1 ULB ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು. BSB BSB: That same day Jesus went out of the house and sat by the sea.
2 ULB ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು. BSB BSB: Such large crowds gathered around Him that He got into a boat and sat down, while all the people stood on the shore.
3 ULB ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. BSB BSB: And He told them many things in parables, saying, “A farmer went out to sow his seed.
4 ULB <<ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. BSB BSB: And as he was sowing, some seed fell along the path, and the birds came and devoured it.
5 ULB ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು. BSB BSB: Some fell on rocky ground, where it did not have much soil. It sprang up quickly because the soil was shallow.
6 ULB ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು. BSB BSB: But when the sun rose, the seedlings were scorched, and they withered because they had no root.
7 ULB ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. BSB BSB: Other seed fell among thorns, which grew up and choked the seedlings.
8 ULB ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು. BSB BSB: Still other seed fell on good soil and produced a crop—a hundredfold, sixtyfold, or thirtyfold.
9 ULB ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ>> ಅಂದನು. BSB BSB: He who has ears, let him hear.”
10 ULB ತರುವಾಯ ಆತನ ಶಿಷ್ಯರು ಬಂದು, <<ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?>> ಎಂದು ಕೇಳಿದರು. BSB BSB: Then the disciples came to Jesus and asked, “Why do You speak to the people in parables?”
11 ULB ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ. BSB BSB: He replied, “The knowledge of the mysteries of the kingdom of heaven has been given to you, but not to them.
12 ULB ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು. BSB BSB: Whoever has will be given more, and he will have an abundance. Whoever does not have, even what he has will be taken away from him.
13 ULB ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ಗ್ರಹಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ. BSB BSB: This is why I speak to them in parables: ‘Though seeing, they do not see; though hearing, they do not hear or understand.’
14 ULB <<ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನಂದರೆ, <ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ. BSB BSB: In them the prophecy of Isaiah is fulfilled: ‘You will be ever hearing but never understanding; you will be ever seeing but never perceiving.
15 ULB ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ>>> ಎಂಬುದೇ. BSB BSB: For this people’s heart has grown callous; they hardly hear with their ears, and they have closed their eyes. Otherwise they might see with their eyes, hear with their ears, understand with their hearts, and turn, and I would heal them.’
16 ULB <<ಆದರೆ ನೀವು ಧನ್ಯರು ಏಕೆಂದರೆ ನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ. BSB BSB: But blessed are your eyes because they see, and your ears because they hear.
17 ULB ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. BSB BSB: For truly I tell you, many prophets and righteous men longed to see what you see but did not see it, and to hear what you hear but did not hear it.
18 ULB <<ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ. BSB BSB: Consider, then, the parable of the sower:
19 ULB ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು. BSB BSB: When anyone hears the message of the kingdom but does not understand it, the evil one comes and snatches away what was sown in his heart. This is the seed sown along the path.
20 ULB ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, BSB BSB: The seed sown on rocky ground is the one who hears the word and at once receives it with joy.
21 ULB ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. BSB BSB: But since he has no root, he remains for only a season. When trouble or persecution comes because of the word, he quickly falls away.
22 ULB ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. BSB BSB: The seed sown among the thorns is the one who hears the word, but the worries of this life and the deceitfulness of wealth choke the word, and it becomes unfruitful.
23 ULB ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ.>> ಎಂದು ಹೇಳಿದನು. BSB BSB: But the seed sown on good soil is the one who hears the word and understands it. He indeed bears fruit and produces a crop—a hundredfold, sixtyfold, or thirtyfold.”
25 ULB ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು. BSB BSB: But while everyone was asleep, his enemy came and sowed weeds among the wheat, and slipped away.
26 ULB ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು. BSB BSB: When the wheat sprouted and bore grain, then the weeds also appeared.
27 ULB ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, <ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?> ಎಂದು ಕೇಳಿದರು. BSB BSB: The owner’s servants came to him and said, ‘Sir, didn’t you sow good seed in your field? Where then did the weeds come from?’
28 ULB ಅದಕ್ಕೆ ಅವನು, <ಇದು ವೈರಿ ಮಾಡಿದ ಕೆಲಸ> ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, <ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮ್ಮಗೆ ಇಷ್ಟವಿದೆಯೋ?> ಎಂದು ಕೇಳಿದರು. BSB BSB: ‘An enemy did this,’ he replied. So the servants asked him, ‘Do you want us to go and pull them up?’
29 ULB ಅವರಿಗೆ ಅವನು, <ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ. BSB BSB: ‘No,’ he said, ‘if you pull the weeds now, you might uproot the wheat with them.
30 ULB ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು>>> ಅಂದನು. BSB BSB: Let both grow together until the harvest. At that time I will tell the harvesters: First collect the weeds and tie them in bundles to be burned; then gather the wheat into my barn.’”
31 ULB ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. BSB BSB: He put before them another parable: “The kingdom of heaven is like a mustard seed that a man took and planted in his field.
32 ULB ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ>> ಎಂದು ಹೇಳಿದನು. BSB BSB: Although it is the smallest of all seeds, yet it grows into the largest of garden plants and becomes a tree, so that the birds of the air come and nest in its branches.”
33 ULB ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನಂದರೆ, <<ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.>> BSB BSB: He told them still another parable: “The kingdom of heaven is like leaven that a woman took and mixed into three measures of flour, until all of it was leavened.”
34 ULB ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ. BSB BSB: Jesus spoke all these things to the crowds in parables. He did not tell them anything without using a parable.
35 ULB ಹೀಗೆ, <<ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು>> ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು. BSB BSB: So was fulfilled what was spoken through the prophet: “I will open My mouth in parables; I will utter things hidden since the foundation of the world.”
36 ULB ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು. BSB BSB: Then Jesus dismissed the crowds and went into the house. His disciples came to Him and said, “Explain to us the parable of the weeds in the field.”
37 ULB ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, <<ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು. BSB BSB: He replied, “The One who sows the good seed is the Son of Man.
38 ULB ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ ರಾಜ್ಯದ ಮಕ್ಕಳು. BSB BSB: The field is the world, and the good seed represents the sons of the kingdom. The weeds are the sons of the evil one,
39 ULB ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. BSB BSB: and the enemy who sows them is the devil. The harvest is the end of the age, and the harvesters are angels.
40 ULB ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. BSB BSB: As the weeds are collected and burned in the fire, so will it be at the end of the age.
41 ULB ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು. BSB BSB: The Son of Man will send out His angels, and they will weed out of His kingdom every cause of sin and all who practice lawlessness.
42 ULB ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು BSB BSB: And they will throw them into the fiery furnace, where there will be weeping and gnashing of teeth.
43 ULB ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು. BSB BSB: Then the righteous will shine like the sun in the kingdom of their Father. He who has ears, let him hear.
44 ULB <<ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. BSB BSB: The kingdom of heaven is like treasure hidden in a field. When a man found it, he hid it again, and in his joy he went and sold all he had and bought that field.
45 ULB ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. BSB BSB: Again, the kingdom of heaven is like a merchant in search of fine pearls.
46 ULB ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು. BSB BSB: When he found one very precious pearl, he went away and sold all he had and bought it.
47 ULB <<ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ. BSB BSB: Once again, the kingdom of heaven is like a net that was cast into the sea and caught all kinds of fish.
48 ULB ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು. BSB BSB: When it was full, the men pulled it ashore. Then they sat down and sorted the good fish into containers, but threw the bad away.
49 ULB ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. BSB BSB: So will it be at the end of the age: The angels will come and separate the wicked from the righteous
50 ULB ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. BSB BSB: and throw them into the fiery furnace, where there will be weeping and gnashing of teeth.
51 ULB <<ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ>> ಎಂದು ಕೇಳಲು, ಶಿಷ್ಯರು, <<ಅರ್ಥವಾಯಿತು>> ಅಂದರು. BSB BSB: Have you understood all these things?” “Yes,” they answered.
52 ULB ಆಗ ಆತನು ಅವರಿಗೆ, <<ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ>> ಎಂದು ಹೇಳಿದನು. BSB BSB: Then He told them, “For this reason, every scribe who has been discipled in the kingdom of heaven is like a homeowner who brings out of his storeroom new treasures as well as old.”
53 ULB ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು. BSB BSB: When Jesus had finished these parables, He withdrew from that place.
54 ULB ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, <<ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು? BSB BSB: Coming to His hometown, He taught the people in their synagogue, and they were astonished. “Where did this man get such wisdom and miraculous powers?” they asked.
56 ULB ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?>> ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು. BSB BSB: Aren’t all His sisters with us as well? Where then did this man get all these things?”
57 ULB ಆದರೆ ಯೇಸುವು ಅವರಿಗೆ <<ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ>> ಅಂದನು. BSB BSB: And they took offense at Him. But Jesus said to them, “Only in his hometown and in his own household is a prophet without honor.”
58 ULB ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ. BSB BSB: And He did not do many miracles there, because of their unbelief.