1 ULB ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು. BSB BSB: Then the Israelites traveled on and camped in the plains of Moab near the Jordan, across from Jericho.
2 ULB ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು. BSB BSB: Now Balak son of Zippor saw all that Israel had done to the Amorites,
3 ULB ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು. BSB BSB: and Moab was terrified of the people because they were numerous. Indeed, Moab dreaded the Israelites.
4 ULB ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, <<ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ>> ಎಂದು ಹೇಳಿದರು. BSB BSB: So the Moabites said to the elders of Midian, “This horde will devour everything around us, as an ox licks up the grass of the field.” Since Balak son of Zippor was king of Moab at that time,
6 ULB ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು>> ಎಂದು ಕಳುಹಿಸಿದನು. BSB BSB: So please come now and put a curse on this people, because they are too mighty for me. Perhaps I may be able to defeat them and drive them out of the land; for I know that those you bless are blessed, and those you curse are cursed.”
7 ULB ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು. BSB BSB: The elders of Moab and Midian departed with the fees for divination in hand. They came to Balaam and relayed to him the words of Balak.
8 ULB ಬಿಳಾಮನು ಅವರಿಗೆ, <<ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು>> ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. BSB BSB: “Spend the night here,” Balaam replied, “and I will give you the answer that the LORD speaks to me.” So the princes of Moab stayed with Balaam.
9 ULB ದೇವರು ಬಿಳಾಮನಿಗೆ, <<ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?>> ಎಂದು ಕೇಳಲು, BSB BSB: Then God came to Balaam and asked, “Who are these men with you?”
10 ULB ಬಿಳಾಮನು ದೇವರಿಗೆ, <<ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ, BSB BSB: And Balaam said to God, “Balak son of Zippor, king of Moab, sent me this message:
11 ULB <ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು>>> ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. BSB BSB: ‘Behold, a people has come out of Egypt, and they cover the face of the land. Now come and put a curse on them for me. Perhaps I may be able to fight against them and drive them away.’”
12 ULB ಅದಕ್ಕೆ ದೇವರು ಬಿಳಾಮನಿಗೆ, <<ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು>> ಎಂದು ಹೇಳಿದನು. BSB BSB: But God said to Balaam, “Do not go with them. You are not to curse this people, for they are blessed.”
13 ULB ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, <<ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ>> ಎಂದು ಹೇಳಿದನು. BSB BSB: So Balaam got up the next morning and said to Balak’s princes, “Go back to your homeland, because the LORD has refused to let me go with you.”
14 ULB ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, <<ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ>> ಎಂದು ತಿಳಿಸಿದರು. BSB BSB: And the princes of Moab arose, returned to Balak, and said, “Balaam refused to come with us.”
15 ULB ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು. BSB BSB: Then Balak sent other princes, more numerous and more distinguished than the first messengers.
16 ULB ಇವರು ಬಿಳಾಮನ ಬಳಿಗೆ ಬಂದು ಅವನಿಗೆ, <<ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, <ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ. BSB BSB: They came to Balaam and said, “This is what Balak son of Zippor says: ‘Please let nothing hinder you from coming to me,
17 ULB ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು>>> ಎಂದನು. BSB BSB: for I will honor you richly and do whatever you say. So please come and put a curse on this people for me!’”
18 ULB ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, <<ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು. BSB BSB: But Balaam replied to the servants of Balak, “If Balak were to give me his house full of silver and gold, I could not do anything small or great to go beyond the command of the LORD my God.
19 ULB ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ>> ಎಂದು ಉತ್ತರಕೊಟ್ಟನು. BSB BSB: So now, please stay here overnight as the others did, that I may find out what else the LORD has to tell me.”
20 ULB ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, <<ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು>> ಎಂದನು. BSB BSB: That night God came to Balaam and said, “Since these men have come to summon you, get up and go with them, but you must only do what I tell you.”
21 ULB ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು. BSB BSB: So in the morning Balaam got up, saddled his donkey, and went with the princes of Moab.
22 ULB ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. BSB BSB: Then God’s anger was kindled because Balaam was going along, and the angel of the LORD stood in the road to oppose him. Balaam was riding his donkey, and his two servants were with him.
23 ULB ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು. BSB BSB: When the donkey saw the angel of the LORD standing in the road with a drawn sword in his hand, she turned off the path and went into a field. So Balaam beat her to return her to the path.
24 ULB ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು. BSB BSB: Then the angel of the LORD stood in a narrow passage between two vineyards, with walls on either side.
25 ULB ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು. BSB BSB: And the donkey saw the angel of the LORD and pressed herself against the wall, crushing Balaam’s foot against it. So he beat her once again.
26 ULB ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು. BSB BSB: And the angel of the LORD moved on ahead and stood in a narrow place where there was no room to turn to the right or left.
27 ULB ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು. BSB BSB: When the donkey saw the angel of the LORD, she lay down under Balaam, and he became furious and beat her with his staff.
28 ULB ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, <<ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ>> ಎಂದು ಕೇಳಿತು. BSB BSB: Then the LORD opened the donkey’s mouth, and she said to Balaam, “What have I done to you that you have beaten me these three times?”
29 ULB ಅದಕ್ಕೆ ಬಿಳಾಮನು ಕತ್ತೆಗೆ, <<ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ>> ಎಂದನು. BSB BSB: Balaam answered the donkey, “You have made a fool of me! If I had a sword in my hand, I would kill you right now!”
30 ULB ಅದಕ್ಕೆ ಆ ಕತ್ತೆಯು ಬಿಳಾಮನಿಗೆ, <<ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?>> ಎಂದಾಗ ಬಿಳಾಮನು <<ಇಲ್ಲ>> ಎಂದನು. BSB BSB: But the donkey said to Balaam, “Am I not the donkey you have ridden all your life until today? Have I ever treated you this way before?” “No,” he replied.
31 ULB ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು. BSB BSB: Then the LORD opened Balaam’s eyes, and he saw the angel of the LORD standing in the road with a drawn sword in his hand. And Balaam bowed low and fell facedown.
32 ULB ಯೆಹೋವನ ದೂತನು ಅವನಿಗೆ, <<ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ. BSB BSB: The angel of the LORD asked him, “Why have you beaten your donkey these three times? Behold, I have come out to oppose you, because your way is perverse before me.
33 ULB ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು>> ಎಂದು ಹೇಳಿದನು. BSB BSB: The donkey saw me and turned away from me these three times. If she had not turned away, then by now I would surely have killed you and let her live.”
34 ULB ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, <<ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ>> ಎಂದನು. BSB BSB: “I have sinned,” Balaam said to the angel of the LORD, “for I did not realize that you were standing in the road to confront me. And now, if this is displeasing in your sight, I will go back home.”
35 ULB ಯೆಹೋವನ ದೂತನು ಬಿಳಾಮನಿಗೆ, <<ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು>> ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು. BSB BSB: But the angel of the LORD said to Balaam, “Go with the men, but you are to speak only what I tell you.” So Balaam went with the princes of Balak.
36 ULB ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು. BSB BSB: When Balak heard that Balaam was coming, he went out to meet him at the Moabite city on the Arnon border, at the edge of his territory.
37 ULB ಬಾಲಾಕನು ಬಿಳಾಮನನ್ನು ಕಂಡಾಗ, <<ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?>> ಎಂದನು. BSB BSB: And he said to Balaam, “Did I not send you an urgent summons? Why did you not come to me? Am I really not able to reward you richly?”
38 ULB ಅದಕ್ಕೆ ಬಿಳಾಮನು ಬಾಲಾಕನಿಗೆ, <<ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು>> ಎಂದು ಹೇಳಿದನು. BSB BSB: “See, I have come to you,” Balaam replied, “but can I say just anything? I must speak only the word that God puts in my mouth.”
39 ULB ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು. BSB BSB: So Balaam accompanied Balak, and they came to Kiriath-huzoth.
40 ULB ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು. BSB BSB: Balak sacrificed cattle and sheep, and he gave portions to Balaam and the princes who were with him.
41 ULB ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು <<ಬಾಳ್>> ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು. BSB BSB: The next morning, Balak took Balaam and brought him up to Bamoth-baal. From there he could see the outskirts of the camp of the people.
Select verses for actions: Enter goes to them and Escape comes back.