1 ULB ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, BSB BSB: Then Jesus spoke to the crowds and to His disciples:
2 ULB <<ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ; BSB BSB: “The scribes and Pharisees sit in Moses’ seat.
3 ULB ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ. BSB BSB: So practice and observe everything they tell you. But do not do what they do, for they do not practice what they preach.
4 ULB ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು. BSB BSB: They tie up heavy, burdensome loads and lay them on men’s shoulders, but they themselves are not willing to lift a finger to move them.
5 ULB ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ. BSB BSB: All their deeds are done for men to see. They broaden their phylacteries and lengthen their tassels.
6 ULB ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; BSB BSB: They love the places of honor at banquets, the chief seats in the synagogues,
7 ULB ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ <ಗುರುಗಳೆನ್ನಿಸಿಕೊಳ್ಳುವುದು,> ಇವುಗಳೇ ಅವರಿಗೆ ಇಷ್ಟ. BSB BSB: the greetings in the marketplaces, and the title of ‘Rabbi’ by which they are addressed.
8 ULB ಆದರೆ ನೀವು <ಬೋಧಕರೆನ್ನಿಸಿಕೊಳ್ಳಬೇಡಿರಿ;> ಏಕೆಂದರೆ ಕ್ರಿಸ್ತ ನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. BSB BSB: But you are not to be called ‘Rabbi,’ for you have one Teacher, and you are all brothers.
9 ULB ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ BSB BSB: And do not call anyone on earth your father, for you have one Father, who is in heaven.
10 ULB ಮತ್ತು <ಗುರುವೆಂದು> ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು BSB BSB: Nor are you to be called instructors, for you have one Instructor, the Christ.
11 ULB ಆದರೆ ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು. BSB BSB: The greatest among you shall be your servant.
12 ULB ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. BSB BSB: For whoever exalts himself will be humbled, and whoever humbles himself will be exalted.
13 ULB <<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ. BSB BSB: Woe to you, scribes and Pharisees, you hypocrites! You shut the kingdom of heaven in men’s faces. You yourselves do not enter, nor will you let in those who wish to enter.
14 ULB ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ. BSB BSB: Not in the BSB
15 ULB <<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. BSB BSB: Woe to you, scribes and Pharisees, you hypocrites! You traverse land and sea to win a single convert, and when he becomes one, you make him twice as much a son of hell as you are.
16 ULB <<ಅಯ್ಯೋ, ಕುರುಡು ಮಾರ್ಗದರ್ಶಿಗಳೇ, <ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು> ಎಂದು ಹೇಳುತ್ತೀರಿ. BSB BSB: Woe to you, blind guides! You say, ‘If anyone swears by the temple, it means nothing; but if anyone swears by the gold of the temple, he is bound by his oath.’
17 ULB ಕುರುಡರ್ರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ? BSB BSB: You blind fools! Which is greater: the gold, or the temple that makes it sacred?
18 ULB ಮತ್ತು <ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು> ಎಂದು ಹೇಳುತ್ತೀರಿ. BSB BSB: And you say, ‘If anyone swears by the altar, it means nothing; but if anyone swears by the gift on it, he is bound by his oath.’
19 ULB ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ? BSB BSB: You blind men! Which is greater: the gift, or the altar that makes it sacred?
20 ULB ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. BSB BSB: So then, he who swears by the altar swears by it and by everything on it.
21 ULB ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. BSB BSB: And he who swears by the temple swears by it and by the One who dwells in it.
22 ULB ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು. BSB BSB: And he who swears by heaven swears by God’s throne and by the One who sits on it.
23 ULB ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದಿನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮನಿಯಮದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು. BSB BSB: Woe to you, scribes and Pharisees, you hypocrites! You pay tithes of mint, dill, and cumin. But you have disregarded the weightier matters of the law: justice, mercy, and faithfulness. You should have practiced the latter, without neglecting the former. 24 ULB ಕುರುಡ ಮಾರ್ಗದರ್ಶಿಗಳೇ, ನೀವು ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು. BSB BSB: You blind guides! You strain out a gnat but swallow a camel.
25 ULB <<ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ. BSB BSB: Woe to you, scribes and Pharisees, you hypocrites! You clean the outside of the cup and dish, but inside they are full of greed and self-indulgence.
26 ULB ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು. BSB BSB: Blind Pharisee! First clean the inside of the cup and dish, so that the outside may become clean as well.
28 ULB ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ. BSB BSB: In the same way, on the outside you appear to be righteous, but on the inside you are full of hypocrisy and wickedness.
29 ULB ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, BSB BSB: Woe to you, scribes and Pharisees, you hypocrites! You build tombs for the prophets and decorate the monuments of the righteous.
30 ULB <ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ> ಅನ್ನುತ್ತೀರಿ. BSB BSB: And you say, ‘If we had lived in the days of our fathers, we would not have been partners with them in shedding the blood of the prophets.’
31 ULB ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. BSB BSB: So you testify against yourselves that you are the sons of those who murdered the prophets.
32 ULB ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ. BSB BSB: Fill up, then, the measure of the sin of your fathers.
33 ULB ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? BSB BSB: You snakes! You brood of vipers! How will you escape the sentence of hell?
34 ULB ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ. BSB BSB: Because of this, I am sending you prophets and wise men and teachers. Some of them you will kill and crucify, and others you will flog in your synagogues and persecute from town to town.
35 ULB ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು. BSB BSB: And so upon you will come all the righteous blood shed on earth, from the blood of righteous Abel to the blood of Zechariah son of Berechiah, whom you murdered between the temple and the altar.
36 ULB ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. BSB BSB: Truly I tell you, all these things will come upon this generation.
37 ULB <<ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. BSB BSB: O Jerusalem, Jerusalem, who kills the prophets and stones those sent to her, how often I have longed to gather your children together, as a hen gathers her chicks under her wings, but you were unwilling!
38 ULB ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ. BSB BSB: Look, your house is left to you desolate.
39 ULB ಈಗಿಂದ, <ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ>>> ಅಂದನು. BSB BSB: For I tell you that you will not see Me again until you say, ‘Blessed is He who comes in the name of the Lord.’”