3 ULB ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, <<ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?>> ನಮಗೆ ಹೇಳು ಅನ್ನಲು BSB BSB: While Jesus was sitting on the Mount of Olives, the disciples came to Him privately. “Tell us,” they said, “when will these things happen, and what will be the sign of Your coming and of the end of the age?”
4 ULB ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, <<ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. BSB BSB: Jesus answered, “See to it that no one deceives you.
5 ULB ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, <ನಾನು ಕ್ರಿಸ್ತನು> ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. BSB BSB: For many will come in My name, claiming, ‘I am the Christ,’ and will deceive many.
7 ULB ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; BSB BSB: Nation will rise against nation, and kingdom against kingdom. There will be famines and earthquakes in various places.
8 ULB ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ. BSB BSB: All these are the beginning of birth pains.
9 ULB <<ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು. BSB BSB: Then they will deliver you over to be persecuted and killed, and you will be hated by all nations because of My name.
10 ULB ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. BSB BSB: At that time many will fall away and will betray and hate one another,
11 ULB ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. BSB BSB: and many false prophets will arise and deceive many.
12 ULB ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. BSB BSB: Because of the multiplication of wickedness, the love of most will grow cold.
13 ULB ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು. BSB BSB: But the one who perseveres to the end will be saved.
14 ULB ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು. BSB BSB: And this gospel of the kingdom will be preached in all the world as a testimony to all nations, and then the end will come.
16 ULB ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; BSB BSB: then let those who are in Judea flee to the mountains.
17 ULB ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ, BSB BSB: Let no one on the housetop come down to retrieve anything from his house.
18 ULB ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ. BSB BSB: And let no one in the field return for his cloak.
19 ULB ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ. BSB BSB: How miserable those days will be for pregnant and nursing mothers!
20 ULB ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ. BSB BSB: Pray that your flight will not occur in the winter or on the Sabbath.
21 ULB ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು. BSB BSB: For at that time there will be great tribulation, unseen from the beginning of the world until now, and never to be seen again.
22 ULB ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬನಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು. BSB BSB: If those days had not been cut short, nobody would be saved. But for the sake of the elect, those days will be cut short.
23 ULB ಆಗ ಯಾರಾದರು ನಿಮಗೆ, <ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ> ಎಂದು ಹೇಳಿದರೆ ನಂಬಬೇಡಿರಿ. BSB BSB: At that time, if anyone says to you, ‘Look, here is the Christ!’ or ‘There He is!’ do not believe it.
24 ULB ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. BSB BSB: For false Christs and false prophets will appear and perform great signs and wonders to deceive even the elect, if that were possible.
25 ULB ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ. BSB BSB: See, I have told you in advance.
26 ULB ಆದಕಾರಣ ಯಾರಾದರು ನಿಮಗೆ, <ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು> ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; <ಇಗೋ ಒಳಕೋಣೆಗಳಲ್ಲಿದ್ದಾನೆಂದು> ಹೇಳಿದರೆ ನಂಬಬೇಡಿರಿ. BSB BSB: So if they tell you, ‘There He is, in the wilderness,’ do not go out, or, ‘Here He is, in the inner rooms,’ do not believe it.
27 ULB ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು. BSB BSB: For just as the lightning comes from the east and flashes as far as the west, so will be the coming of the Son of Man.
28 ULB ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು. BSB BSB: Wherever there is a carcass, there the vultures will gather.
29 ULB <<ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು. BSB BSB: Immediately after the tribulation of those days: ‘The sun will be darkened, and the moon will not give its light; the stars will fall from the sky, and the powers of the heavens will be shaken.’
30 ULB ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು. BSB BSB: At that time the sign of the Son of Man will appear in heaven, and all the tribes of the earth will mourn. They will see the Son of Man coming on the clouds of heaven with power and great glory.
31 ULB ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು. BSB BSB: And He will send out His angels with a loud trumpet call, and they will gather His elect from the four winds, from one end of the heavens to the other.
33 ULB ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ. BSB BSB: So also, when you see all these things, you will know that He is near, right at the door.
38 ULB ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು. BSB BSB: For in the days before the flood, people were eating and drinking, marrying and giving in marriage, up to the day Noah entered the ark.
39 ULB ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು. BSB BSB: And they were oblivious until the flood came and swept them all away. So will it be at the coming of the Son of Man.
40 ULB ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು. BSB BSB: Two men will be in the field: one will be taken and the other left.
41 ULB ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು. BSB BSB: Two women will be grinding at the mill: one will be taken and the other left.
43 ULB ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ. BSB BSB: But understand this: If the homeowner had known in which watch of the night the thief was coming, he would have kept watch and would not have let his house be broken into.
44 ULB ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. BSB BSB: For this reason, you also must be ready, because the Son of Man will come at an hour you do not expect.
45 ULB ಅಂದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು? BSB BSB: Who then is the faithful and wise servant, whom the master has put in charge of his household, to give the others their food at the proper time?
46 ULB ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು. BSB BSB: Blessed is that servant whose master finds him doing so when he returns.
47 ULB ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. BSB BSB: Truly I tell you, he will put him in charge of all his possessions.
48 ULB ಆದರೆ ಆ ದುಷ್ಟ ಆಳು, <ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ> ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು BSB BSB: But suppose that servant is wicked and says in his heart, ‘My master will be away a long time.’
49 ULB ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದ್ದಾದರೆ, BSB BSB: And he begins to beat his fellow servants and to eat and drink with drunkards.
50 ULB ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ BSB BSB: The master of that servant will come on a day he does not expect and at an hour he does not anticipate.
51 ULB ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು. BSB BSB: Then he will cut him to pieces and assign him a place with the hypocrites, where there will be weeping and gnashing of teeth.