those in the country stay out of the city.
22 ULB ಯಾಕೆಂದರೆ ಬರೆದಿರುವದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. BSB BSB: For these are the days of vengeance, to fulfill all that is written.
23 ULB ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. BSB BSB: How miserable those days will be for pregnant and nursing mothers! For there will be great distress upon the land and wrath against this people.
25 ULB ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂಮಿಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿಮಿತ್ತವಾಗಿ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವದು. BSB BSB: There will be signs in the sun and moon and stars, and on the earth dismay among the nations, bewildered by the roaring of the sea and the surging of the waves.
26 ULB ಆಕಾಶದ ಶಕ್ತಿಗಳು ಕದಲುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. BSB BSB: Men will faint from fear and anxiety over what is coming upon the earth, for the powers of the heavens will be shaken.
27 ULB ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು. BSB BSB: At that time they will see the Son of Man coming in a cloud with power and great glory.
28 ULB ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಗಳನ್ನು ಮೇಲಕ್ಕೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ ಅಂದನು. BSB BSB: When these things begin to happen, stand up and lift up your heads, because your redemption is drawing near.”
29 ULB ಯೇಸುವು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ- ಅಂಜೂರ ಮುಂತಾದ ಮರಗಳನ್ನೂ ನೋಡಿರಿ. BSB BSB: Then Jesus told them a parable: “Look at the fig tree and all the trees.
30 ULB ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳುಕೊಳ್ಳೂತ್ತೀರಲ್ಲಾ. BSB BSB: When they sprout leaves, you can see for yourselves and know that summer is near.
31 ULB ಹಾಗೆಯೇ ಇವುಗಳಾಗುವದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. BSB BSB: So also, when you see these things happening, know that the kingdom of God is near.
32 ULB ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: Truly I tell you, this generation will not pass away until all these things have happened.
33 ULB ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ. BSB BSB: Heaven and earth will pass away, but My words will never pass away.
34 ULB ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿ ಭೋಜನದ ಮದದಿಂದಲೂ ಅಮಲಿನಿಂದಲೂ ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು. BSB BSB: But watch yourselves, or your hearts will be weighed down by dissipation, drunkenness, and the worries of life—and that day will spring upon you suddenly like a snare.
35 ULB ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು. BSB BSB: For it will come upon all who dwell on the face of all the earth.
36 ULB ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು. BSB BSB: So keep watch at all times, and pray that you may have the strength to escape all that is about to happen and to stand before the Son of Man.”
37 ULB ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಉಳಿದುಕೊಳ್ಳುತ್ತಾ ಇದ್ದನು. BSB BSB: Every day Jesus taught at the temple, but every evening He went out to spend the night on the Mount of Olives.
38 ULB ಜನರೆಲ್ಲರು ಆತನ ಉಪದೇಶವನ್ನು ಕೇಳಬೇಕೆಂದು ಬೆಳಿಗ್ಗೆ ಬೇಗನೆ ಎದ್ದು ದೇವಾಲಯಕ್ಕೆ ಆತನ ಬಳಿಗೆ ಬರುತ್ತಿದ್ದರು. BSB BSB: And early in the morning all the people would come to hear Him at the temple.