1 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: Then the LORD said to Moses,
2 ULB <<ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು. BSB BSB: “Command the Israelites to send away from the camp anyone with a skin disease, anyone who has a bodily discharge, and anyone who is defiled by a dead body.
3 ULB ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.>> BSB BSB: You must send away male and female alike; send them outside the camp so they will not defile their camp, where I dwell among them.”
4 ULB ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು. BSB BSB: So the Israelites did this, sending such people outside the camp. They did just as the LORD had instructed Moses.
5 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: And the LORD said to Moses,
6 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ, BSB BSB: “Tell the Israelites that when a man or woman acts unfaithfully against the LORD by committing any sin against another, that person is guilty
7 ULB ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು. BSB BSB: and must confess the sin he has committed. He must make full restitution, add a fifth to its value, and give all this to the one he has wronged.
8 ULB <<ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು. BSB BSB: But if the man has no relative to whom restitution can be made for the wrong, the restitution belongs to the LORD and must be given to the priest along with the ram of atonement, by which the atonement is made for him.
9 ULB ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು. BSB BSB: Every sacred contribution the Israelites bring to the priest shall belong to him.
10 ULB ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.>> BSB BSB: Each man’s sacred gifts are his own, but whatever he gives to the priest will belong to the priest.”
11 ULB ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, BSB BSB: Then the LORD said to Moses,
12 ULB <<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: <ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ, BSB BSB: “Speak to the Israelites and tell them that if any man’s wife goes astray and is unfaithful to him
13 ULB ಯಾರ ಕೈಗೆ ಸಿಕ್ಕದೆಯೂ ಸಾಕ್ಷಿ ಇಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗಮಿಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲಿ, BSB BSB: by sleeping with another man, and it is concealed from her husband and her impurity is undetected (since there is no witness against her and she was not caught in the act),
14 ULB ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ, BSB BSB: and if a feeling of jealousy comes over her husband and he suspects his wife who has defiled herself—or if a feeling of jealousy comes over him and he suspects her even though she has not defiled herself—
15 ULB ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು. BSB BSB: then he is to bring his wife to the priest. He must also bring for her an offering of a tenth of an ephah of barley flour. He is not to pour oil over it or put frankincense on it, because it is a grain offering for jealousy, an offering of memorial as a reminder of iniquity.
16 ULB << <ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು. BSB BSB: The priest is to bring the wife forward and have her stand before the LORD.
17 ULB ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು. BSB BSB: Then he is to take some holy water in a clay jar and put some of the dust from the tabernacle floor into the water.
18 ULB ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು. BSB BSB: After the priest has the woman stand before the LORD, he is to let down her hair and place in her hands the grain offering of memorial, which is the grain offering for jealousy. The priest is to hold the bitter water that brings a curse.
19 ULB ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, <<ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ. BSB BSB: And he is to put the woman under oath and say to her, ‘If no other man has slept with you and you have not gone astray and become defiled while under your husband’s authority, may you be immune to this bitter water that brings a curse.
20 ULB ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,>> BSB BSB: But if you have gone astray while under your husband’s authority and have defiled yourself and lain carnally with a man other than your husband’—
21 ULB <<ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ. BSB BSB: and the priest shall have the woman swear under the oath of the curse—‘then may the LORD make you an attested curse among your people by making your thigh shrivel and your belly swell.
22 ULB ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.>> ಅದಕ್ಕೆ ಆ ಸ್ತ್ರೀಯು, <<ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ>> ಎಂದು ಹೇಳಬೇಕು. BSB BSB: May this water that brings a curse enter your stomach and cause your belly to swell and your thigh to shrivel.’ Then the woman is to say, ‘Amen, Amen.’
23 ULB << <ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು. BSB BSB: And the priest shall write these curses on a scroll and wash them off into the bitter water.
24 ULB ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು. BSB BSB: He is to have the woman drink the bitter water that brings a curse, and it will enter her and may cause her bitter suffering.
25 ULB ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು. BSB BSB: The priest shall take from her hand the grain offering for jealousy, wave it before the LORD, and bring it to the altar.
26 ULB ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು. BSB BSB: Then the priest is to take a handful of the grain offering as a memorial portion and burn it on the altar; after that he is to have the woman drink the water.
27 ULB ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು. BSB BSB: When he has made her drink the water, if she has defiled herself and been unfaithful to her husband, then the water that brings a curse will enter her and cause bitter suffering; her belly will swell, her thigh will shrivel, and she will become accursed among her people.
28 ULB ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು. BSB BSB: But if the woman has not defiled herself and is clean, she will be unaffected and able to conceive children.
29 ULB ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ. BSB BSB: This is the law of jealousy when a wife goes astray and defiles herself while under her husband’s authority,
30 ULB ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು. BSB BSB: or when a feeling of jealousy comes over a husband and he suspects his wife. He is to have the woman stand before the LORD, and the priest is to apply to her this entire law.
31 ULB ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.>>> BSB BSB: The husband will be free from guilt, but the woman shall bear her iniquity.”
Select verses for actions: Enter goes to them and Escape comes back.