1 ULB ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ. BSB BSB: This is the word of the LORD that came to Micah the Moreshite in the days of Jotham, Ahaz, and Hezekiah, kings of Judah—what he saw regarding Samaria and Jerusalem:
2 ULB ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ. BSB BSB: Hear, O peoples, all of you; listen, O earth, and everyone in it! May the Lord GOD bear witness against you, the Lord from His holy temple.
3 ULB ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ. BSB BSB: For behold, the LORD comes forth from His dwelling place; He will come down and tread on the high places of the earth.
4 ULB ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ. BSB BSB: The mountains will melt beneath Him, and the valleys will split apart, like wax before the fire, like water rushing down a slope.
5 ULB ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ! BSB BSB: All this is for the transgression of Jacob and the sins of the house of Israel. What is the transgression of Jacob? Is it not Samaria? And what is the high place of Judah? Is it not Jerusalem?
6 ULB ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು. BSB BSB: Therefore I will make Samaria a heap of rubble in the open field, a planting area for a vineyard. I will pour her stones into the valley and expose her foundations.
7 ULB ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು. BSB BSB: All her carved images will be smashed to pieces; all her wages will be burned in the fire, and I will destroy all her idols. Since she collected the wages of a prostitute, they will be used again on a prostitute.
8 ULB ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು. BSB BSB: Because of this I will lament and wail; I will walk barefoot and naked. I will howl like a jackal and mourn like an ostrich.
9 ULB ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ. BSB BSB: For her wound is incurable; it has reached even Judah; it has approached the gate of my people, as far as Jerusalem itself.
10 ULB ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ, ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ. BSB BSB: Do not tell it in Gath; do not weep at all. Roll in the dust in Beth-leaphrah.
11 ULB ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು. BSB BSB: Depart in shameful nakedness, O dwellers of Shaphir. The dwellers of Zaanan will not come out. Beth-ezel is in mourning; its support is taken from you.
12 ULB ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ. BSB BSB: For the dwellers of Maroth pined for good, but calamity came down from the LORD, even to the gate of Jerusalem.
13 ULB ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು. BSB BSB: Harness your chariot horses, O dweller of Lachish. You were the beginning of sin to the Daughter of Zion, for the transgressions of Israel were found in you.
14 ULB ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು. BSB BSB: Therefore, send farewell gifts to Moresheth-gath; the houses of Achzib will prove deceptive to the kings of Israel.
15 ULB ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಾಯೇಲಿನ ನಾಯಕರು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು. BSB BSB: I will again bring a conqueror against you, O dweller of Mareshah. The glory of Israel will come to Adullam.
16 ULB ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ. BSB BSB: Shave yourselves bald and cut off your hair in mourning for your precious children; make yourselves as bald as an eagle, for they will go from you into exile.