1 ULB ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು. BSB BSB: After Jesus had finished instructing His twelve disciples, He went on from there to teach and preach in their cities.
3 ULB <<ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ>> ಎಂದು ಅವರ ಮೂಲಕ ಹೇಳಿ ಕೇಳಿಸಿದನು. BSB BSB: to ask Him, “Are You the One who was to come, or should we look for someone else?”
4 ULB ಯೇಸು ಅವರಿಗೆ ಪ್ರತ್ಯುತ್ತರವಾಗಿ, <<ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ; BSB BSB: Jesus replied, “Go back and report to John what you hear and see:
5 ULB ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ. BSB BSB: The blind receive sight, the lame walk, the lepers are cleansed, the deaf hear, the dead are raised, and the good news is preached to the poor.
6 ULB ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು>> ಎಂದು ಹೇಳಿದನು. BSB BSB: Blessed is the one who does not fall away on account of Me.”
7 ULB ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, <<ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? BSB BSB: As John’s disciples were leaving, Jesus began to speak to the crowds about John: “What did you go out into the wilderness to see? A reed swaying in the wind?
8 ULB ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ. BSB BSB: Otherwise, what did you go out to see? A man dressed in fine clothes? Look, those who wear fine clothing are found in kings’ palaces.
9 ULB ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ. BSB BSB: What then did you go out to see? A prophet? Yes, I tell you, and more than a prophet.
10 ULB <ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು> ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ. BSB BSB: This is the one about whom it is written: ‘Behold, I will send My messenger ahead of You, who will prepare Your way before You.’
11 ULB ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: Truly I tell you, among those born of women there has risen no one greater than John the Baptist. Yet even the least in the kingdom of heaven is greater than he.
12 ULB ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. BSB BSB: From the days of John the Baptist until now, the kingdom of heaven has been subject to violence, and the violent lay claim to it.
13 ULB ಎಲ್ಲಾ ಪ್ರವಾದಿಗಳೂ, ಧರ್ಮನಿಯಮವು ಯೋಹಾನನ ತನಕ ಪ್ರವಾದಿಸಿದರು. BSB BSB: For all the Prophets and the Law prophesied until John.
15 ULB ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ. BSB BSB: He who has ears, let him hear.
16 ULB ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, BSB BSB: To what can I compare this generation? They are like children sitting in the marketplaces and calling out to others:
17 ULB <ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ> ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ. BSB BSB: ‘We played the flute for you, and you did not dance; we sang a dirge, and you did not mourn.’
18 ULB ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, <ದೆವ್ವ ಹಿಡಿದಿದೆ> ಅನ್ನುತ್ತಾರೆ. BSB BSB: For John came neither eating nor drinking, and they say, ‘He has a demon!’
19 ULB ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು <ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು> ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ>> ಅಂದನು. BSB BSB: The Son of Man came eating and drinking, and they say, ‘Look at this glutton and drunkard, a friend of tax collectors and sinners!’ But wisdom is vindicated by her actions.”
20 ULB ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. BSB BSB: Then Jesus began to denounce the cities in which most of His miracles had been performed, because they did not repent.
22 ULB ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. BSB BSB: But I tell you, it will be more bearable for Tyre and Sidon on the day of judgment than for you.
23 ULB ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. BSB BSB: And you, Capernaum, will you be lifted up to heaven? No, you will be brought down to Hades! For if the miracles that were performed in you had been performed in Sodom, it would have remained to this day.
24 ULB ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು>> ಎಂದು ನಿಮಗೆ ಹೇಳುತ್ತೇನೆ ಅಂದನು. BSB BSB: But I tell you that it will be more bearable for Sodom on the day of judgment than for you.”
25 ULB ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, <<ತಂದೆಯೇ! ಪರಲೋಕದ ಭೂಪಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಂಥವರಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. BSB BSB: At that time Jesus declared, “I praise You, Father, Lord of heaven and earth, because You have hidden these things from the wise and learned, and revealed them to little children.
26 ULB ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು. BSB BSB: Yes, Father, for this was well-pleasing in Your sight.
27 ULB ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ. BSB BSB: All things have been entrusted to Me by My Father. No one knows the Son except the Father, and no one knows the Father except the Son and those to whom the Son chooses to reveal Him.
28 ULB <<ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. BSB BSB: Come to Me, all you who are weary and burdened, and I will give you rest.
29 ULB ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. BSB BSB: Take My yoke upon you and learn from Me, for I am gentle and humble in heart, and you will find rest for your souls.
30 ULB ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ>> ಅಂದನು. BSB BSB: For My yoke is easy and My burden is light.”