1 ULB ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. BSB BSB: After six days Jesus took with Him Peter, James, and John the brother of James, and led them up a high mountain by themselves.
2 ULB ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು. BSB BSB: There He was transfigured before them. His face shone like the sun, and His clothes became as white as the light.
4 ULB ಆಗ ಪೇತ್ರನು ಯೇಸುವಿಗೆ, <<ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು>> ಎಂದು ಹೇಳಿದನು. BSB BSB: Peter said to Jesus, “Lord, it is good for us to be here. If You wish, I will put up three shelters—one for You, one for Moses, and one for Elijah.”
5 ULB ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ <<ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ>> ಎಂದು ಹೇಳುವ ವಾಣಿವುಂಟಾಯಿತು. BSB BSB: While Peter was still speaking, a bright cloud enveloped them, and a voice from the cloud said, “This is My beloved Son, in whom I am well pleased. Listen to Him!”
6 ULB ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. BSB BSB: When the disciples heard this, they fell facedown in terror.
7 ULB ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, ಏಳಿರಿ ಹೆದರಬೇಡಿರಿ ಅಂದನು. BSB BSB: Then Jesus came over and touched them. “Get up,” He said. “Do not be afraid.”
8 ULB ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ. BSB BSB: And when they looked up, they saw no one except Jesus.
10 ULB ಆಗ ಆತನ ಶಿಷ್ಯರು, <<ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?>> ಎಂದು ಆತನನ್ನು ಕೇಳಿದರು. BSB BSB: The disciples asked Him, “Why then do the scribes say that Elijah must come first?”
11 ULB ಯೇಸು ಅವರಿಗ, <<ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು. BSB BSB: Jesus replied, “Elijah does indeed come, and he will restore all things.
12 ULB ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು>> ಎಂದು ಉತ್ತರ ಕೊಟ್ಟನು. BSB BSB: But I tell you that Elijah has already come, and they did not recognize him, but have done to him whatever they wished. In the same way, the Son of Man will suffer at their hands.”
13 ULB ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು. BSB BSB: Then the disciples understood that He was speaking to them about John the Baptist.
14 ULB ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ, BSB BSB: When they came to the crowd, a man came up to Jesus and knelt before Him.
15 ULB <<ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ. BSB BSB: “Lord, have mercy on my son,” he said. “He has seizures and is suffering terribly. He often falls into the fire or into the water.
16 ULB ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ>> ಅಂದನು. BSB BSB: I brought him to Your disciples, but they could not heal him.”
17 ULB ಅದಕ್ಕೆ ಯೇಸು, <<ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ>> ಅಂದನು. BSB BSB: “O unbelieving and perverse generation!” Jesus replied. “How long must I remain with you? How long must I put up with you? Bring the boy here to Me.”
18 ULB ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು. BSB BSB: Then Jesus rebuked the demon, and it came out of the boy, and he was healed from that moment.
19 ULB ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, <<ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?>> BSB BSB: Afterward the disciples came to Jesus privately and asked, “Why couldn’t we drive it out?”
20 ULB ಆತನು ಅವರಿಗೆ, <<ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ, BSB BSB: “Because you have so little faith,” He answered. “For truly I tell you, if you have faith the size of a mustard seed, you can say to this mountain, ‘Move from here to there,’ and it will move. Nothing will be impossible for you.”
21 ULB ನೀವು ಈ ಬೆಟ್ಟಕ್ಕೆ, <ಇಲ್ಲಿಂದ ಅಲ್ಲಿಗೆ ಸರಿದು ಹೋಗು> ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ>> ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು. BSB BSB: Not in the BSB
22 ULB ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, <<ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು. BSB BSB: When they gathered together in Galilee, Jesus told them, “The Son of Man is about to be delivered into the hands of men.
23 ULB ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು>> ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು. BSB BSB: They will kill Him, and on the third day He will be raised to life.” And the disciples were deeply grieved.
24 ULB ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, <<ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ>> ಎಂದು ಕೇಳಲು, <<ಹೌದು ಕಟ್ಟುವನು>> ಅಂದನು. BSB BSB: After they had arrived in Capernaum, the collectors of the two-drachma tax came to Peter and asked, “Does your Teacher pay the two drachmas?”
25 ULB ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನುಗೆ, <<ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?>> ಎಂದು ಕೇಳಿದನು. BSB BSB: “Yes,” he answered. When Peter entered the house, Jesus preempted him. “What do you think, Simon?” He asked. “From whom do the kings of the earth collect customs and taxes: from their own sons, or from others?”
26 ULB ಅವನು, <<ಪರರಿಂದ>> ಎಂದು ಉತ್ತರ ಕೊಡಲು, ಯೇಸು ಅವನಿಗೆ, <<ಹಾಗಾದರೆ ಪ್ರಜೆಗಳು ಅದ್ದನ್ನು ಕೊಡಬೇಕಾಗಿಲ್ಲವೇ. BSB BSB: “From others,” Peter answered. “Then the sons are exempt,” Jesus said to him.
27 ULB ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು>> ಎಂದು ಹೇಳಿದನು. BSB BSB: “But so that we may not offend them, go to the sea, cast a hook, and take the first fish you catch. When you open its mouth, you will find a four-drachma coin. Take it and give it to them for My tax and yours.”