1 ULB ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು. BSB BSB: Once again Jesus began to teach beside the sea, and such a large crowd gathered around Him that He got into a boat and sat in it, while all the people crowded along the shore.
2 ULB ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ: BSB BSB: And He taught them many things in parables, and in His teaching He said,
3 ULB <<ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. BSB BSB: “Listen! A farmer went out to sow his seed.
4 ULB ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. BSB BSB: And as he was sowing, some seed fell along the path, and the birds came and devoured it.
5 ULB ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು; BSB BSB: Some fell on rocky ground, where it did not have much soil. It sprang up quickly because the soil was shallow.
6 ULB ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. BSB BSB: But when the sun rose, the seedlings were scorched, and they withered because they had no root.
7 ULB ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ. BSB BSB: Other seed fell among thorns, which grew up and choked the seedlings, and they yielded no crop.
8 ULB ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.>> BSB BSB: Still other seed fell on good soil, where it sprouted, grew up, and produced a crop—one bearing thirtyfold, another sixtyfold, and another a hundredfold.”
9 ULB ಮತ್ತು ಆತನು <<ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು. BSB BSB: Then Jesus said, “He who has ears to hear, let him hear.”
10 ULB ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು. BSB BSB: As soon as Jesus was alone with the Twelve and those around Him, they asked Him about the parable.
11 ULB ಆತನು ಅವರಿಗೆ, <<ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ. BSB BSB: He replied, “The mystery of the kingdom of God has been given to you, but to those on the outside everything is expressed in parables,
12 ULB ಅದ್ದರಿಂದ, <<ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.>> BSB BSB: so that, ‘they may be ever seeing but never perceiving, and ever hearing but never understanding; otherwise they might turn and be forgiven.’”
13 ULB ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, <<ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? BSB BSB: Then Jesus said to them, “Do you not understand this parable? Then how will you understand any of the parables?
14 ULB ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. BSB BSB: The farmer sows the word.
15 ULB ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. BSB BSB: Some are like the seeds along the path, where the word is sown. As soon as they hear it, Satan comes and takes away the word that was sown in them.
16 ULB ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; BSB BSB: Some are like the seeds sown on rocky ground. They hear the word and at once receive it with joy.
17 ULB ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. BSB BSB: But they themselves have no root, and they remain for only a season. When trouble or persecution comes because of the word, they quickly fall away.
18 ULB ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; BSB BSB: Others are like the seeds sown among the thorns. They hear the word,
19 ULB ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. BSB BSB: but the worries of this life, the deceitfulness of wealth, and the desire for other things come in and choke the word, and it becomes unfruitful.
20 ULB ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು>> ಅಂದನು. BSB BSB: Still others are like the seeds sown on good soil. They hear the word, receive it, and produce a crop—thirtyfold, sixtyfold, or a hundredfold.”
21 ULB ಇದಲ್ಲದೆ ಯೇಸು ಅವರಿಗೆ, <<ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ? BSB BSB: Jesus also said to them, “Does anyone bring in a lamp to put it under a basket or under a bed? Doesn’t he set it on a stand?
22 ULB ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. BSB BSB: For there is nothing hidden that will not be disclosed, and nothing concealed that will not be brought to light.
23 ULB ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ>> ಎಂದು ಹೇಳಿದನು. BSB BSB: If anyone has ears to hear, let him hear.”
24 ULB ಮತ್ತು ಆತನು ಅವರಿಗೆ; <<ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. BSB BSB: He went on to say, “Pay attention to what you hear. With the measure you use, it will be measured to you, and even more will be added to you.
25 ULB ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು>> ಎಂದು ಹೇಳಿದನು. BSB BSB: For whoever has will be given more. But whoever does not have, even what he has will be taken away from him.”
26 ULB ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; <<ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ BSB BSB: Jesus also said, “The kingdom of God is like a man who scatters seed on the ground.
27 ULB ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದಿಂದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ. BSB BSB: Night and day he sleeps and wakes, and the seed sprouts and grows, though he knows not how.
28 ULB ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ. BSB BSB: All by itself the earth produces a crop—first the stalk, then the head, then grain that ripens within.
29 ULB ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ>> ಅಂದನು. BSB BSB: And as soon as the grain is ripe, he swings the sickle, because the harvest has come.”
30 ULB ಇನ್ನೂ ಆತನು ಹೇಳಿದ್ದು; <<ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? BSB BSB: Then He asked, “To what can we compare the kingdom of God? With what parable shall we present it?
31 ULB ಅದು ಸಾಸಿವೆಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. BSB BSB: It is like a mustard seed, which is the smallest of all seeds sown upon the earth.
32 ULB ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ>> ಅಂದನು. BSB BSB: But after it is planted, it grows to be the largest of all garden plants and puts forth great branches, so that the birds of the air nest in its shade.”
33 ULB ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. BSB BSB: With many such parables Jesus spoke the word to them, to the extent that they could understand.
34 ULB ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು. BSB BSB: He did not tell them anything without using a parable. But privately He explained everything to His own disciples.
35 ULB ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, <<ಆಚೇದಡಕ್ಕೆ ಹೋಗೋಣ>> ಎಂದು ಹೇಳಿದನು. BSB BSB: When that evening came, He said to His disciples, “Let us cross to the other side.”
37 ULB ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. BSB BSB: Soon a violent windstorm came up, and the waves were breaking over the boat, so that it was being swamped.
38 ULB ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, <<ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ>> ಎಂದು ಕೇಳಿದರು. BSB BSB: But Jesus was in the stern, sleeping on the cushion. So they woke Him and said, “Teacher, don’t You care that we are perishing?”
39 ULB ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ <<ಶಾಂತವಾಗಿರು, ಮೊರೆಯಬೇಡ>> ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. BSB BSB: Then Jesus got up and rebuked the wind and the sea. “Silence!” He commanded. “Be still!” And the wind died down, and it was perfectly calm.
40 ULB ತರುವಾಯ ಆತನು ಅವರನ್ನು, <<ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?>> ಎಂದು ಕೇಳಲು BSB BSB: “Why are you so afraid?” He asked. “Do you still have no faith?”
41 ULB ಅವರು ಬಹು ಭಯಪಟ್ಟು, <<ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ>> ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. BSB BSB: Overwhelmed with fear, they asked one another, “Who is this, that even the wind and the sea obey Him?”