1 ULB ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು, BSB BSB: When morning came, all the chief priests and elders of the people conspired against Jesus to put Him to death.
4 ULB <<ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ>> ಅಂದನು. ಅದಕ್ಕವರು, <<ಅದು ನಮಗೇನು? ನೀನೇ ನೋಡಿಕೋ>> ಅಂದರು. BSB BSB: “I have sinned by betraying innocent blood,” he said. “What is that to us?” they replied. “You bear the responsibility.”
6 ULB ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು <<ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು>> ಎಂದರು. BSB BSB: The chief priests picked up the pieces of silver and said, “It is unlawful to put this into the treasury, since it is blood money.”
7 ULB ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. BSB BSB: After conferring together, they used the money to buy the potter’s field as a burial place for foreigners.
8 ULB ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ <<ಜೀವಹತ್ಯದ ಹೊಲವೆಂಬ>> ಹೆಸರು ಇದೆ. BSB BSB: That is why it has been called the Field of Blood to this day.
9 ULB ಅದೇನಂದರೆ, <<ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ BSB BSB: Then what was spoken through Jeremiah the prophet was fulfilled: “They took the thirty pieces of silver, the price set on Him by the people of Israel,
10 ULB ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.>> ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. BSB BSB: and they gave them for the potter’s field, as the Lord had commanded me.”
11 ULB ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, <<ನೀನು ಯೆಹೂದ್ಯರ ಅರಸನೋ?>> ಎಂದು ಕೇಳಿದನು. ಯೇಸು, <<ನೀನೇ ಹೇಳಿದ್ದೀ>> ಅಂದನು. BSB BSB: Meanwhile Jesus stood before the governor, who questioned Him: “Are You the King of the Jews?” “You have said so,” Jesus replied.
12 ULB ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ, BSB BSB: And when He was accused by the chief priests and elders, He gave no answer.
13 ULB ನಂತರ ಪಿಲಾತನು ಆತನನ್ನು, <<ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?>> ಎಂದು ಕೇಳಿದನು. BSB BSB: Then Pilate asked Him, “Do You not hear how many charges they are bringing against You?”
14 ULB ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು. BSB BSB: But Jesus gave no answer, not even to a single charge, much to the governor’s amazement.
15 ULB ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು. BSB BSB: Now it was the governor’s custom at the feast to release to the crowd a prisoner of their choosing.
16 ULB ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು. BSB BSB: At that time they were holding a notorious prisoner named Barabbas.
17 ULB ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, <<ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?>> ಎಂದು ಅವರನ್ನು ಕೇಳಿದನು. BSB BSB: So when the crowd had assembled, Pilate asked them, “Which one do you want me to release to you: Barabbas, or Jesus who is called Christ?”
18 ULB ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು. BSB BSB: For he knew it was out of envy that they had handed Jesus over to him.
19 ULB ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, <<ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು>> ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು. BSB BSB: While Pilate was sitting on the judgment seat, his wife sent him this message: “Have nothing to do with that innocent man, for I have suffered terribly in a dream today because of Him.”
20 ULB ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು. BSB BSB: But the chief priests and elders persuaded the crowds to ask for Barabbas and to have Jesus put to death.
21 ULB ಅದಕ್ಕೆ ದೇಶಾಧಿಪತಿಯು ಅವರನ್ನು, <<ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?>> ಎಂದು ಕೇಳಲು ಅವರು <<ಬರಬ್ಬನನ್ನು>> ಅಂದರು. BSB BSB: “Which of the two do you want me to release to you?” asked the governor. “Barabbas,” they replied.
22 ULB ಪಿಲಾತನು ಅವರನ್ನು, <<ಹಾಗಾದರೆ ಕ್ರಿಸ್ತನೆನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?>> ಎಂದು ಕೇಳಲು ಎಲ್ಲರೂ, <<ಅವನನ್ನು ಶಿಲುಬೆಗೆ ಹಾಕಿಸು>> ಅಂದರು. BSB BSB: “What then should I do with Jesus who is called Christ?” Pilate asked. They all answered, “Crucify Him!”
23 ULB ಅದಕ್ಕವನು <<ಏಕೆ? ಈತನು ಮಾಡಿದ ಅಪರಾಧವೇನು?>> ಅಂದನು. ಆದರೆ ಅವರು, <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಬಹಳವಾಗಿ ಆರ್ಭಟಿಸಿದರು. BSB BSB: “Why?” asked Pilate. “What evil has He done?” But they shouted all the louder, “Crucify Him!”
24 ULB ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, <<ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ>> ಎನ್ನಲು BSB BSB: When Pilate saw that he was accomplishing nothing, but that instead a riot was breaking out, he took water and washed his hands before the crowd. “I am innocent of this man’s blood,” he said. “You bear the responsibility.”
26 ULB ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. BSB BSB: So Pilate released Barabbas to them. But he had Jesus flogged, and handed Him over to be crucified.
27 ULB ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು, BSB BSB: Then the governor’s soldiers took Jesus into the Praetorium and gathered the whole company around Him.
28 ULB ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ, BSB BSB: They stripped Him and put a scarlet robe on Him.
29 ULB ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನನ್ನು ಪರಿಹಾಸ್ಯಮಾಡಿ BSB BSB: And they twisted together a crown of thorns and set it on His head. They put a staff in His right hand, knelt down before Him, and mocked Him, saying, “Hail, King of the Jews!”
30 ULB ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು. BSB BSB: Then they spit on Him and took the staff and struck Him on the head repeatedly.
31 ULB ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. BSB BSB: After they had mocked Him, they removed the robe and put His own clothes back on Him. Then they led Him away to crucify Him.
32 ULB ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು. BSB BSB: Along the way they found a man from Cyrene, named Simon, and they forced him to carry the cross of Jesus.
33 ULB ಅವರೆಲ್ಲರೂ ಗೊಲ್ಗೊಥಾ ಅಂದರೆ <<ಕಪಾಲಸ್ಥಳ>> ಎಂಬ ಸ್ಥಾನಕ್ಕೆ ಬಂದಾಗ BSB BSB: And when they came to a place called Golgotha, which means The Place of the Skull,
34 ULB ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು. BSB BSB: they offered Him wine to drink, mixed with gall; but after tasting it, He refused to drink it.
35 ULB ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು; BSB BSB: When they had crucified Him, they divided up His garments by casting lots.
36 ULB ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು. BSB BSB: And sitting down, they kept watch over Him there.
37 ULB ಇದಲ್ಲದೆ ಆತನ ಮೇಲೆ ಹೊರಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ, <<ಈತನು ಯೇಸು, ಯೆಹೂದ್ಯರ ಅರಸನು>> ಎಂಬುದೇ. BSB BSB: Above His head they posted the written charge against Him: THIS IS JESUS, THE KING OF THE JEWS.
38 ULB ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. BSB BSB: Two robbers were crucified with Him, one on His right and the other on His left.
39 ULB ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ, BSB BSB: And those who passed by heaped abuse on Him, shaking their heads
40 ULB <<ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ>> ಎಂದು ಆತನನ್ನು ಹಂಗಿಸುತ್ತಿದ್ದರು. BSB BSB: and saying, “You who are going to destroy the temple and rebuild it in three days, save Yourself! If You are the Son of God, come down from the cross!”
41 ULB ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, <<ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. BSB BSB: In the same way, the chief priests, scribes, and elders mocked Him, saying,
42 ULB ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು. BSB BSB: “He saved others, but He cannot save Himself. He is the King of Israel! Let Him come down now from the cross, and we will believe in Him.
43 ULB ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; <ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ>>> ಎಂದು ಅಣಕಿಸಿ ಮಾತನಾಡುತ್ತಿದ್ದರು. BSB BSB: He trusts in God. Let God deliver Him now if He wants Him. For He said, ‘I am the Son of God.’”
44 ULB ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು. BSB BSB: In the same way, even the robbers who were crucified with Him berated Him.
45 ULB ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. BSB BSB: From the sixth hour until the ninth hour darkness came over all the land.
46 ULB ಸುಮಾರು ಮೂರು ಘಂಟೆಗೆ ಯೇಸು, <<ಏಲೀ, ಏಲೀ, ಲಮಾ ಸಬಕ್ತಾನೀ>> ಎಂದು ಮಹಾ ಧ್ವನಿಯಿಂದ ಕೂಗಿದನು. ಅಂದರೆ, <<ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ.>> BSB BSB: About the ninth hour Jesus cried out in a loud voice, “Eli, Eli, lema sabachthani?” which means, “My God, My God, why have You forsaken Me?” 47 ULB ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, <<ಇವನು ಎಲೀಯನನ್ನು ಕರೆಯುತ್ತಿದ್ದಾನೆ>> ಅಂದನು. BSB BSB: When some of those standing there heard this, they said, “He is calling Elijah.”
48 ULB ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು. BSB BSB: One of them quickly ran and brought a sponge. He filled it with sour wine, put it on a reed, and held it up for Jesus to drink.
49 ULB ಮಿಕ್ಕಾದವರು, <<ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ>> ಅಂದರು. BSB BSB: But the others said, “Leave Him alone. Let us see if Elijah comes to save Him.”
52 ULB ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು; BSB BSB: The tombs broke open, and the bodies of many saints who had fallen asleep were raised.
53 ULB ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. BSB BSB: After Jesus’ resurrection, when they had come out of the tombs, they entered the holy city and appeared to many people.
54 ULB ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, <<ನಿಜವಾಗಿ ಈತನು ದೇವಕುಮಾರನಾಗಿದ್ದನು>> ಅಂದರು. BSB BSB: When the centurion and those with him who were guarding Jesus saw the earthquake and all that had happened, they were terrified and said, “Truly this was the Son of God.”
55 ULB ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು. BSB BSB: And many women were there, watching from a distance. They had followed Jesus from Galilee to minister to Him.
56 ULB ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು. BSB BSB: Among them were Mary Magdalene, Mary the mother of James and Joseph, and the mother of Zebedee’s sons.
57 ULB ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು. BSB BSB: When it was evening, there came a rich man from Arimathea named Joseph, who himself was a disciple of Jesus.
58 ULB ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು. BSB BSB: He went to Pilate to ask for the body of Jesus, and Pilate ordered that it be given to him.
59 ULB ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ BSB BSB: So Joseph took the body, wrapped it in a clean linen cloth,
60 ULB ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. BSB BSB: and placed it in his own new tomb that he had cut into the rock. Then he rolled a great stone across the entrance to the tomb and went away.
61 ULB ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು. BSB BSB: Mary Magdalene and the other Mary were sitting there opposite the tomb.
62 ULB ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು, BSB BSB: The next day, the one after Preparation Day, the chief priests and Pharisees assembled before Pilate.
63 ULB <<ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ <ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ> ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು; BSB BSB: “Sir,” they said, “we remember that while He was alive that deceiver said, ‘After three days I will rise again.’
64 ULB ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ>> ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು. BSB BSB: So give the order that the tomb be secured until the third day. Otherwise, His disciples may come and steal Him away and tell the people He has risen from the dead. And this last deception would be worse than the first.”
65 ULB ಪಿಲಾತನು ಅವರಿಗೆ, <<ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ>> ಎಂದು ಹೇಳಲು BSB BSB: “You have a guard,” Pilate said. “Go, make the tomb as secure as you know how.”
66 ULB ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು. BSB BSB: So they went and secured the tomb by sealing the stone and posting the guard.