1 ULB ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು. BSB BSB: Now the leaders of the people settled in Jerusalem, and the rest of the people cast lots to bring one out of ten to live in the holy city of Jerusalem, while the remaining nine were to dwell in their own towns.
2 ULB ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು. BSB BSB: And the people blessed all the men who volunteered to live in Jerusalem.
3 ULB ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. BSB BSB: These are the heads of the provinces who settled in Jerusalem. (In the villages of Judah, however, each lived on his own property in their towns—the Israelites, priests, Levites, temple servants, and descendants of Solomon’s servants—
4 ULB ಯೆರೂಸಲೇಮಿನಲ್ಲಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಲ್ಲಿ ಕೆಲವರು ವಾಸವಾಗಿದ್ದರು. ಯೆಹೂದ ಕುಲದವರಲ್ಲಿ: ಅತಾಯನು, ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು. BSB BSB: while some of the descendants of Judah and Benjamin settled in Jerusalem.) From the descendants of Judah: Athaiah son of Uzziah, the son of Zechariah, the son of Amariah, the son of Shephatiah, the son of Mahalalel, a descendant of Perez;
5 ULB ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು. BSB BSB: and Maaseiah son of Baruch, the son of Col-hozeh, the son of Hazaiah, the son of Adaiah, the son of Joiarib, the son of Zechariah, a descendant of Shelah.
6 ULB ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ. BSB BSB: The descendants of Perez who settled in Jerusalem totaled 468 men of valor.
7 ULB ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ. BSB BSB: From the descendants of Benjamin: Sallu son of Meshullam, the son of Joed, the son of Pedaiah, the son of Kolaiah, the son of Maaseiah, the son of Ithiel, the son of Jeshaiah;
8 ULB ರಣವೀರರಾದ ಗಬ್ಬೈ ಮತ್ತು ಸಲ್ಲೈ ಹಾಗು ಒಂಭೈನೂರಿಪ್ಪತ್ತೆಂಟು ಮಂದಿ. BSB BSB: and his followers Gabbai and Sallai—928 men.
9 ULB ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು. BSB BSB: Joel son of Zichri was the officer over them, and Judah son of Hassenuah was over the Second District of the city.
10 ULB ಯಾಜಕರಲ್ಲಿ: ಯೋಯಾರೀಬನ ಮಗನಾದ ಯೆದಾಯ, ಮತ್ತು ಯಾಕೀನ್, BSB BSB: From the priests: Jedaiah son of Joiarib; Jachin;
11 ULB ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು. BSB BSB: Seraiah son of Hilkiah, the son of Meshullam, the son of Zadok, the son of Meraioth, the son of Ahitub, the chief official of the house of God;
12 ULB ಮತ್ತು ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳು ಒಟ್ಟು ಎಂಟುನೂರ ಇಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬುವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯನ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ. BSB BSB: and their associates who did the work at the temple—822 men; Adaiah son of Jeroham, the son of Pelaliah, the son of Amzi, the son of Zechariah, the son of Pashhur, the son of Malchijah;
13 ULB ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ. BSB BSB: and his associates, the leaders of families—242 men; Amashai son of Azarel, the son of Ahzai, the son of Meshillemoth, the son of Immer;
14 ULB ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು. BSB BSB: and his associates—128 mighty men of valor. Zabdiel son of Haggedolim was their overseer.
15 ULB ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು. BSB BSB: From the Levites: Shemaiah son of Hasshub, the son of Azrikam, the son of Hashabiah, the son of Bunni;
16 ULB ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು, BSB BSB: Shabbethai and Jozabad, two leaders of the Levites, who supervised the work outside the house of God;
17 ULB ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು, BSB BSB: Mattaniah son of Mica, the son of Zabdi, the son of Asaph, who led in thanksgiving and prayer; Bakbukiah, second among his associates; and Abda son of Shammua, the son of Galal, the son of Jeduthun.
18 ULB ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ. BSB BSB: The Levites in the holy city totaled 284.
19 ULB ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ. BSB BSB: And the gatekeepers: Akkub, Talmon, and their associates, who kept watch at the gates—172 men.
20 ULB ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು. BSB BSB: The rest of the Israelites, with the priests and Levites, were in all the villages of Judah, each on his own inheritance.
21 ULB ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು. BSB BSB: The temple servants lived on the hill of Ophel, with Ziha and Gishpa over them.
22 ULB ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು. BSB BSB: Now the overseer of the Levites in Jerusalem was Uzzi son of Bani, the son of Hashabiah, the son of Mattaniah, the son of Mica. He was one of Asaph’s descendants, who were the singers in charge of the service of the house of God.
23 ULB ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು. BSB BSB: For there was a command from the king concerning the singers, an ordinance regulating their daily activities.
24 ULB ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು. BSB BSB: Pethahiah son of Meshezabel, a descendant of Zerah son of Judah, was the king’s agent in every matter concerning the people.
25 ULB ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು, BSB BSB: As for the villages with their fields, some of the people of Judah lived in Kiriath-arba, Dibon, Jekabzeel, and their villages;
26 ULB ಯೇಷೂವ, ಮೋಲಾದ, ಬೇತ್ಪೆಲೆಟ್ ಇವುಗಳೂ ಮತ್ತು ಇವುಗಳ ಗ್ರಾಮಗಳು, BSB BSB: in Jeshua, Moladah, and Beth-pelet;
27 ULB ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು, BSB BSB: in Hazar-shual; in Beersheba and its villages;
28 ULB ಚಿಕ್ಲಗ್, ಮೆಕೋನವೂ ಇವುಗಳೂ ಮತ್ತು ಇವುಗಳ ಗ್ರಾಮಗಳು, BSB BSB: in Ziklag; in Meconah and its villages;
29 ULB ಏನ್ರಿಮ್ಮೋನ್, ಚೊರ್ರ, ಯರ್ಮೂತ್ ಇವುಗಳೂ ಮತ್ತು ಇವುಗಳ ಗ್ರಾಮಗಳು, BSB BSB: in En-rimmon, Zorah, Jarmuth,
30 ULB ಜನೋಹ, ಅದುಲ್ಲಾಮ್ ಇವುಗಳ ಮತ್ತು ಇವುಗಳ ಗ್ರಾಮಗಳು ಮತ್ತು ಲಾಕೀಷ್ ಇದರ ಪ್ರಾಂತ್ಯಗಳು, ಅಜೇಕವೂ ಅದರ ಗ್ರಾಮಗಳು ಯೆಹೂದ ಕುಲದವರ ನಿವಾಸ ಸ್ಥಾನಗಳಾಗಿದ್ದವು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಮಾಡುತ್ತಿದ್ದರು. BSB BSB: Zanoah, Adullam, and their villages; in Lachish and its fields; and in Azekah and its villages. So they settled from Beersheba all the way to the Valley of Hinnom.
31 ULB ಬೆನ್ಯಾಮೀನ್ ಕುಲದವರು ಗೆಬ ಊರಿನಿಂದ, ಮಿಕ್ಮಾಷ್, ಅಯ್ಯಾ ಹಾಗು ಬೇತೇಲ್ ಎಂಬ ಗ್ರಾಮಗಳವರೆಗೂ ವಾಸಮಾಡುತ್ತಿದ್ದರು. BSB BSB: The descendants of Benjamin from Geba lived in Michmash, Aija, and Bethel with its villages;
32 ULB ಅನಾತೋತ್, ನೋಬ್, ಅನನ್ಯ, BSB BSB: in Anathoth, Nob, Ananiah,
33 ULB ಹಾಚೋರ್, ರಾಮಾ, ಗಿತ್ತಯಿಮ್, BSB BSB: Hazor, Ramah, Gittaim,
34 ULB ಹಾದೀದ್, ಚೆಬೋಯಿಮ್, ನೆಬಲ್ಲಾಟ್, BSB BSB: Hadid, Zeboim, Neballat,
35 ULB ಲೋದ್, ಓನೋ, ಗೇಹರಾಷೀಮ್ ಎಂಬ ಗ್ರಾಮಗಳೂ ಬೆನ್ಯಾಮೀನ್ ಕುಲದವರ ನಿವಾಸ ಸ್ಥಾನಗಳಾಗಿದ್ದವು. BSB BSB: Lod, and Ono; and in the Valley of the Craftsmen.
36 ULB ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು. BSB BSB: And some divisions of the Levites of Judah settled in Benjamin.
Select verses for actions: Enter goes to them and Escape comes back.