1 ULB ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಪಸ್ಕವೆಂಬ ಹಬ್ಬವು ಹತ್ತಿರವಾದಾಗ BSB BSB: Now the Feast of Unleavened Bread, called the Passover, was approaching,
2 ULB ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು. BSB BSB: and the chief priests and scribes were looking for a way to put Jesus to death, for they feared the people.
3 ULB ಆಗ ಸೈತಾನನು ಹನ್ನೆರಡು ಮಂದಿಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು ಅವನು BSB BSB: Then Satan entered Judas Iscariot, who was one of the Twelve.
4 ULB ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು. BSB BSB: And Judas went to discuss with the chief priests and temple officers how he might betray Jesus to them.
5 ULB ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು BSB BSB: They were delighted and agreed to give him money.
6 ULB ಅವನು ಒಡಂಬಟ್ಟು ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು. BSB BSB: Judas consented, and began to look for an opportunity to betray Jesus to them in the absence of a crowd.
7 ULB ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ BSB BSB: Then came the day of Unleavened Bread on which the Passover lamb was to be sacrificed.
8 ULB ಯೇಸು ಪೇತ್ರನಿಗೂ ಯೋಹಾನನಿಗೂ- ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ ಎಂಧು ಹೇಳಿ ಅವರನ್ನು ಕಳುಹಿಸಿದನು. BSB BSB: Jesus sent Peter and John, saying, “Go and make preparations for us to eat the Passover.”
9 ULB ಅವರು- ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ? ಎಂದು ಆತನನ್ನು ಕೇಳಲು BSB BSB: “Where do You want us to prepare it?” they asked.
10 ULB ಆತನು ಅವರಿಗೆ- ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ BSB BSB: He answered, “When you enter the city, a man carrying a jug of water will meet you. Follow him to the house he enters,
11 ULB ಆ ಮನೆಯ ಯಜಮಾನನಿಗೆ, 'ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ಕೊಠಡಿ ಎಲ್ಲಿ, ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾರೆ,' ಎಂದು ಹೇಳಿರಿ. BSB BSB: and say to the owner of that house, ‘The Teacher asks: Where is the guest room, where I may eat the Passover with My disciples?’
12 ULB ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ ಎಂದು ಹೇಳಿ ಕಳುಹಿಸಿದನು. BSB BSB: And he will show you a large upper room, already furnished. Make preparations there.”
13 ULB ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ದಮಾಡಿದರು. BSB BSB: So they went and found it just as Jesus had told them. And they prepared the Passover.
14 ULB ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು. BSB BSB: When the hour had come, Jesus reclined at the table with His apostles.
16 ULB ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವದೇ ಇಲ್ಲ ಎಂದು ಹೇಳಿದನು. BSB BSB: For I tell you that I will not eat it again until it is fulfilled in the kingdom of God.”
17 ULB ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ- ಇದನ್ನು ತೆಗೆದುಕೊಂಡು ಹಂಚಿಕೊಂಡುಕುಡಿಯಿರಿ. BSB BSB: After taking the cup, He gave thanks and said, “Take this and divide it among yourselves.
18 ULB ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು. BSB BSB: For I tell you that I will not drink of the fruit of the vine from now on until the kingdom of God comes.”
19 ULB ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು- ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ ಅಂದನು. BSB BSB: And He took the bread, gave thanks and broke it, and gave it to them, saying, “This is My body, given for you; do this in remembrance of Me.”
20 ULB ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು- ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. BSB BSB: In the same way, after supper He took the cup, saying, “This cup is the new covenant in My blood, which is poured out for you.
21 ULB ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ. BSB BSB: Look! The hand of My betrayer is with Mine on the table.
22 ULB ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು. BSB BSB: Indeed, the Son of Man will go as it has been determined, but woe to that man who betrays Him.”
23 ULB ಇದನ್ನು ಕೇಳಿ ಅವರು- ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳ ತೊಡಗಿದರು. BSB BSB: Then they began to question among themselves which of them was going to do this.
24 ULB ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು. BSB BSB: A dispute also arose among the disciples as to which of them should be considered the greatest.
25 ULB ಆಗ ಆತನು ಅವರಿಗೆ- ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ. BSB BSB: So Jesus declared, “The kings of the Gentiles lord it over them, and those in authority over them call themselves benefactors.
26 ULB ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. BSB BSB: But you shall not be like them. Instead, the greatest among you should be like the youngest, and the one who leads like the one who serves.
27 ULB ಯಾರು ಹೆಚ್ಚಿನವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ. BSB BSB: For who is greater, the one who reclines at the table or the one who serves? Is it not the one who reclines? But I am among you as one who serves.
28 ULB ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು. BSB BSB: You are the ones who have stood by Me in My trials.
29 ULB ಆದದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನಿಯಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ; BSB BSB: And I bestow on you a kingdom, just as My Father has bestowed one on Me,
30 ULB ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ. BSB BSB: so that you may eat and drink at My table in My kingdom and sit on thrones, judging the twelve tribes of Israel.
31 ULB ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮನ್ನು ಗೋಧಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು; BSB BSB: Simon, Simon, Satan has asked to sift all of you like wheat.
32 ULB ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿ ಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು. BSB BSB: But I have prayed for you, Simon, that your faith will not fail. And when you have turned back, strengthen your brothers.”
33 ULB ಅದರೆ ಅವನು- ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ ಅನ್ನಲು ಆತನು- ಪೇತ್ರನೇ, BSB BSB: “Lord,” said Peter, “I am ready to go with You even to prison and to death.”
34 ULB ನನ್ನ ವಿಷಯದಲ್ಲಿ- ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು. BSB BSB: But Jesus replied, “I tell you, Peter, the rooster will not crow today until you have denied three times that you know Me.”
37 ULB ಯಾಕೆಂದರೆ- ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು. BSB BSB: For I tell you that this Scripture must be fulfilled in Me: ‘And He was numbered with the transgressors.’ For what is written about Me is reaching its fulfillment.”
38 ULB ಅವರು- ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ ಅನ್ನಲು ಆತನು ಅವರಿಗೆ- ಅಷ್ಟು ಸಾಕು ಅಂದನು. BSB BSB: So they said, “Look, Lord, here are two swords.” “That is enough,” He answered.
39 ULB ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. BSB BSB: Jesus went out as usual to the Mount of Olives, and the disciples followed Him.
40 ULB ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ- ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ ಎಂದು ಹೇಳಿದನು. BSB BSB: When He came to the place, He told them, “Pray that you will not enter into temptation.”
41 ULB ಆ ಮೇಲೆ ಆತನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೊಣಕಾಲೂರಿ- ತಂದೆಯೇ, BSB BSB: And He withdrew about a stone’s throw beyond them, where He knelt down and prayed,
43 ULB ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. BSB BSB: Then an angel from heaven appeared to Him and strengthened Him.
44 ULB ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ ವೇದನೆಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂಮಿಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು. BSB BSB: And in His anguish, He prayed more earnestly, and His sweat became like drops of blood falling to the ground.
45 ULB ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ಅವರು, ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವದನ್ನು ಕಂಡು ಅವರಿಗೆ- BSB BSB: When Jesus rose from prayer and returned to the disciples, He found them asleep, exhausted from sorrow.
46 ULB ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು. BSB BSB: “Why are you sleeping?” He asked. “Get up and pray so that you will not enter into temptation.”
47 ULB ಆತನು ಇನ್ನೂ ಮಾತಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, BSB BSB: While He was still speaking, a crowd arrived, led by the man called Judas, one of the Twelve. He approached Jesus to kiss Him.
48 ULB ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು ಯೇಸು ಅವನಿಗೆ- ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ ಎಂದು ಕೇಳಿದನು. BSB BSB: But Jesus asked him, “Judas, are you betraying the Son of Man with a kiss?”
49 ULB ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ- ಕರ್ತನೇ, ನಾವು ಕತ್ತಿಯಿಂದ ಹೊಡೆಯೊಣವೋ ಎಂದು ಕೇಳಿದರು. BSB BSB: Those around Jesus saw what was about to happen and said, “Lord, should we strike with our swords?”
50 ULB ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿಹಾಕಿದನು. BSB BSB: And one of them struck the servant of the high priest, cutting off his right ear.
51 ULB ಆದರೆ ಯೇಸು- ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು. BSB BSB: But Jesus answered, “No more of this!” And He touched the man’s ear and healed him.
52 ULB ಬಳಿಕ ಯೇಸು ತನ್ನನ್ನು ಹಿಡಿಯುವದಕ್ಕೆ ಬಂದ ಮಹಾಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ- ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ? BSB BSB: Then Jesus said to the chief priests, temple officers, and elders who had come for Him, “Have you come out with swords and clubs as you would against an outlaw?
53 ULB ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ ಎಂದು ಹೇಳಿದನು. BSB BSB: Every day I was with you in the temple courts, and you did not lay a hand on Me. But this hour belongs to you and to the power of darkness.”
54 ULB ಅವರು ಆತನನ್ನು ಹಿಡಿದು ಮಹಾ ಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು; ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು. BSB BSB: Then they seized Jesus, led Him away, and took Him into the house of the high priest. And Peter followed at a distance.
55 ULB ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕೂಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು. BSB BSB: When those present had kindled a fire in the middle of the courtyard and sat down together, Peter sat down among them.
56 ULB ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು ಅವನನ್ನು ದೃಷ್ಟಿಸಿ ನೋಡಿ- ಇವನು ಸಹ ಅವನ ಸಂಗಡ ಇದ್ದವನು ಅಂದಳು. BSB BSB: A servant girl saw him seated in the firelight and looked intently at him. “This man also was with Him,” she said.
57 ULB ಆದರೆ ಅವನು- ನಾನು ಅವನನ್ನು ಅರಿಯೆನಮ್ಮಾ ಎಂದು ಹೇಳಿದನು. BSB BSB: But Peter denied it. “Woman, I do not know Him,” he said.
58 ULB ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು- ನೀನೂ ಸಹ ಅವರಲ್ಲಿ ಒಬ್ಬನು ಅನ್ನಲು ಪೇತ್ರನು- ನಾನಲ್ಲಪ್ಪಾ ಅಂದನು. BSB BSB: A short time later, someone else saw him and said, “You also are one of them.” But Peter said, “Man, I am not.”
59 ULB ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು- ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ ಎಂದು ದೃಡವಾಗಿ ಹೇಳಿದನು. BSB BSB: About an hour later, another man insisted, “Certainly this man was with Him, for he too is a Galilean.”
60 ULB ಆದರೆ ಪೇತ್ರನು- ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು. BSB BSB: “Man, I do not know what you are talking about,” Peter replied. And immediately, while he was still speaking, the rooster crowed.
61 ULB ಸ್ವಾಮಿಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು- ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆ ನೆಂಬದಾಗಿ ಹೇಳುವಿ ಎಂದು ಸ್ವಾಮಿ ನುಡಿದ ಮಾತನ್ನು ನೆನಪಿಸಿಕೊಂಡು BSB BSB: And the Lord turned and looked at Peter. Then Peter remembered the word that the Lord had spoken to him: “Before the rooster crows today, you will deny Me three times.”
62 ULB ಹೊರಗೆ ಹೋಗಿ ತುಂಬಾ ದುಃಖದಿಂದ ಅತ್ತನು. BSB BSB: And he went outside and wept bitterly.
63 ULB ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಹಾಸ್ಯಮಾಡುತ್ತಾ BSB BSB: The men who were holding Jesus began to mock Him and beat Him.
64 ULB ಆತನಿಗೆ ಮುಸುಕುಹಾಕಿ ಹೊಡೆದು- ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು ಎಂದು ಆತನನ್ನು ಕೇಳಿದರು. BSB BSB: They blindfolded Him and kept demanding, “Prophesy! Who hit You?”
65 ULB ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು. BSB BSB: And they said many other blasphemous things against Him.
66 ULB ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು- BSB BSB: At daybreak the council of the elders of the people, both the chief priests and scribes, met together. They led Jesus into their Sanhedrin and said,
67 ULB ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು ಅಂದರು. ಆತನು ಅವರಿಗೆ- ನಾನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ, BSB BSB: “If You are the Christ, tell us.” Jesus answered, “If I tell you, you will not believe.
68 ULB ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವದಿಲ್ಲ. BSB BSB: And if I ask you a question, you will not answer.
69 ULB ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು. BSB BSB: But from now on the Son of Man will be seated at the right hand of the power of God.”
70 ULB ಆಗ ಎಲ್ಲರು- ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ- ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ ಎಂದು ಹೇಳಿದನು. BSB BSB: So they all asked, “Are You then the Son of God?” He replied, “You say that I am.”
71 ULB ಅದಕ್ಕೆ ಅವರು- ನಮಗೆ ಸಾಕ್ಷಿ ಇನ್ನುಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ ಅಂದರು. BSB BSB: “Why do we need any more testimony?” they declared. “We have heard it for ourselves from His own lips.”