1 ULB ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ. BSB BSB: One who scatters advances against you, O Nineveh. Guard the fortress! Watch the road! Brace yourselves! Summon all your strength!
2 ULB ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ. BSB BSB: For the LORD will restore the splendor of Jacob like the splendor of Israel, though destroyers have laid them waste and ruined the branches of their vine.
3 ULB ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ. BSB BSB: The shields of his mighty men are red; the valiant warriors are dressed in scarlet. The fittings of the chariots flash like fire on the day they are prepared, and the spears of cypress have been brandished.
4 ULB ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ. BSB BSB: The chariots dash through the streets; they rush around the plazas, appearing like torches, darting about like lightning.
5 ULB ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ. BSB BSB: He summons his nobles; they stumble as they advance. They race to its wall; the protective shield is set in place.
6 ULB ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ. BSB BSB: The river gates are thrown open and the palace collapses.
7 ULB ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯ ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ. BSB BSB: It is decreed that the city be exiled and carried away; her maidservants moan like doves, and beat upon their breasts.
8 ULB ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು. BSB BSB: Nineveh has been like a pool of water throughout her days, but now it is draining away. “Stop! Stop!” they cry, but no one turns back.
9 ULB ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ. BSB BSB: “Plunder the silver! Plunder the gold!” There is no end to the treasure, an abundance of every precious thing.
10 ULB ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ. BSB BSB: She is emptied! Yes, she is desolate and laid waste! Hearts melt, knees knock, bodies tremble, and every face grows pale!
11 ULB ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ? BSB BSB: Where is the lions’ lair or the feeding ground of the young lions, where the lion and lioness prowled with their cubs, with nothing to frighten them away?
12 ULB ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು. BSB BSB: The lion mauled enough for its cubs and strangled prey for the lioness. It filled its dens with the kill, and its lairs with mauled prey.
13 ULB ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.>> BSB BSB: “Behold, I am against you,” declares the LORD of Hosts. “I will reduce your chariots to cinders, and the sword will devour your young lions. I will cut off your prey from the earth, and the voices of your messengers will no longer be heard.”