2 ULB ಹನ್ನನು ಮತ್ತು ಕಾಯಫನೂ ಮಹಾಯಾಜಕರಾಗಿದ್ದ ಕಾಲದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ಅಡವಿಯಲ್ಲಿ ದೇವರ ವಾಕ್ಯವು ಪ್ರಕಟವಾಯಿತು. BSB BSB: during the high priesthood of Annas and Caiaphas, the word of God came to John son of Zechariah in the wilderness.
3 ULB ಆತನು ಯೊರ್ದಾನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ- ನೀವು ಪಾಪ ಪರಿಹಾರಕ್ಕಾಗಿರುವ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು. BSB BSB: He went into all the region around the Jordan, preaching a baptism of repentance for the forgiveness of sins,
4 ULB ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ- “<ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವದು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವದು, ಡೊಂಕಾಗಿರುವಂಥದು ನೆಟ್ಟಗಾಗುವದು, ಕೊರಕಲಾದ ದಾರಿಗಳು ಸಮವಾಗುವದು. ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬುದಾಗಿ ಅಡವಿಯಲ್ಲಿ ಕೂಗುವವನ ಶಬ್ದವದೆ> ಎಂಬುದೇ.>> BSB BSB: as it is written in the book of the words of Isaiah the prophet: “A voice of one calling in the wilderness, ‘Prepare the way for the Lord, make straight paths for Him.
7 ULB ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ- <<ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಉಪದೇಶ ಮಾಡಿದವರಾರು? BSB BSB: Then John said to the crowds coming out to be baptized by him, “You brood of vipers, who warned you to flee from the coming wrath?
8 ULB ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. <ಅಬ್ರಹಾಮನು ನಮಗೆ ತಂದೆಯಲ್ಲವೇ> ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ. BSB BSB: Produce fruit, then, in keeping with repentance. And do not begin to say to yourselves, ‘We have Abraham as our father.’ For I tell you that out of these stones God can raise up children for Abraham.
9 ULB ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು>> ಎಂದು ಹೇಳಿದನು. BSB BSB: The axe lies ready at the root of the trees, and every tree that does not produce good fruit will be cut down and thrown into the fire.”
10 ULB ಆಗ ಆ ಗುಂಪಿನವರು- <<ಹಾಗಾದರೆ ನಾವೇನು ಮಾಡಬೇಕು?>> ಎಂದು ಆತನನ್ನು ಕೇಳಿದ್ದಕ್ಕೆ BSB BSB: The crowds asked him, “What then should we do?”
11 ULB ಆತನು- <<ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ>> ಎಂದು ಅವರಿಗೆ ಹೇಳಿದನು. BSB BSB: John replied, “Whoever has two tunics should share with him who has none, and whoever has food should do the same.”
12 ULB ತೆರಿಗೆವಸೂಲಿ ಮಾಡುವವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು- <<ಗುರುವೇ, ನಾವೇನು ಮಾಡಬೇಕು>> ಎಂದು ಆತನನ್ನು ಕೇಳಲು BSB BSB: Even tax collectors came to be baptized. “Teacher,” they asked, “what should we do?”
13 ULB ಆತನು- <<ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ>> ಎಂದು ಅವರಿಗೆ ಹೇಳಿದನು. BSB BSB: “Collect no more than you are authorized,” he answered.
14 ULB ಸಿಪಾಯಿಗಳು ಸಹ ಬಂದು- <<ನಾವು ಏನು ಮಾಡಬೇಕು>> ಎಂದು ಆತನನ್ನು ಕೇಳಿದಾಗ ಆತನು ಅವರಿಗೆ- <<ಯಾರನ್ನಾದರೂ ಬೆದರಿಸಿ ದುಡ್ಡು ಕಸಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ>> ಎಂದು ಹೇಳಿದನು. BSB BSB: Then some soldiers asked him, “And what should we do?” “Do not take money by force or false accusation,” he said. “Be content with your wages.”
15 ULB ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು BSB BSB: The people were waiting expectantly and were all wondering in their hearts if John could be the Christ.
16 ULB ಯೋಹಾನನು ಅವರೆಲ್ಲರಿಗೆ- <<ನಾನಂತೂ ನಿಮಗೆ ನೀರಿನ ಸ್ನಾನಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು. BSB BSB: John answered all of them: “I baptize you with water, but One more powerful than I will come, the straps of whose sandals I am not worthy to untie. He will baptize you with the Holy Spirit and with fire.
17 ULB ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋಧಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವುದಕ್ಕಿದ್ದಾನೆ, ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು>> ಎಂದು ಉತ್ತರಕೊಟ್ಟನು. BSB BSB: His winnowing fork is in His hand to clear His threshing floor and to gather the wheat into His barn; but He will burn up the chaff with unquenchable fire.”
18 ULB ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಸುವಾರ್ತೆಯನ್ನು ಸಾರುತ್ತಿದ್ದನು. BSB BSB: With these and many other exhortations, John proclaimed the good news to the people.
19 ULB ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ BSB BSB: But when he rebuked Herod the tetrarch regarding his brother’s wife Herodias and all the evils he had done,
20 ULB ಯೋಹಾನನಿಂದ ಗದರಿಸಲ್ಪಟ್ಟಿದರಿಂದ ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು. BSB BSB: Herod added this to them all: He locked John up in prison.
21 ULB ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು; BSB BSB: When all the people were being baptized, Jesus was baptized too. And as He was praying, heaven was opened,
22 ULB ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ- <<ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ>> ಎಂಬ ವಾಣಿಯು ಪರಲೋಕದಿಂದ ಬಂತು. BSB BSB: and the Holy Spirit descended on Him in a bodily form like a dove. And a voice came from heaven: “You are My beloved Son; in You I am well pleased.”
24 ULB ಯೋಸೆಫನು ಹೇಲಿಯನ ಮಗನು; ಇವನು ಮತ್ಥಾತನು ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; BSB BSB: the son of Matthat, the son of Levi, the son of Melchi, the son of Jannai, the son of Joseph,
25 ULB ಇವನು ಯೋಸೇಫನ ಮಗನು; ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು; BSB BSB: the son of Mattathias, the son of Amos, the son of Nahum, the son of Esli, the son of Naggai,
26 ULB ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮಿಯನ ಮಗನು; ಇವನು ಯೋಸೇಖನ ಮಗನು; BSB BSB: the son of Maath, the son of Mattathias, the son of Semein, the son of Josech, the son of Joda,
27 ULB ಇವನು ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾಬೆಲನ ಮಗನು, ಇವನು ಸಲಥಿಯೇಲನ ಮಗನು; ಇವನು ನೇರಿಯನ ಮಗನು; BSB BSB: the son of Joanan, the son of Rhesa, the son of Zerubbabel, the son of Shealtiel, the son of Neri,
28 ULB ಇವನು ಮೆಲ್ಖಿಯನ ಮಗನು; ಇವನು ಅದ್ದಿಯನ ಮಗನು; ಇವನು ಕೋಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು; BSB BSB: the son of Melchi, the son of Addi, the son of Cosam, the son of Elmadam, the son of Er,
29 ULB ಇವನು ಯೆಹೋಷುವನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯನ ಮಗನು; BSB BSB: the son of Joshua, the son of Eliezer, the son of Jorim, the son of Matthat, the son of Levi,
30 ULB ಇವನು ಸಿಮಿಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು; BSB BSB: the son of Simeon, the son of Judah, the son of Joseph, the son of Jonam, the son of Eliakim,
32 ULB ಇವನು ಇಶಾಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು; BSB BSB: the son of Jesse, the son of Obed, the son of Boaz, the son of Sala, the son of Nahshon,
33 ULB ಇವನು ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಸನ ಮಗನು; BSB BSB: the son of Amminadab, the son of Admin, the son of Arni, the son of Hezron, the son of Perez, the son of Judah,
34 ULB ಇವನು ಯೂದನ ಮಗನು; ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಾಹೋರನ ಮಗನು; BSB BSB: the son of Jacob, the son of Isaac, the son of Abraham, the son of Terah, the son of Nahor,
35 ULB ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು; BSB BSB: the son of Serug, the son of Reu, the son of Peleg, the son of Eber, the son of Shelah,
37 ULB ಇವನು ಮತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಯಿನಾನನ ಮಗನು; BSB BSB: the son of Methuselah, the son of Enoch, the son of Jared, the son of Mahalalel, the son of Cainan,