1 ULB ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು. BSB BSB: Now the Passover and the Feast of Unleavened Bread were two days away, and the chief priests and scribes were looking for a covert way to arrest Jesus and kill Him.
2 ULB <<ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು>> ಎಂದು ಮಾತನಾಡಿಕೊಂಡರು. BSB BSB: “But not during the feast,” they said, “or there may be a riot among the people.”
3 ULB ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು. BSB BSB: While Jesus was in Bethany reclining at the table in the home of Simon the Leper, a woman came with an alabaster jar of expensive perfume, made of pure nard. She broke open the jar and poured it on Jesus’ head.
4 ULB ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, <<ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ? BSB BSB: Some of those present, however, expressed their indignation to one another: “Why this waste of perfume?
5 ULB ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?>> ಎಂದು ಹೇಳಿ ಆಕೆಯನ್ನು ದೂಷಿಸಿದರು. BSB BSB: It could have been sold for over three hundred denarii and the money given to the poor.” And they scolded her.
6 ULB ಆದರೆ ಯೇಸು, <<ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. BSB BSB: But Jesus said, “Leave her alone; why are you bothering her? She has done a beautiful deed to Me.
7 ULB ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. BSB BSB: The poor you will always have with you, and you can help them whenever you want. But you will not always have Me.
8 ULB ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ. BSB BSB: She has done what she could to anoint My body in advance of My burial.
9 ULB ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು. BSB BSB: And truly I tell you, wherever the gospel is preached in all the world, what she has done will also be told in memory of her.”
10 ULB ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು. BSB BSB: Then Judas Iscariot, one of the Twelve, went to the chief priests to betray Jesus to them.
11 ULB ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು. BSB BSB: They were delighted to hear this, and they promised to give him money. So Judas began to look for an opportunity to betray Jesus.
12 ULB ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, <<ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು>> ಎಂದು ಕೇಳಿದರು. BSB BSB: On the first day of the Feast of Unleavened Bread, when the Passover lamb was to be sacrificed, Jesus’ disciples asked Him, “Where do You want us to prepare for You to eat the Passover?”
13 ULB ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, <<ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ. BSB BSB: So He sent two of His disciples and told them, “Go into the city, and a man carrying a jug of water will meet you. Follow him,
14 ULB ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, <ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?> ಎಂಬುದಾಗಿ ಕೇಳುತ್ತಿದ್ದಾನೆ, ಎಂದು ಹೇಳಿರಿ. BSB BSB: and whichever house he enters, say to the owner, ‘The Teacher asks: Where is My guest room, where I may eat the Passover with My disciples?’
15 ULB ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು. BSB BSB: And he will show you a large upper room, furnished and ready. Make preparations for us there.”
16 ULB ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು. BSB BSB: So the disciples left and went into the city, where they found everything as Jesus had described. And they prepared the Passover.
17 ULB ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. BSB BSB: When evening came, Jesus arrived with the Twelve.
18 ULB ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, <<ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ>> ಎಂದನು. BSB BSB: And while they were reclining and eating, Jesus said, “Truly I tell you, one of you who is eating with Me will betray Me.”
19 ULB ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ <<ನಾನಲ್ಲವಲ್ಲಾ?>> ಎಂದು ಕೇಳತೊಡಗಿದರು. BSB BSB: They began to be grieved and to ask Him one after another, “Surely not I?”
20 ULB ಆತನು ಉತ್ತರವಾಗಿ ಅವರಿಗೆ <<ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ. BSB BSB: He answered, “It is one of the Twelve—the one who is dipping his hand into the bowl with Me.
21 ULB ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು>> ಅಂದನು. BSB BSB: The Son of Man will go just as it is written about Him, but woe to that man by whom He is betrayed! It would be better for him if he had not been born.”
22 ULB ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ <<ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ>> ಎಂದನು. BSB BSB: While they were eating, Jesus took bread, spoke a blessing and broke it, and gave it to the disciples, saying, “Take it; this is My body.”
23 ULB ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು. BSB BSB: Then He took the cup, gave thanks, and gave it to them, and they all drank from it.
24 ULB ಯೇಸು ಅವರಿಗೆ, <<ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ. BSB BSB: He said to them, “This is My blood of the covenant, which is poured out for many.
25 ULB ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ>> ಎಂದನು. BSB BSB: Truly I tell you, I will no longer drink of the fruit of the vine until that day when I drink it anew in the kingdom of God.”
26 ULB ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು. BSB BSB: And when they had sung a hymn, they went out to the Mount of Olives.
27 ULB ಆಗ ಯೇಸು ಅವರಿಗೆ, <<ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ;<< <ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು> ಎಂದು ಬರೆದಿದೆಯಲ್ಲಾ ಅಂದನು. BSB BSB: Then Jesus said to them, “You will all fall away, for it is written: ‘I will strike the Shepherd, and the sheep will be scattered.’
28 ULB ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು>> ಎಂದು ಹೇಳಿದನು. BSB BSB: But after I have risen, I will go ahead of you into Galilee.”
29 ULB ಪೇತ್ರನು ಯೇಸುವಿಗೆ, <<ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ>> ಎಂದು ಹೇಳಿದನು. BSB BSB: Peter declared, “Even if all fall away, I never will.”
30 ULB ಯೇಸುವು ಆತನಿಗೆ, <<ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ>> ಎಂದನು. BSB BSB: “Truly I tell you,” Jesus replied, “this very night, before the rooster crows twice, you will deny Me three times.”
31 ULB ಆದರೆ ಅವನು, <<ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು>> ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು. BSB BSB: But Peter kept insisting, “Even if I have to die with You, I will never deny You.” And all the others said the same thing.
33 ULB ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು. BSB BSB: He took with Him Peter, James, and John, and began to be deeply troubled and distressed.
34 ULB ಮತ್ತು ಆತನು ಅವರಿಗೆ <<ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ>> ಎಂದು ಹೇಳಿದನು. BSB BSB: Then He said to them, “My soul is consumed with sorrow to the point of death. Stay here and keep watch.”
35 ULB ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು. BSB BSB: Going a little farther, He fell to the ground and prayed that, if it were possible, the hour would pass from Him.
37 ULB ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, <<ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ? BSB BSB: Then Jesus returned and found them sleeping. “Simon, are you asleep?” He asked. “Were you not able to keep watch for one hour?
38 ULB ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು>> ಎಂದು ಹೇಳಿದನು. BSB BSB: Watch and pray so that you will not enter into temptation. For the spirit is willing, but the body is weak.”
39 ULB ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು. BSB BSB: Again He went away and prayed, saying the same thing.
40 ULB ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. BSB BSB: And again Jesus returned and found them sleeping, for their eyes were heavy. And they did not know what to answer Him.
41 ULB ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, <<ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ. BSB BSB: When Jesus returned the third time, He said, “Are you still sleeping and resting? That is enough! The hour has come. Look, the Son of Man is betrayed into the hands of sinners.
42 ULB ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ>> ಎಂದು ಹೇಳಿದನು. BSB BSB: Rise, let us go. See, My betrayer is approaching!”
43 ULB ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. BSB BSB: While Jesus was still speaking, Judas, one of the Twelve, arrived, accompanied by a crowd armed with swords and clubs, sent from the chief priests, scribes, and elders.
44 ULB ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ>> ಎಂದು ಮೊದಲೇ ಸೂಚನೆಕೊಟ್ಟಿದ್ದನು. BSB BSB: Now the betrayer had arranged a signal with them: “The One I kiss is the man; arrest Him and lead Him away securely.”
45 ULB ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಟ್ಟನು. BSB BSB: Going directly to Jesus, he said, “Rabbi!” and kissed Him.
46 ULB ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. BSB BSB: Then the men seized Jesus and arrested Him.
47 ULB ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. BSB BSB: And one of the bystanders drew his sword and struck the servant of the high priest, cutting off his ear.
48 ULB ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? BSB BSB: Jesus asked the crowd, “Have you come out with swords and clubs to arrest Me as you would an outlaw?
49 ULB ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು. BSB BSB: Every day I was with you, teaching in the temple courts, and you did not arrest Me. But this has happened that the Scriptures would be fulfilled.”
50 ULB ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು. BSB BSB: Then everyone deserted Him and fled.
51 ULB ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು; BSB BSB: One young man who had been following Jesus was wearing a linen cloth around his body. They caught hold of him,
52 ULB ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು. BSB BSB: but he pulled free of the linen cloth and ran away naked.
53 ULB ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು. BSB BSB: They led Jesus away to the high priest, and all the chief priests, elders, and scribes assembled.
54 ULB ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು. BSB BSB: Peter followed Him at a distance, right into the courtyard of the high priest. And he sat with the officers and warmed himself by the fire.
55 ULB ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ. BSB BSB: Now the chief priests and the whole Sanhedrin were seeking testimony against Jesus to put Him to death, but they did not find any.
56 ULB ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ. BSB BSB: For many bore false witness against Jesus, but their testimony was inconsistent.
57 ULB ತರುವಾಯ ಕೆಲವರು ಎದ್ದು ನಿಂತು,<< <ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು> ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ>> ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು. BSB BSB: Then some men stood up and testified falsely against Him:
59 ULB ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ. BSB BSB: But even their testimony was inconsistent.
62 ULB ಯೇಸುವು <<ಹೌದು ನಾನೇ! <<ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ>> ಎಂದನು. BSB BSB: “I am,” said Jesus, “and you will see the Son of Man sitting at the right hand of Power and coming with the clouds of heaven.”
63 ULB ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ? BSB BSB: At this, the high priest tore his clothes and declared, “Why do we need any more witnesses?
64 ULB ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. BSB BSB: You have heard the blasphemy. What is your verdict?” And they all condemned Him as deserving of death.
65 ULB ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು. BSB BSB: Then some of them began to spit on Him. They blindfolded Him, struck Him with their fists, and said to Him, “Prophesy!” And the officers received Him with slaps in His face.
66 ULB ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು, BSB BSB: While Peter was in the courtyard below, one of the servant girls of the high priest came down
67 ULB ಅವನನ್ನು ದೃಷ್ಟಿಸಿ ನೋಡಿ, <<ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು>> ಎಂದಳು. BSB BSB: and saw him warming himself there. She looked at Peter and said, “You also were with Jesus the Nazarene.”
68 ULB ಆದರೆ ಅವನು ನಿರಾಕರಿಸಿ, <<ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!>> ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು. BSB BSB: But he denied it. “I do not know or even understand what you are talking about,” he said. Then he went out to the gateway, and the rooster crowed.
69 ULB ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, <<ಇವನು ಅವರಲ್ಲಿ ಒಬ್ಬನು>> ಎಂದು ಹೇಳಲಾರಂಭಿಸಿದಳು. BSB BSB: There the servant girl saw him and again said to those standing nearby, “This man is one of them.”
70 ULB ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, <<ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ>> ಎಂದರು. BSB BSB: But he denied it again. After a little while, those standing nearby said once more to Peter, “Surely you are one of them, for you too are a Galilean.”
71 ULB ಆದರೆ ಅವನು, <<ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ>> ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು. BSB BSB: But he began to curse and swear, “I do not know this man of whom you speak!”
72 ULB ಆಗ ಪೇತ್ರನು, <<ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ>> ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಖಃಭರಿತನಾಗಿ ಅತ್ತನು. BSB BSB: And immediately the rooster crowed a second time. Then Peter remembered the word that Jesus had spoken to him: “Before the rooster crows twice, you will deny Me three times.” And he broke down and wept.