1 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: Then the LORD said to Moses,
2 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ, BSB BSB: “Speak to the Israelites and tell them: After you enter the land that I am giving you as a home
3 ULB ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ, BSB BSB: and you present a food offering to the LORD from the herd or flock to produce a pleasing aroma to the LORD—either a burnt offering or a sacrifice, for a special vow or freewill offering or appointed feast—
4 ULB ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು. BSB BSB: then the one presenting his offering to the LORD shall also present a grain offering of a tenth of an ephah of fine flour mixed with a quarter hin of olive oil.
5 ULB ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು. BSB BSB: With the burnt offering or sacrifice of each lamb, you are to prepare a quarter hin of wine as a drink offering.
6 ULB << <ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ, BSB BSB: With a ram you are to prepare a grain offering of two-tenths of an ephah of fine flour mixed with a third of a hin of olive oil,
7 ULB ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. BSB BSB: and a third of a hin of wine as a drink offering, a pleasing aroma to the LORD.
8 ULB << <ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ, BSB BSB: When you prepare a young bull as a burnt offering or sacrifice to fulfill a vow or as a peace offering to the LORD,
9 ULB ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು. BSB BSB: present with the bull a grain offering of three-tenths of an ephah of fine flour mixed with half a hin of olive oil.
10 ULB ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು. BSB BSB: Also present half a hin of wine as a drink offering. It is a food offering, a pleasing aroma to the LORD.
11 ULB << <ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು. BSB BSB: This is to be done for each bull, ram, lamb, or goat.
12 ULB ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು. BSB BSB: This is how you must prepare each one, no matter how many.
13 ULB ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು. BSB BSB: Everyone who is native-born shall prepare these things in this way when he presents a food offering as a pleasing aroma to the LORD.
14 ULB ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು. BSB BSB: And for the generations to come, if a foreigner residing with you or someone else among you wants to prepare a food offering as a pleasing aroma to the LORD, he is to do exactly as you do.
15 ULB ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು. BSB BSB: The assembly is to have the same statute both for you and for the foreign resident; it is a permanent statute for the generations to come. You and the foreigner shall be the same before the LORD.
16 ULB ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.>>> BSB BSB: The same law and the same ordinance will apply both to you and to the foreigner residing with you.”
17 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: Then the LORD said to Moses,
18 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ, BSB BSB: “Speak to the Israelites and tell them: When you enter the land to which I am bringing you
19 ULB ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. BSB BSB: and you eat the food of the land, you shall lift up an offering to the LORD.
20 ULB ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. BSB BSB: From the first of your dough, you are to lift up a cake as a contribution; offer it just like an offering from the threshing floor.
21 ULB << <ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. BSB BSB: Throughout your generations, you are to give the LORD an offering from the first of your dough.
22 ULB ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ, BSB BSB: Now if you stray unintentionally and do not obey all these commandments that the LORD has spoken to Moses—
23 ULB ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ, BSB BSB: all that the LORD has commanded you through Moses from the day the LORD gave them and continuing through the generations to come—
24 ULB ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. BSB BSB: and if it was done unintentionally without the knowledge of the congregation, then the whole congregation is to prepare one young bull as a burnt offering, a pleasing aroma to the LORD, with its grain offering and drink offering according to the regulation, and one male goat as a sin offering.
25 ULB ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ, BSB BSB: The priest is to make atonement for the whole congregation of Israel, so that they may be forgiven; for the sin was unintentional and they have brought to the LORD a food offering and a sin offering, presented before the LORD for their unintentional sin.
26 ULB ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು. BSB BSB: Then the whole congregation of Israel and the foreigners residing among them will be forgiven, since it happened to all the people unintentionally.
27 ULB << <ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು. BSB BSB: Also, if one person sins unintentionally, he is to present a year-old female goat as a sin offering.
28 ULB ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. BSB BSB: And the priest shall make atonement before the LORD on behalf of the person who erred by sinning unintentionally; and when atonement has been made for him, he will be forgiven.
29 ULB ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು, BSB BSB: You shall have the same law for the one who acts in error, whether he is a native-born Israelite or a foreigner residing among you.
30 ULB ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು. BSB BSB: But the person who sins defiantly, whether a native or foreigner, blasphemes the LORD. That person shall be cut off from among his people.
31 ULB ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.>>> BSB BSB: He shall certainly be cut off, because he has despised the word of the LORD and broken His commandment; his guilt remains on him.”
32 ULB ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು. BSB BSB: While the Israelites were in the wilderness, a man was found gathering wood on the Sabbath day.
33 ULB ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು. BSB BSB: Those who found the man gathering wood brought him to Moses, Aaron, and the whole congregation,
34 ULB ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು. BSB BSB: and because it had not been declared what should be done to him, they placed him in custody.
35 ULB ತರುವಾಯ ಯೆಹೋವನು ಮೋಶೆಗೆ, <<ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು>> ಎಂದು ಆಜ್ಞಾಪಿಸಿದನು. BSB BSB: And the LORD said to Moses, “The man must surely be put to death. The whole congregation is to stone him outside the camp.”
36 ULB ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು. BSB BSB: So the whole congregation took the man outside the camp and stoned him to death, as the LORD had commanded Moses.
37 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: And the LORD said to Moses,
38 ULB <<ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು. BSB BSB: “Speak to the Israelites and tell them that throughout the generations to come they are to make for themselves tassels for the corners of their garments, with a blue cord on each tassel.
39 ULB ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ BSB BSB: These will serve as tassels for you to look at, so that you may remember all the commandments of the LORD, that you may obey them and not prostitute yourselves by following your own heart and your own eyes.
40 ULB ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ. BSB BSB: Then you will remember and obey all My commandments, and you will be holy to your God.
41 ULB ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.>> BSB BSB: I am the LORD your God who brought you out of the land of Egypt to be your God. I am the LORD your God.”
Select verses for actions: Enter goes to them and Escape comes back.