2 ULB ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. BSB BSB: Suddenly there was a great earthquake, for an angel of the Lord descended from heaven, rolled away the stone, and sat on it.
3 ULB ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; BSB BSB: His appearance was like lightning, and his clothes were white as snow.
4 ULB ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು. BSB BSB: The guards trembled in fear of him and became like dead men.
5 ULB ಆಗ ದೂತನು ಆ ಹೆಂಗಸರಿಗೆ, <<ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; BSB BSB: But the angel said to the women, “Do not be afraid, for I know that you are looking for Jesus, who was crucified.
6 ULB ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; BSB BSB: He is not here; He has risen, just as He said! Come, see the place where He lay.
7 ULB ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, <ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ> ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,>> ಎಂದು ಹೇಳಿದನು. BSB BSB: Then go quickly and tell His disciples, ‘He has risen from the dead and is going ahead of you into Galilee. There you will see Him.’ See, I have told you.”
8 ULB ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. BSB BSB: So they hurried away from the tomb in fear and great joy, and ran to tell His disciples.
9 ULB ಆಗ ಯೇಸು ಅವರನ್ನು ಭೇಟಿಯಾಗಿ, <<ನಿಮಗೆ ಶುಭವಾಗಲಿ>> ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು. BSB BSB: Suddenly Jesus met them and said, “Greetings!” They came to Him, grasped His feet, and worshiped Him.
10 ULB ಆಗ ಯೇಸು ಅವರಿಗೆ, <<ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು>> ಎಂದು ಹೇಳಿದನು. BSB BSB: “Do not be afraid,” said Jesus. “Go and tell My brothers to go to Galilee. There they will see Me.”
11 ULB ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು. BSB BSB: While the women were on their way, some of the guards went into the city and reported to the chief priests all that had happened.
12 ULB ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, BSB BSB: And after the chief priests had met with the elders and formed a plan, they gave the soldiers a large sum of money
14 ULB ಈ ಸುದ್ದಿಯು ಶತಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ>> ಎಂದರು. BSB BSB: If this report reaches the governor, we will satisfy him and keep you out of trouble.”
15 ULB ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ. BSB BSB: So the guards took the money and did as they were instructed. And this account has been circulated among the Jews to this very day.
17 ULB ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. BSB BSB: When they saw Him, they worshiped Him, but some doubted.
20 ULB ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ>> ಎಂದು ಹೇಳಿದನು. BSB BSB: and teaching them to obey all that I have commanded you. And surely I am with you always, even to the end of the age.”