1 ULB ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, <<ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?>> ಎಂದು ಕೇಳಿದರು. BSB BSB: At that time the disciples came to Jesus and asked, “Who then is the greatest in the kingdom of heaven?”
2 ULB ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, BSB BSB: Jesus invited a little child to stand among them.
3 ULB ಅವರಿಗೆ, <<ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: “Truly I tell you,” He said, “unless you change and become like little children, you will never enter the kingdom of heaven.
4 ULB ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. BSB BSB: Therefore, whoever humbles himself like this little child is the greatest in the kingdom of heaven.
5 ULB ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ. BSB BSB: And whoever welcomes a little child like this in My name welcomes Me.
6 ULB ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ. BSB BSB: But if anyone causes one of these little ones who believe in Me to stumble, it would be better for him to have a large millstone hung around his neck and to be drowned in the depths of the sea.
7 ULB <<ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ. BSB BSB: Woe to the world for the causes of sin. These stumbling blocks must come, but woe to the man through whom they come!
8 ULB ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. BSB BSB: If your hand or your foot causes you to sin, cut it off and throw it away. It is better for you to enter life crippled or lame than to have two hands and two feet and be thrown into the eternal fire.
9 ULB ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. BSB BSB: And if your eye causes you to sin, gouge it out and throw it away. It is better for you to enter life with one eye than to have two eyes and be thrown into the fire of hell.
10 ULB ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. BSB BSB: See that you do not look down on any of these little ones. For I tell you that their angels in heaven always see the face of My Father in heaven.
11 ULB ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು. BSB BSB: Not in the BSB
12 ULB <<ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? BSB BSB: What do you think? If a man has a hundred sheep and one of them goes astray, will he not leave the ninety-nine on the hills and go out to search for the one that is lost?
13 ULB ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: And if he finds it, truly I tell you, he rejoices more over that one sheep than over the ninety-nine that did not go astray.
14 ULB ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. BSB BSB: In the same way, your Father in heaven is not willing that any of these little ones should perish.
15 ULB ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ಹೋಗಿ ನೀನೂ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. BSB BSB: If your brother sins against you, go and confront him privately. If he listens to you, you have won your brother over.
16 ULB ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರದುಕೊಂಡು ಹೋಗು. BSB BSB: But if he will not listen, take one or two others along, so that ‘every matter may be established by the testimony of two or three witnesses.’
17 ULB ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ. BSB BSB: If he refuses to listen to them, tell it to the church. And if he refuses to listen even to the church, regard him as you would a pagan or a tax collector.
18 ULB <<ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: Truly I tell you, whatever you bind on earth will be bound in heaven, and whatever you loose on earth will be loosed in heaven.
19 ULB ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. BSB BSB: Again, I tell you truly that if two of you on the earth agree about anything you ask for, it will be done for you by My Father in heaven.
20 ULB ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ>> ಅಂದನು. BSB BSB: For where two or three gather together in My name, there am I with them.”
21 ULB ಆಗ ಪೇತ್ರನು ಆತನ ಬಳಿಗೆ ಬಂದು, <<ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?>> ಎಂದು ಕೇಳಿದನು. BSB BSB: Then Peter came to Jesus and asked, “Lord, how many times shall I forgive my brother who sins against me? Up to seven times?”
22 ULB ಯೇಸು ಅವನಿಗೆ, <<ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ. BSB BSB: Jesus answered, “I tell you, not just seven times, but seventy-seven times!
23 ULB ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. BSB BSB: Because of this, the kingdom of heaven is like a king who wanted to settle accounts with his servants.
24 ULB ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು. BSB BSB: As he began the settlements, a debtor owing ten thousand talents was brought to him.
25 ULB ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು. BSB BSB: Since the man was unable to pay, the master ordered that he be sold to pay his debt, along with his wife and children and everything he owned.
26 ULB ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, <ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು> ಹೇಳಿದನು. BSB BSB: Then the servant fell on his knees before him. ‘Have patience with me,’ he begged, ‘and I will pay back everything.’
27 ULB ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು. BSB BSB: His master had compassion on him, forgave his debt, and released him.
28 ULB ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, <ನನ್ನ ಸಾಲ ತೀರಿಸು> ಎಂದು ಹೇಳಿದನು. BSB BSB: But when that servant went out, he found one of his fellow servants who owed him a hundred denarii. He grabbed him and began to choke him, saying, ‘Pay back what you owe me!’
29 ULB ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, <ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ> ಎಂದು ಬೇಡಿಕೊಂಡನು. BSB BSB: So his fellow servant fell down and begged him, ‘Have patience with me, and I will pay you back.’
30 ULB ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. BSB BSB: But he refused. Instead, he went and had the man thrown into prison until he could pay his debt.
31 ULB ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು. BSB BSB: When his fellow servants saw what had happened, they were greatly distressed, and they went and recounted all of this to their master.
32 ULB ಆಗ ಅವನ ಒಡೆಯನು ಅವನನ್ನು ಕರಸಿ, <ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?. BSB BSB: Then the master summoned him and said, ‘You wicked servant! I forgave all your debt because you begged me.
33 ULB ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?> ಎಂದು ಹೇಳಿ, BSB BSB: Shouldn’t you have had mercy on your fellow servant, just as I had on you?’
34 ULB ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು. BSB BSB: In anger his master turned him over to the jailers to be tortured, until he should repay all that he owed.
35 ULB ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು>> ಅಂದನು. BSB BSB: That is how My heavenly Father will treat each of you unless you forgive your brother from your heart.”