1 ULB ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌಮಿಗೆ ಬಂದನು. BSB BSB: When Jesus had concluded His discourse in the hearing of the people, He went to Capernaum.
2 ULB ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು. BSB BSB: There a highly valued servant of a centurion was sick and about to die.
3 ULB ಅವನು ಯೇಸುವಿನ ಸುದ್ಧಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು. BSB BSB: When the centurion heard about Jesus, he sent some Jewish elders to ask Him to come and heal his servant.
4 ULB ಅವರು ಯೇಸುವಿನ ಬಳಿಗೆ ಬಂದು- ನಿನ್ನಿಂದ ಇಂಥ ಉಪಕಾರ ಹೊಂದುವದಕ್ಕೆ ಅವನು ಯೋಗ್ಯನು; BSB BSB: They came to Jesus and pleaded with Him earnestly, “This man is worthy to have You grant this,
6 ULB ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಥಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ- ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ; ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ. BSB BSB: So Jesus went with them. But when He was not far from the house, the centurion sent friends with the message: “Lord, do not trouble Yourself, for I am not worthy to have You come under my roof.
7 ULB ಈ ಕಾರಣದಿಂದ ನಾನು ನನ್ನನ್ನು ನಿಮ್ಮ ಬಳಿಗೆ ಬರುವುದಕ್ಕೆ ತಕ್ಕವನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. BSB BSB: That is why I did not consider myself worthy to come to You. But just say the word, and my servant will be healed.
8 ULB ನಾನು ಸಹ ಮತ್ತೊಬ್ಬರ ಕೈ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಎಂಬದಾಗಿ ಹೇಳಿಸಿದನು. BSB BSB: For I myself am a man under authority, with soldiers under me. I tell one to go, and he goes, and another to come, and he comes. I tell my servant to do something, and he does it.”
9 ULB ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು. BSB BSB: When Jesus heard this, He marveled at the centurion. Turning to the crowd following Him, He said, “I tell you, not even in Israel have I found such great faith.”
10 ULB ತರುವಾಯ ಆ ಶತಾಥಿಪತಿಯ ಕಡೆಯಿಂದ ಬಂದವರು ತಿರಿಗಿ ಮನೆಗೆ ಹೋಗಿ ಆಳು ಆರೋಗ್ಯವಾಗಿರುವದನ್ನು ಕಂಡರು. BSB BSB: And when the messengers returned to the house, they found the servant in good health.
11 ULB ಸ್ವಲ್ಪಕಾಲದ ನಂತರ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ, ಇನ್ನೂ ಅನೇಕರೂ ಹೋಗುತ್ತಿದ್ದರು. BSB BSB: Soon afterward, Jesus went to a town called Nain. His disciples went with Him, accompanied by a large crowd.
12 ULB ಆತನು ಊರು ಬಾಗಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು. BSB BSB: As He approached the town gate, He saw a dead man being carried out, the only son of his mother, and she was a widow. And a large crowd from the town was with her.
13 ULB ಸ್ವಾಮಿಯು ಆಕೆಯನ್ನು ಕಂಡು ಕನಿಕರಿಸಿ- BSB BSB: When the Lord saw her, He had compassion on her and said, “Do not weep.”
14 ULB ಅಳಬೇಡ ಎಂದು ಆಕೆಗೆ ಹೇಳಿ ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು- ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು. BSB BSB: Then He went up and touched the coffin, and those carrying it stood still. “Young man,” He said, “I tell you, get up!”
15 ULB ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು. BSB BSB: And the dead man sat up and began to speak! Then Jesus gave him back to his mother.
16 ULB ಎಲ್ಲರು ಭಯಹಿಡಿದವರಾಗಿ- ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ ಎಂದು ದೇವರನ್ನು ಕೊಂಡಾಡಿದರು. BSB BSB: A sense of awe swept over all of them, and they glorified God. “A great prophet has appeared among us!” they said. “God has visited His people!”
17 ULB ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. BSB BSB: And the news about Jesus spread throughout Judea and all the surrounding region.
18 ULB ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು BSB BSB: Then John’s disciples informed him about all these things.
19 ULB ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು- ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ? ಎಂದು ಸ್ವಾಮಿಯನ್ನು ಕೇಳಲು ಹೇಳಿಕಳುಹಿಸಿದನು. BSB BSB: So John called two of his disciples and sent them to ask the Lord, “Are You the One who was to come, or should we look for someone else?”
20 ULB ಅವರು ಯೇಸುವಿನ ಬಳಿಗೆ ಬಂದು- ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ ಅಂದರು. BSB BSB: When the men came to Jesus, they said, “John the Baptist sent us to ask, ‘Are You the One who was to come, or should we look for someone else?’”
21 ULB ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಉಪದ್ರವ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು; ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. BSB BSB: At that very hour Jesus healed many people of their diseases, afflictions, and evil spirits, and He gave sight to many who were blind.
22 ULB ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ- ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ದೃಷ್ಟಿ ಬರುತ್ತವೆ, ಕುಂಟರಿಗೆ ಕಾಲುಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿಕೇಳುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ. BSB BSB: So He replied, “Go back and report to John what you have seen and heard: The blind receive sight, the lame walk, the lepers are cleansed, the deaf hear, the dead are raised, and the good news is preached to the poor.
23 ULB ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು ಎಂದು ಹೇಳಿದನು. BSB BSB: Blessed is the one who does not fall away on account of Me.”
24 ULB ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ- ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? BSB BSB: After John’s messengers had left, Jesus began to speak to the crowds about John: “What did you go out into the wilderness to see? A reed swaying in the wind?
25 ULB ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. BSB BSB: Otherwise, what did you go out to see? A man dressed in fine clothes? Look, those who wear elegant clothing and live in luxury are found in palaces.
26 ULB ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. BSB BSB: What then did you go out to see? A prophet? Yes, I tell you, and more than a prophet.
27 ULB ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಾಗಮಾಡುವನು, ಎಂದು ಯಾರ ವಿಷಯವಾಗಿ ಬರೆದದೆಯೋ ಆ ಪುರುಷನು ಅವನೇ. BSB BSB: This is the one about whom it is written: ‘Behold, I will send My messenger ahead of You, who will prepare Your way before You.’
28 ULB ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ; ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಹೇಳುತ್ತೇನೆ. BSB BSB: I tell you, among those born of women there is no one greater than John, yet even the least in the kingdom of God is greater than he.”
29 ULB ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು. BSB BSB: All the people who heard this, even the tax collectors, acknowledged God’s justice. For they had received the baptism of John.
30 ULB ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ದೇವರ ಸಂಕಲ್ಪವನ್ನು ನಿರಾಕರಿಸಿದರು. BSB BSB: But the Pharisees and experts in the law rejected God’s purpose for themselves, because they had not been baptized by John.
31 ULB ಹೀಗಿರುವಲ್ಲಿ ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? BSB BSB: “To what, then, can I compare the men of this generation? What are they like?
32 ULB ಪೇಟೆಯಲ್ಲಿ ಕೂಳಿತುಕೊಂಡು- ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ. BSB BSB: They are like children sitting in the marketplace and calling out to one another: ‘We played the flute for you, and you did not dance; we sang a dirge, and you did not weep.’
33 ULB ಹೇಗಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು- ಅವನಿಗೆ ದೆವ್ವ ಹಿಡಿದದೆ ಅನ್ನುತ್ತೀರಿ. BSB BSB: For John the Baptist came neither eating bread nor drinking wine, and you say, ‘He has a demon!’
34 ULB ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು- ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತೀರಿ. BSB BSB: The Son of Man came eating and drinking, and you say, ‘Look at this glutton and drunkard, a friend of tax collectors and sinners!’
35 ULB ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ ಅಂದನು. BSB BSB: But wisdom is vindicated by all her children.”
36 ULB ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. BSB BSB: Then one of the Pharisees invited Jesus to eat with him, and He entered the Pharisee’s house and reclined at the table.
37 ULB ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು BSB BSB: When a sinful woman from that town learned that Jesus was dining there, she brought an alabaster jar of perfume.
38 ULB ಆತನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು. BSB BSB: As she stood behind Him at His feet weeping, she began to wet His feet with her tears and wipe them with her hair. Then she kissed His feet and anointed them with the perfume.
39 ULB ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು- ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು. BSB BSB: When the Pharisee who had invited Jesus saw this, he said to himself, “If this man were a prophet, He would know who this is and what kind of woman is touching Him—for she is a sinner!”
40 ULB ಅದಕ್ಕೆ ಯೇಸು- ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ ಅವನು- ಬೋಧಕನೇ, ಹೇಳು ಅಂದನು. BSB BSB: But Jesus answered him, “Simon, I have something to tell you.” “Tell me, Teacher,” he said.
41 ULB ಆಗ ಯೇಸು- ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐನೂರು ಹಣ ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಹಣ ಕೊಡಬೇಕಾಗಿತ್ತು BSB BSB: “Two men were debtors to a certain moneylender. One owed him five hundred denarii, and the other fifty.
42 ULB ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು ಎಂದು ಕೇಳಿದ್ದಕ್ಕೆ BSB BSB: When they were unable to repay him, he forgave both of them. Which one, then, will love him more?”
43 ULB ಸೀಮೋನನು- ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ ಅಂದನು. ಯೇಸು ಅವನಿಗೆ- ನೀನು ಸರಿಯಾಗಿ ತೀರ್ಪುಮಾಡಿದಿ ಎಂದು ಹೇಳಿ BSB BSB: “I suppose the one who was forgiven more,” Simon replied. “You have judged correctly,” Jesus said.
44 ULB ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ- ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. BSB BSB: And turning toward the woman, He said to Simon, “Do you see this woman? When I entered your house, you did not give Me water for My feet, but she wet My feet with her tears and wiped them with her hair.
45 ULB ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ. BSB BSB: You did not greet Me with a kiss, but she has not stopped kissing My feet since I arrived.
46 ULB ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು. BSB BSB: You did not anoint My head with oil, but she has anointed My feet with perfume.
47 ULB ಹೀಗಿರಲು ನಾನು ಹೇಳುವ ಮಾತೇನಂದರೆ- ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು BSB BSB: Therefore I tell you, her many sins have been forgiven, for she has loved much. But he who has been forgiven little loves little.”
48 ULB ಆ ಮೇಲೆ ಆತನು ಅವಳಿಗೆ- ನಿನ್ನ ಪಾಪಗಳು ಕ್ಷಮಿಸಲ್ಪಟ್ಟವೆ ಎಂದು ಹೇಳಿದನು. BSB BSB: Then Jesus said to her, “Your sins are forgiven.”
49 ULB ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, ಪಾಪಗಳನ್ನು ಸಹ ಕ್ಷಮಿಸಲು ಇವನಾರು ಎಂದು ತಮ್ಮ ತಮ್ಮೊಳಗೆ ಅಂದುಕೊಂಡರು. BSB BSB: But those at the table began to say to themselves, “Who is this who even forgives sins?”
50 ULB ಆದರೆ ಆತನು ಆ ಹೆಂಗಸಿಗೆ- ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ; ಸಮಾಧಾನದಿಂದ ಹೋಗು ಎಂದು ಹೇಳಿದನು. BSB BSB: And Jesus told the woman, “Your faith has saved you; go in peace.”