1 ULB ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, <<ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷೆಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು. BSB BSB: Then Jesus began to speak to them in parables: “A man planted a vineyard. He put a wall around it, dug a wine vat, and built a watchtower. Then he rented it out to some tenants and went away on a journey.
2 ULB ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು. BSB BSB: At harvest time, he sent a servant to the tenants to collect his share of the fruit of the vineyard.
3 ULB ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು. BSB BSB: But they seized the servant, beat him, and sent him away empty-handed.
4 ULB ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು. BSB BSB: Then he sent them another servant, and they struck him over the head and treated him shamefully.
5 ULB ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು. BSB BSB: He sent still another, and this one they killed. He sent many others; some they beat and others they killed.
6 ULB ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. BSB BSB: Finally, having one beloved son, he sent him to them. ‘They will respect my son,’ he said.
7 ULB ಆದರೆ ಆ ಗುತ್ತಿಗೆದಾರರು, <ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು> ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು, BSB BSB: But the tenants said to one another, ‘This is the heir. Come, let us kill him, and the inheritance will be ours.’
8 ULB ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು. BSB BSB: So they seized the son, killed him, and threw him out of the vineyard.
9 ULB ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು. BSB BSB: What then will the owner of the vineyard do? He will come and kill those tenants and give the vineyard to others.
10 ULB <<< ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. BSB BSB: Have you never read this Scripture: ‘The stone the builders rejected has become the cornerstone.
11 ULB ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?>>> ಎಂದನು. BSB BSB: This is from the Lord, and it is marvelous in our eyes’?”
12 ULB ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು. BSB BSB: At this, the leaders sought to arrest Jesus, for they knew that He had spoken this parable against them. But fearing the crowd, they left Him and went away.
13 ULB ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು. BSB BSB: Later, they sent some of the Pharisees and Herodians to catch Jesus in His words.
14 ULB ಇವರು ಬಂದು, <<ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?>> ಎಂದು ಆತನನ್ನು ಕೇಳಿದರು. BSB BSB: “Teacher,” they said, “we know that You are honest and seek favor from no one. Indeed, You are impartial and teach the way of God in accordance with the truth. Is it lawful to pay taxes to Caesar or not? Should we pay them or not?”
15 ULB ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, <<ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ>> ಎಂದು ಹೇಳಲು ಅವರು ತಂದರು. BSB BSB: But Jesus saw through their hypocrisy and said, “Why are you testing Me? Bring Me a denarius to inspect.”
16 ULB ಆಗ ಆತನು ಇದರ <<ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?>> ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು. BSB BSB: So they brought it, and He asked them, “Whose image is this? And whose inscription?” “Caesar’s,” they answered.
17 ULB ಯೇಸು, <<ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ>> ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು. BSB BSB: Then Jesus told them, “Give to Caesar what is Caesar’s, and to God what is God’s.” And they marveled at Him.
18 ULB ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು, BSB BSB: Then the Sadducees, who say there is no resurrection, came to Jesus and questioned Him:
19 ULB ಆತನನ್ನು ಪ್ರಶ್ನೆಮಾಡಿದ್ದೇನಂದರೆ, <<ಬೋಧಕನೇ, <ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು> ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ. BSB BSB: “Teacher, Moses wrote for us that if a man’s brother dies and leaves a wife but no children, the man is to marry his brother’s widow and raise up offspring for him.
20 ULB <<ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. BSB BSB: Now there were seven brothers. The first one married and died, leaving no children.
21 ULB ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು. BSB BSB: Then the second one married the widow, but he also died and left no children. And the third did likewise.
22 ULB ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. BSB BSB: In this way, none of the seven left any children. And last of all, the woman died.
23 ULB ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ>> ಎಂದರು. BSB BSB: In the resurrection, then, whose wife will she be? For all seven were married to her.”
24 ULB ಅದಕ್ಕೆ ಯೇಸು, <<ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ? BSB BSB: Jesus said to them, “Aren’t you mistaken, because you do not know the Scriptures or the power of God?
25 ULB ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. BSB BSB: When the dead rise, they will neither marry nor be given in marriage. Instead, they will be like the angels in heaven.
27 ULB ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ>> ಎಂದು ಹೇಳಿದನು. BSB BSB: He is not the God of the dead, but of the living. You are badly mistaken!”
30 ULB ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು> ಎಂಬುದೇ ಮುಖ್ಯವಾದ ಆಜ್ಞೆ. BSB BSB: Love the Lord your God with all your heart and with all your soul and with all your mind and with all your strength.’
31 ULB <ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು> ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ>> ಎಂದು ಉತ್ತರ ಕೊಟ್ಟನು. BSB BSB: The second is this: ‘Love your neighbor as yourself.’ No other commandment is greater than these.”
32 ULB ಆಗ ಆ ಶಾಸ್ತ್ರಿಯು, <<ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು. BSB BSB: “Right, Teacher,” the scribe replied. “You have stated correctly that God is One and there is no other but Him,
33 ULB ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು>> ಅಂದನು. BSB BSB: and to love Him with all your heart and with all your understanding and with all your strength, and to love your neighbor as yourself. This is more important than all burnt offerings and sacrifices.”
34 ULB ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, <<ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ>> ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. BSB BSB: When Jesus saw that the man had answered wisely, He said, “You are not far from the kingdom of God.” And no one dared to question Him any further.
35 ULB ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, <<ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? ಎಂದು ಪ್ರಶ್ನಿಸಿದನು. BSB BSB: While Jesus was teaching in the temple courts, He asked, “How can the scribes say that the Christ is the Son of David?
36 ULB << <ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು> ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ. BSB BSB: Speaking by the Holy Spirit, David himself declared: ‘The Lord said to my Lord, “Sit at My right hand until I put Your enemies under Your feet.”’
37 ULB ದಾವೀದನೇ ಆತನನ್ನು <ಕರ್ತನೆಂದು> ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?>> ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು. BSB BSB: David himself calls Him ‘Lord.’ So how can He be David’s son?” And the large crowd listened to Him with delight.
38 ULB ಆತನು ಉಪದೇಶಮಾಡಿ ಹೇಳಿದ್ದೇನಂದರೆ, <<ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ, BSB BSB: In His teaching Jesus also said, “Watch out for the scribes. They like to walk around in long robes, to receive greetings in the marketplaces,
39 ULB ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ. BSB BSB: and to have the chief seats in the synagogues and the places of honor at banquets.
40 ULB ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು>> ಎಂದನು. BSB BSB: They defraud widows of their houses, and for a show make lengthy prayers. These men will receive greater condemnation.”
41 ULB ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. BSB BSB: As Jesus was sitting opposite the treasury, He watched the crowd putting money into it. And many rich people put in large amounts.
42 ULB ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. BSB BSB: Then one poor widow came and put in two small copper coins, which amounted to a small fraction of a denarius.
43 ULB ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, <<ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. BSB BSB: Jesus called His disciples to Him and said, “Truly I tell you, this poor widow has put more than all the others into the treasury.
44 ULB ಹೇಗಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ>> ಎಂದನು. BSB BSB: For they all contributed out of their surplus, but she out of her poverty has put in all she had to live on.”