1 ULB ಆಗ ಯೆಹೋವನು ಆರೋನನಿಗೆ, <<ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು. BSB BSB: So the LORD said to Aaron, “You and your sons and your father’s house must bear the iniquity involving the sanctuary. And you and your sons alone must bear the iniquity involving your priesthood.
2 ULB ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು. BSB BSB: But bring with you also your brothers from the tribe of Levi, the tribe of your father, that they may join you and assist you and your sons before the Tent of the Testimony.
3 ULB ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ. BSB BSB: And they shall attend to your duties and to all the duties of the Tent; but they must not come near to the furnishings of the sanctuary or the altar, or both they and you will die.
4 ULB ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು. BSB BSB: They are to join you and attend to the duties of the Tent of Meeting, doing all the work at the Tent; but no outsider may come near you.
5 ULB ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು. BSB BSB: And you shall attend to the duties of the sanctuary and of the altar, so that wrath may not fall on the Israelites again.
6 ULB ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. BSB BSB: Behold, I Myself have selected your fellow Levites from the Israelites as a gift to you, dedicated to the LORD to perform the service for the Tent of Meeting.
7 ULB ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು>> ಎಂದನು. BSB BSB: But only you and your sons shall attend to your priesthood for everything concerning the altar and what is inside the veil, and you are to perform that service. I am giving you the work of the priesthood as a gift, but any outsider who comes near the sanctuary must be put to death.”
8 ULB ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, <<ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು. BSB BSB: Then the LORD said to Aaron, “Behold, I have put you in charge of My offerings. As for all the sacred offerings of the Israelites, I have given them to you and your sons as a portion and a permanent statute.
9 ULB ಬೆಂಕಿಯಲ್ಲಿ ಹೋಮಮಾಡದೆ ಉಳಿದಿರುವ ಮಹಾ ಪರಿಶುದ್ಧ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಧಾನ್ಯದ್ರವ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ ಇವುಗಳಲ್ಲಿ ಹೋಮಶೇಷವು ಮಹಾಪರಿಶುದ್ಧವಾದುದರಿಂದ ನಿನಗೂ ನಿನ್ನ ಸಂತತಿಯವರಿಗೂ ಸಲ್ಲಬೇಕು. BSB BSB: A portion of the most holy offerings reserved from the fire will be yours. From all the offerings they render to Me as most holy offerings, whether grain offerings or sin offerings or guilt offerings, that part belongs to you and your sons.
10 ULB ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. BSB BSB: You are to eat it as a most holy offering, and every male may eat it. You shall regard it as holy.
11 ULB <<ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು. BSB BSB: And this is yours as well: the offering of their gifts, along with all the wave offerings of the Israelites. I have given this to you and your sons and daughters as a permanent statute. Every ceremonially clean person in your household may eat it.
12 ULB ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ. BSB BSB: I give you all the freshest olive oil and all the finest new wine and grain that the Israelites give to the LORD as their firstfruits.
13 ULB ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು. BSB BSB: The firstfruits of everything in their land that they bring to the LORD will belong to you. Every ceremonially clean person in your household may eat them.
14 ULB ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು. BSB BSB: Every devoted thing in Israel belongs to you.
15 ULB ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. BSB BSB: The firstborn of every womb, whether man or beast, that is offered to the LORD belongs to you. But you must surely redeem every firstborn son and every firstborn male of unclean animals.
16 ULB ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು. BSB BSB: You are to pay the redemption price for a month-old male according to your valuation: five shekels of silver, according to the sanctuary shekel, which is twenty gerahs.
17 ULB <<ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು. BSB BSB: But you must not redeem the firstborn of an ox, a sheep, or a goat; they are holy. You are to splatter their blood on the altar and burn their fat as a food offering, a pleasing aroma to the LORD.
18 ULB ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು. BSB BSB: And their meat belongs to you, just as the breast and right thigh of the wave offering belong to you.
19 ULB ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು>> ಎಂದು ಹೇಳಿದನು. BSB BSB: All the holy offerings that the Israelites present to the LORD I give to you and to your sons and daughters as a permanent statute. It is a permanent covenant of salt before the LORD for you and your offspring.”
20 ULB ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, <<ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ. BSB BSB: Then the LORD said to Aaron, “You will have no inheritance in their land, nor will you have any portion among them. I am your portion and your inheritance among the Israelites.
21 ULB <<ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ. BSB BSB: Behold, I have given to the Levites all the tithes in Israel as an inheritance in return for the work they do, the service of the Tent of Meeting.
22 ULB ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು. BSB BSB: No longer may the Israelites come near to the Tent of Meeting, or they will incur guilt and die.
23 ULB ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ. BSB BSB: The Levites are to perform the work of the Tent of Meeting, and they must bear their iniquity. This is a permanent statute for the generations to come. The Levites will not receive an inheritance among the Israelites.
24 ULB ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ <ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ>>> ಎಂದು ಹೇಳಿದ ಮಾತಿಗೆ ಇದೇ ಕಾರಣ. BSB BSB: For I have given to the Levites as their inheritance the tithe that the Israelites present to the LORD as a contribution. That is why I told them that they would not receive an inheritance among the Israelites.”
25 ULB ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, BSB BSB: And the LORD instructed Moses,
26 ULB <<ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, <ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು. BSB BSB: “Speak to the Levites and tell them: ‘When you receive from the Israelites the tithe that I have given you as your inheritance, you must present part of it as an offering to the LORD—a tithe of the tithe.
27 ULB ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು. BSB BSB: Your offering will be reckoned to you as grain from the threshing floor or juice from the winepress.
28 ULB ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು. BSB BSB: So you are to present an offering to the LORD from all the tithes you receive from the Israelites, and from these you are to give the LORD’s offering to Aaron the priest.
29 ULB ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು> BSB BSB: You must present the offering due the LORD from all the best of every gift, the holiest part of it.’
30 ULB ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, <ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು. BSB BSB: Therefore say to the Levites, ‘When you have presented the best part, it will be reckoned to you as the produce of the threshing floor or winepress.
31 ULB ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ. BSB BSB: And you and your households may eat the rest of it anywhere; it is the compensation for your work at the Tent of Meeting.
32 ULB ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ>>> ಎಂದನು. BSB BSB: Once you have presented the best part of it, you will not incur guilt because of it. But you must not defile the sacred offerings of the Israelites, or else you will die.’”
Select verses for actions: Enter goes to them and Escape comes back.