1 ULB ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು. BSB BSB: Then Miriam and Aaron criticized Moses because of the Cushite woman he had married, for he had taken a Cushite wife.
2 ULB ಅವರು, <<ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತನಾಡುತ್ತಾನೋ? ನಮ್ಮ ಮೂಲಕ ಆತನು ಮಾತನಾಡುವುದಿಲ್ಲವೇ?>> ಎಂದು ಹೇಳಿಕೊಂಡರು. ಅವರು ಆಡಿದ ಮಾತು ಯೆಹೋವನಿಗೆ ಕೇಳಿಸಿತು. BSB BSB: “Does the LORD speak only through Moses?” they said. “Does He not also speak through us?” And the LORD heard this.
3 ULB ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು. BSB BSB: Now Moses was a very humble man, more so than any man on the face of the earth.
4 ULB ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, <<ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು>> ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು. BSB BSB: And suddenly the LORD said to Moses, Aaron, and Miriam, “You three, come out to the Tent of Meeting.” So the three went out,
5 ULB ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು. BSB BSB: and the LORD came down in a pillar of cloud, stood at the entrance to the Tent, and summoned Aaron and Miriam. When both of them had stepped forward,
6 ULB ಯೆಹೋವನು ಅವರಿಗೆ, <<ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು. BSB BSB: He said, “Hear now My words: If there is a prophet among you, I, the LORD, will reveal Myself to him in a vision; I will speak to him in a dream.
7 ULB ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ. BSB BSB: But this is not so with My servant Moses; he is faithful in all My house.
8 ULB ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?>> ಎಂದನು. BSB BSB: I speak with him face to face, clearly and not in riddles; he sees the form of the LORD. Why then were you unafraid to speak against My servant Moses?”
9 ULB ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು. BSB BSB: So the anger of the LORD burned against them, and He departed.
10 ULB ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು. BSB BSB: As the cloud lifted from above the Tent, suddenly Miriam became leprous, white as snow. Aaron turned toward her, saw that she was leprous,
11 ULB ಆಗ ಆರೋನನು ಮೋಶೆಗೆ, <<ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. BSB BSB: and said to Moses, “My lord, please do not hold against us this sin we have so foolishly committed.
12 ULB ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು>> ಎಂದು ಬೇಡಿದನು. BSB BSB: Please do not let her be like a stillborn infant whose flesh is half consumed when he comes out of his mother’s womb.”
13 ULB ಆಗ ಮೋಶೆ ಯೆಹೋವನಿಗೆ, <<ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ>> ಎಂದು ಮೊರೆಯಿಟ್ಟನು. BSB BSB: So Moses cried out to the LORD, “O God, please heal her!”
14 ULB ಅದಕ್ಕೆ ಯೆಹೋವನು ಮೋಶೆಗೆ, <<ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು>> ಎಂದು ಉತ್ತರಕೊಟ್ಟನು. BSB BSB: But the LORD answered Moses, “If her father had but spit in her face, would she not have been in disgrace for seven days? Let her be confined outside the camp for seven days; after that she may be brought back in.”
15 ULB ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ. BSB BSB: So Miriam was confined outside the camp for seven days, and the people did not move on until she was brought in again.
16 ULB ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು. BSB BSB: After that, the people set out from Hazeroth and camped in the Wilderness of Paran.
Select verses for actions: Enter goes to them and Escape comes back.