1 ULB ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ, BSB BSB: In those days John the Baptist came, preaching in the wilderness of Judea
2 ULB ಹೇಳಿದ್ದೇನೆಂದರೆ, <<ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.>> BSB BSB: and saying, “Repent, for the kingdom of heaven is near.”
3 ULB << <ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ> ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ>> ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ. BSB BSB: This is he who was spoken of through the prophet Isaiah: “A voice of one calling in the wilderness, ‘Prepare the way for the Lord, make straight paths for Him.’”
4 ULB ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು. BSB BSB: John wore a garment of camel’s hair, with a leather belt around his waist. His food was locusts and wild honey.
5 ULB ಆಗ ಯೇರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, BSB BSB: People went out to him from Jerusalem and all Judea and the whole region around the Jordan.
6 ULB ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. BSB BSB: Confessing their sins, they were baptized by him in the Jordan River.
7 ULB ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, <<ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು? BSB BSB: But when John saw many of the Pharisees and Sadducees coming to his place of baptism, he said to them, “You brood of vipers, who warned you to flee from the coming wrath?
8 ULB ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ. BSB BSB: Produce fruit, then, in keeping with repentance.
9 ULB ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ. BSB BSB: And do not presume to say to yourselves, ‘We have Abraham as our father.’ For I tell you that out of these stones God can raise up children for Abraham.
10 ULB ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಅದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು. BSB BSB: The axe lies ready at the root of the trees, and every tree that does not produce good fruit will be cut down and thrown into the fire.
11 ULB ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು. BSB BSB: I baptize you with water for repentance, but after me will come One more powerful than I, whose sandals I am not worthy to carry. He will baptize you with the Holy Spirit and with fire.
12 ULB ಹೊಟ್ಟನು ತೂರುವ ಮೊರವನ್ನುಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು>> ಎಂದು ಹೇಳಿದನು. BSB BSB: His winnowing fork is in His hand to clear His threshing floor and to gather His wheat into the barn; but He will burn up the chaff with unquenchable fire.”
13 ULB ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು. BSB BSB: At that time Jesus came from Galilee to the Jordan to be baptized by John.
14 ULB ಆತನಿಗೆ ಯೋಹಾನನು ತಡೆಯುತ್ತಾ, <<ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?>> ಎಂದು ಹೇಳಿದಕ್ಕೆ, BSB BSB: But John tried to prevent Him, saying, “I need to be baptized by You, and do You come to me?”
15 ULB ಯೇಸು ಪ್ರತ್ಯುತ್ತರವಾಗಿ ಅವನಿಗೆ, <<ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ>> ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು. BSB BSB: “Let it be so now,” Jesus replied. “It is fitting for us to fulfill all righteousness in this way.” Then John permitted Him.
17 ULB ಆಗ <<ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ>> ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು. BSB BSB: And a voice from heaven said, “This is My beloved Son, in whom I am well pleased!”