2 ULB ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು. BSB BSB: He agreed to pay them a denarius for the day and sent them into his vineyard.
3 ULB ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು, BSB BSB: About the third hour he went out and saw others standing in the marketplace doing nothing.
4 ULB ಅವರಿಗೆ, <ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ> ಅಂದನು. ಆಗ ಅವರು ಕೆಲಸಕ್ಕೆ ಹೋದರು. BSB BSB: ‘You also go into my vineyard,’ he said, ‘and I will pay you whatever is right.’
5 ULB ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು. BSB BSB: So they went. He went out again about the sixth hour and the ninth hour and did the same thing.
6 ULB ಮತ್ತೊಂದು ಸಾರಿ ಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, <ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?> ಎಂದು ಕೇಳಿದನು. BSB BSB: About the eleventh hour he went out and found still others standing around. ‘Why have you been standing here all day long doing nothing?’ he asked.
7 ULB ಅವರು ಅವನಿಗೆ, <ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ> ಎಂದರು, ಆಗ ಅವನು ಅವರಿಗೆ, <ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ> ಅಂದನು. BSB BSB: ‘Because no one has hired us,’ they answered. So he told them, ‘You also go into my vineyard.’
8 ULB ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, <ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು> ಎಂದು ಹೇಳಿದನು. BSB BSB: When evening came, the owner of the vineyard said to his foreman, ‘Call the workers and pay them their wages, starting with the last ones hired and moving on to the first.’
9 ULB ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. BSB BSB: The workers who were hired about the eleventh hour came and each received a denarius.
10 ULB ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು. BSB BSB: So when the original workers came, they assumed they would receive more. But each of them also received a denarius.
11 ULB ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ, BSB BSB: On receiving their pay, they began to grumble against the landowner.
12 ULB <ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ> ಅಂದರು. BSB BSB: ‘These men who were hired last worked only one hour,’ they said, ‘and you have made them equal to us who have borne the burden and the scorching heat of the day.’
13 ULB ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, <ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ? BSB BSB: But he answered one of them, ‘Friend, I am not being unfair to you. Did you not agree with me on one denarius?
14 ULB ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ. BSB BSB: Take your pay and go. I want to give this last man the same as I gave you.
15 ULB ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿ ಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?> ಎಂದು ಹೇಳಿದನು. BSB BSB: Do I not have the right to do as I please with what is mine? Or are you envious because I am generous?’
16 ULB ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು>> ಎಂದು ಹೇಳಿದನು. BSB BSB: So the last will be first, and the first will be last.”
17 ULB ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ, BSB BSB: As Jesus was going up to Jerusalem, He took the twelve disciples aside and said,
18 ULB <<ನೋಡಿರಿ ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು. BSB BSB: “Look, we are going up to Jerusalem, and the Son of Man will be delivered over to the chief priests and scribes. They will condemn Him to death
19 ULB ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು>> ಎಂದು ಹೇಳಿದನು. BSB BSB: and will deliver Him over to the Gentiles to be mocked and flogged and crucified. And on the third day He will be raised to life.”
20 ULB ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು. BSB BSB: Then the mother of Zebedee’s sons came to Jesus with her sons and knelt down to make a request of Him.
21 ULB ಆತನು ಆಕೆಯನ್ನು, <<ನಿನ್ನ ಅಪೇಕ್ಷೆ ಏನು?>> ಎಂದು ಕೇಳಲು ಆಕೆ ಆತನಿಗೆ, <<ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು>> ಅಂದಳು. BSB BSB: “What do you want?” He inquired. She answered, “Declare that in Your kingdom one of these two sons of mine may sit at Your right hand, and the other at Your left.”
22 ULB ಅದಕ್ಕೆ ಯೇಸು ಪ್ರತ್ಯುತ್ತರವಾಗಿ, <<ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?>> ಎಂದು ಕೇಲಳಿದನು. ಅವರು ಆತನಿಗೆ, <<ನಮ್ಮಿಂದ ಆಗುವುದು>> ಅಂದರು. BSB BSB: “You do not know what you are asking,” Jesus replied. “Can you drink the cup I am going to drink?” “We can,” the brothers answered.
23 ULB ಆಗ ಆತನು ಅವರಿಗೆ, <<ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು.>> ಎಂದು ಹೇಳಿದನು. BSB BSB: “You will indeed drink My cup,” Jesus said. “But to sit at My right or left is not Mine to grant. These seats belong to those for whom My Father has prepared them.”
24 ULB ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. BSB BSB: When the ten heard about this, they were indignant with the two brothers.
25 ULB ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, <<ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು. BSB BSB: But Jesus called them aside and said, “You know that the rulers of the Gentiles lord it over them, and their superiors exercise authority over them.
26 ULB ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ. BSB BSB: It shall not be this way among you. Instead, whoever wants to become great among you must be your servant,
27 ULB ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ. BSB BSB: and whoever wants to be first among you must be your slave—
28 ULB ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು>> ಎಂದು ಹೇಳಿದನು. BSB BSB: just as the Son of Man did not come to be served, but to serve, and to give His life as a ransom for many.”
29 ULB ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು. BSB BSB: As they were leaving Jericho, a large crowd followed Him.
30 ULB ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, <<ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು>> ಎಂದು ಕೂಗಿಕೊಂಡರು. BSB BSB: And there were two blind men sitting beside the road. When they heard that Jesus was passing by, they cried out, “Lord, Son of David, have mercy on us!”
31 ULB ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, <<ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು>> ಎಂದು ಗಟ್ಟಿಯಾಗಿ ಕೂಗಿಕೊಂಡರು. BSB BSB: The crowd admonished them to be silent, but they cried out all the louder, “Lord, Son of David, have mercy on us!”
32 ULB ಆಗ ಯೇಸು ನಿಂತು ಅವರನ್ನು ಕರೆದು, <<ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?>> ಎಂದು ಕೇಳಿದನು. BSB BSB: Jesus stopped and called them. “What do you want Me to do for you?” He asked.
33 ULB ಅವರು, <<ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು>> ಅಂದರು. BSB BSB: “Lord,” they answered, “let our eyes be opened.”
34 ULB ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು. BSB BSB: Moved with compassion, Jesus touched their eyes, and at once they received their sight and followed Him.