1 ULB ನಾನು ಹೀಗೆ ಸಾರಿದೆನು; <<ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ? BSB BSB: Then I said: “Hear now, O leaders of Jacob, you rulers of the house of Israel. Should you not know justice?
2 ULB ಆಹಾ! ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದ್ದನ್ನು ಪ್ರೀತಿಸುತ್ತಾರೆ. ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ಬಿಡುತ್ತಾರೆ. BSB BSB: You hate good and love evil. You tear the skin from my people and strip the flesh from their bones.
3 ULB ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ದೊಡ್ಡ ಕಡಾಯಿ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ. BSB BSB: You eat the flesh of my people after stripping off their skin and breaking their bones. You chop them up like flesh for the cooking pot, like meat in a cauldron.”
4 ULB ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.>> BSB BSB: Then they will cry out to the LORD, but He will not answer them. At that time He will hide His face from them because of the evil they have done.
5 ULB ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, <<ಸಮಾಧಾನವಿರುವುದು>> ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ, BSB BSB: This is what the LORD says: “As for the prophets who lead My people astray, who proclaim peace while they chew with their teeth, but declare war against one who puts nothing in their mouths:
6 ULB <<ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು. BSB BSB: Therefore night will come over you without visions, and darkness without divination. The sun will set on these prophets, and the daylight will turn black over them.
7 ULB ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೊಳ್ಳುವರು. ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು. ಅವರಿಗೆ ದೈವೋತ್ತರವೇ ದೊರೆಯುವುದಿಲ್ಲ>> ಎಂದು ನುಡಿಯುತ್ತಾನೆ. BSB BSB: Then the seers will be ashamed and the diviners will be disgraced. They will all cover their mouths because there is no answer from God.”
8 ULB ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ. BSB BSB: As for me, however, I am filled with power by the Spirit of the LORD, with justice and courage, to declare to Jacob his transgression and to Israel his sin.
9 ULB ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ, BSB BSB: Now hear this, O leaders of the house of Jacob and rulers of the house of Israel, who despise justice and pervert all that is right,
10 ULB ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ. BSB BSB: who build Zion with bloodshed and Jerusalem with iniquity.
11 ULB ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, <<ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು>> ಅಂದುಕೊಳ್ಳುತ್ತಾರೆ. BSB BSB: Her leaders judge for a bribe, her priests teach for a price, and her prophets practice divination for money. Yet they lean upon the LORD, saying, “Is not the LORD among us? No disaster can come upon us.”
12 ULB ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಉಳಲ್ಪಡುವುದು, ಯೆರೂಸಲೇಮು ಹಾಳುದಿಬ್ಬಗಳಾಗುವುದು. ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವುದು. BSB BSB: Therefore, because of you, Zion will be plowed like a field, Jerusalem will become a heap of rubble, and the temple mount a wooded ridge.