1 ULB ಯೆಹೋವನು ಮಾತನಾಡಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ, BSB BSB: Then the LORD said to Moses and Aaron:
2 ULB <<ಇಸ್ರಾಯೇಲರೆಲ್ಲರೂ ಒಬ್ಬೊಬ್ಬರಾಗಿ ಕುಟುಂಬದ ಗುರುತುಗಳ ಪ್ರಕಾರ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರದಲ್ಲಿ ಹಾಕಿಕೊಳ್ಳಬೇಕು. ಅವರು ದೇವದರ್ಶನದ ಗುಡಾರದ ಎದುರಿನಲ್ಲಿ ಇಳಿದುಕೊಳ್ಳಬೇಕು.>> BSB BSB: “The Israelites are to camp around the Tent of Meeting at a distance from it, each man under his standard, with the banners of his family.
3 ULB ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು. BSB BSB: On the east side, toward the sunrise, the divisions of Judah are to camp under their standard: The leader of the Judahites is Nahshon son of Amminadab,
4 ULB ಅವನ ಸೈನಿಕರ ಸಂಖ್ಯೆ 74,600 ಮಂದಿ. BSB BSB: and his division numbers 74,600.
5 ULB ಯೆಹೂದ ಕುಲದ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಕುಲದವರು. ಚೂವಾರನ ಮಗನಾದ ನೆತನೇಲನು ಇಸ್ಸಾಕಾರರ ಸೈನ್ಯಾಧಿಪತಿ. BSB BSB: The tribe of Issachar will camp next to it. The leader of the Issacharites is Nethanel son of Zuar,
6 ULB ಅವನ ಸೈನಿಕರ ಸಂಖ್ಯೆ 54,400 ಮಂದಿ. BSB BSB: and his division numbers 54,400.
7 ULB ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ. BSB BSB: Next will be the tribe of Zebulun. The leader of the Zebulunites is Eliab son of Helon,
8 ULB ಅವನ ಸೈನಿಕರ ಸಂಖ್ಯೆ 57,400 ಮಂದಿ. BSB BSB: and his division numbers 57,400.
9 ULB ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. BSB BSB: The total number of men in the divisions of the camp of Judah is 186,400; they shall set out first.
10 ULB ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೈನ್ಯಾಧಿಪತಿ. BSB BSB: On the south side, the divisions of Reuben are to camp under their standard: The leader of the Reubenites is Elizur son of Shedeur,
11 ULB ಅವನ ಸೈನಿಕರ ಸಂಖ್ಯೆ 46,500 ಮಂದಿ. BSB BSB: and his division numbers 46,500.
12 ULB ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ. BSB BSB: The tribe of Simeon will camp next to it. The leader of the Simeonites is Shelumiel son of Zurishaddai,
13 ULB ಅವನ ಸೈನಿಕರ ಸಂಖ್ಯೆ 59,300 ಮಂದಿ. BSB BSB: and his division numbers 59,300.
14 ULB ತರುವಾಯ ಗಾದ್ಯರ ಕುಲದವರು. ರೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೈನ್ಯಾಧಿಪತಿ. BSB BSB: Next will be the tribe of Gad. The leader of the Gadites is Eliasaph son of Deuel,
15 ULB ಅವನ ಸೈನಿಕರ ಸಂಖ್ಯೆ 45,650 ಮಂದಿ. BSB BSB: and his division numbers 45,650.
16 ULB ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. BSB BSB: The total number of men in the divisions of the camp of Reuben is 151,450; they shall set out second.
17 ULB ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. BSB BSB: In the middle of the camps, the Tent of Meeting is to travel with the camp of the Levites. They are to set out in the order they encamped, each in his own place under his standard.
18 ULB ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ. BSB BSB: On the west side, the divisions of Ephraim are to camp under their standard: The leader of the Ephraimites is Elishama son of Ammihud,
19 ULB ಅವನ ಸೈನಿಕರ ಸಂಖ್ಯೆ 40,500 ಮಂದಿ. BSB BSB: and his division numbers 40,500.
20 ULB ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ. BSB BSB: The tribe of Manasseh will be next to it. The leader of the Manassites is Gamaliel son of Pedahzur,
21 ULB ಅವನ ಸೈನಿಕರ ಸಂಖ್ಯೆ 32,200 ಮಂದಿ. BSB BSB: and his division numbers 32,200.
22 ULB ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ. BSB BSB: Next will be the tribe of Benjamin. The leader of the Benjamites is Abidan son of Gideoni,
23 ULB ಅವನ ಸೈನಿಕರ ಸಂಖ್ಯೆ 35,400 ಮಂದಿ. BSB BSB: and his division numbers 35,400.
24 ULB ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. BSB BSB: The total number of men in the divisions of the camp of Ephraim is 108,100; they shall set out third.
25 ULB ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ. BSB BSB: On the north side, the divisions of Dan are to camp under their standard: The leader of the Danites is Ahiezer son of Ammishaddai,
26 ULB ಅವನ ಸೈನಿಕರ ಸಂಖ್ಯೆ 62,700 ಮಂದಿ. BSB BSB: and his division numbers 62,700.
27 ULB ದಾನ್ ಕುಲದ ಬಳಿಯಲ್ಲಿ ಆಶೇರ್ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಒಕ್ರಾನನ ಮಗನಾದ ಪಗೀಯೇಲನು ಆಶೇರ್ ಕುಲದವರ ಸೈನ್ಯಾಧಿಪತಿ. BSB BSB: The tribe of Asher will camp next to it. The leader of the Asherites is Pagiel son of Ocran,
28 ULB ಅವನ ಸೈನಿಕರ ಸಂಖ್ಯೆ 41,500 ಮಂದಿ. BSB BSB: and his division numbers 41,500.
29 ULB ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ. BSB BSB: Next will be the tribe of Naphtali. The leader of the Naphtalites is Ahira son of Enan,
30 ULB ಅವನ ಸೈನಿಕರ ಸಂಖ್ಯೆ 53,400 ಮಂದಿ. BSB BSB: and his division numbers 53,400.
31 ULB ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು. BSB BSB: The total number of men in the camp of Dan is 157,600; they shall set out last, under their standards.”
32 ULB ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ. BSB BSB: These are the Israelites, numbered according to their families. The total of those counted in the camps, by their divisions, was 603,550.
33 ULB ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇಸ್ರಾಯೇಲರ ಸಂಗಡ ಲೆಕ್ಕಹಾಕಲಿಲ್ಲ. BSB BSB: But the Levites were not counted among the other Israelites, as the LORD had commanded Moses.
34 ULB ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು. BSB BSB: So the Israelites did everything the LORD commanded Moses; they camped under their standards in this way and set out in the same way, each man with his clan and his family.
Select verses for actions: Enter goes to them and Escape comes back.